ಕೊಪ್ಪಳ,:ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಕಾನ್ಸ್ಟೇಬಲ್ (Constable) ಮೇಲೆ ಪುಂಡರಿಂದ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸದ್ಯ ಸ್ಥಳೀಯರ ಸಹಕಾರದಿಂದ ಪೊಲೀಸರು ಹಲ್ಲೆ ಮಾಡಿದ ರೌಡಿಶೀಟರ್ ಅರ್ಬಾಜ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಗಂಗಾವತಿ ಹೊರವಲಯದಲ್ಲಿ ಪುಂಡರು ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು. ಅದನ್ನು ತಡೆಯಲು ಮುಂದಾದ ಗಂಗಾವತಿ ಗ್ರಾಮಾಂತರ ಠಾಣೆ ಕಾನ್ಸ್ಟೇಬಲ್ ಬಸವರಾಜುಗೆ ಥಳಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಮತ್ತೊಬ್ಬ ಕಾನ್ಸ್ಟೇಬಲ್ ಮೇಲೂ ಹಲ್ಲೆಗೆ ಪ್ರಯತ್ನ ಮಾಡಲಾಗಿದೆ. ಸದ್ಯ ಕಾನ್ಸ್ಟೇಬಲ್ ಬಸವರಾಜುವನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ವ್ಹೀಲಿಂಗ್ ಮಾಡುತ್ತಿದ್ದ ಮತಾಂಧ ಕಿಡಿಗೇಡಿಗಳನ್ನು ತಡೆದು ನಿಲ್ಲಿಸಿದ ಕಾರಣಕ್ಕೆ ಪೊಲೀಸರ ಮೇಲೆಯೇ ಪುಂಡರು ಹಲ್ಲೆ ಮಾಡಿದ್ದಾರೆ.
— BJP Karnataka (@BJP4Karnataka) October 10, 2024
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ಬಳಿ ಮತಾಂಧ ರೌಡಿಶೀಟರ್ ಅರ್ಬಾಜ್ ಸೇರಿದಂತೆ ಮೂವರು ಸೇರಿಕೊಂಡು ಇಬ್ಬರು ಕಾನ್ಸ್ಟೇಬಲ್ ಮೇಲೆ ಹಲ್ಲೆ ಮಾಡಿದ್ದಾರೆ.@INCKarnataka… pic.twitter.com/b2QitNbU4Z
ವಶಕ್ಕೆ ಪಡೆದವರನ್ನು ಗಂಗಾವತಿ ಗ್ರಾಮೀಣ ಠಾಣೆಗೆ ಪೊಲೀಸರು ಕರೆತಂದಿದ್ದಾರೆ. ರೌಡಿಶೀಟರ್ ಅರ್ಬಾಜ್ಈ ಹಿಂದೆ ಕೂಡ ಪೊಲೀಸರ ಮೇಲೆ ಹಲ್ಲೆ ಮಾಡಿದ್ದ. ಸದ್ಯ ಪೊಲೀಸರ ಮೇಲೆಯೇ ಹಲ್ಲೆ ಯತ್ನಿಸಿದ ಪುಂಡರ ವಿರುದ್ಧ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.