ಒಂದೇ ಕುಟುಂಬದ ಮೂವರ ಶವ ಪತ್ತೆಯಾಗಿದ್ದು ಪೊಲೀಸರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಘಟನೆ ಬಂಎಗಳೂರು ನಗರದ ಮಹಾಲಕ್ಷ್ಮೀ ಲೇಔಟ್‌ನಲ್ಲಿ ನಡೆದಿದೆ.
ಯಶೋಧಾ(70), ಸುಮನಾ(41), ನರೇಶ್(36) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದ್ದು ಮೂವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ.
ಮೂವರು ಮಕ್ಕಳ ಪೈಕಿ ಯಶೋಧಾ ತನ್ನ ದ್ವಿತೀಯ ಪುತ್ರಿ ಸುಮನಾ ಹಾಗೂ ಗುತ್ತಿಗೆದಾರ ನರೇಶ್ ಜೊತೆ ಮಹಾಲಕ್ಷ್ಮೀ ಲೇಔಟ್‌ನಲ್ಲಿ ವಾಸವಿದ್ದರು. ಹಿರಿಯ ಮಗಳು ತಮ್ಮ ತಾಯಿಗೆ ಅನೇಕ ಬಾರಿ ಕರೆ ಮಾಡಿದಾಗ ಕರೆ ಸ್ವೀಕರಿಸದಿದ್ದಾಗ ಗಾಬರಿಗೊಂಡು ಮನೆ ಬಳಿ ಬಂದು ಪರಿಶೀಲಿಸಿದಾಗ ಮೂವರ ಮೃತದೇಹಗಳು ಕಂಡು ಬಂದಿವೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನ ಪರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಪ್ರಕರಣವನ್ನ ದಾಖಲಿಸಿಕೊಂಡು ಆತ್ಮಹತ್ಯೆಯ ಅಥವಾ ಬೇರೆ ಇರಬಹುದ ಎಂದು ತನಿಖೆ ನಡೆಸುತ್ತಿದ್ದಾರೆ.