ನೆಲಮಂಗಲ: ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ದಂಪತಿಯನ್ನು ಮೊದಲ ಮಗು ಅಗಲಿರುವ ಹೃದಯವಿದ್ರಾವಕ ಘಟನೆ ನೆಲಮಂಗಲದ(Nelamangala) ಗಿಡ್ಡೆನಹಳ್ಳಿಯಲ್ಲಿ ನಡೆದಿದೆ. ಲಕ್ಷ್ಮೀರ್ (3) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.

ಮೃತ ಮಗು ಜೆ.ಪಿ ನಗರ ನಿವಾಸಿಗಳಾದ ಸ್ವಾತಿ ಹಾಗೂ ಚರಣ್ ರಾಜ್ ದಂಪತಿಯ ಪುತ್ರ. ಚರಣ್ ರಾಜ್ ಒಂದು ವಾರದ ಹಿಂದೆ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಿದ್ದರು. ಇತ್ತ ತಾಯಿ ಎರಡನೇ ಮಗುವಿನ ನಿರೀಕ್ಷೆಯಲ್ಲಿ ಫೋಟೋಶೂಟ್ ಮಾಡಿಸಲು ಮುಂದಾಗಿದ್ದರು.

ತಾಯಿ ಸ್ವಾತಿ ಫೋಟೋಶೂಟ್ ಮಾಡಿಸಲು ಸ್ನೇಹಿತೆಯೊಂದಿಗೆ ಘಟನಾ ಸ್ಥಳಕ್ಕೆ ಬಂದಿದ್ದರು. ಫೋಟೋಶೂಟ್ ಮಾಡಿಸುತ್ತಿದ್ದ ವೇಳೆ ಆಟವಾಡುತ್ತಿದ್ದ ಮಗು ಸಮೀಪದಲ್ಲಿದ್ದ ನೀರಿನ ಪೂಲ್‌ಗೆ ಬಿದ್ದು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ಮಗುವಿನ ಮೇಲಿನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ.

ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತಂದೆ ಆಗಮಿಸಿದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ






