• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕುಮಾರಸ್ವಾಮಿ ಚದುರಂಗದಾಟದಿಂದ ಚನ್ನಪಟ್ಣಣದಲ್ಲಿ ನಿಖಿಲ್ ಗೆ ಟಿಕೆಟ್: ಡಿ.ಕೆ.ಸುರೇಶ್

ಪ್ರತಿಧ್ವನಿ by ಪ್ರತಿಧ್ವನಿ
October 25, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

“ನಿಖಿಲ್ ಅವರಿಗೆ ಚನ್ನಪಟ್ಟಣ ಟಿಕೆಟ್ ಸಿಗುವಂತೆ ಮಾಡಲು ಕುಮಾರಸ್ವಾಮಿ ಅವರು ಚದುರಂಗದಾಟ ಸೃಷ್ಟಿಸಿದರು” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಸುರೇಶ್ ಅವರು ಮಾತನಾಡಿದರು.

ADVERTISEMENT

ನಿಖಿಲ್ ಗೆ ಟಿಕೆಟ್ ನೀಡಬೇಕಾದ ಅನಿವಾರ್ಯತೆಯನ್ನು ಕಾಂಗ್ರೆಸ್ ಸೃಷ್ಟಿ ಮಾಡಿತು ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಹಿರಿಯ ರಾಜಕಾರಣಿಯಾದ ಕುಮಾರಸ್ವಾಮಿ ಅವರು ಕಳೆದ 40 ವರ್ಷಗಳಿಂದ ಅವರ ದೃಷ್ಟಿಕೋನದಲ್ಲಿ ತಂತ್ರಗಾರಿಕೆ ಮಾಡಿಕೊಂಡು ಬಂದಿದ್ದಾರೆ. ಇದರ ಮುಂದುವರೆದ ಭಾಗವಿದು. ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗುತ್ತಾರೆ ಎನ್ನುವುದು ಚನ್ನಪಟ್ಟಣದ ಎಲ್ಲರಿಗೂ ತಿಳಿದಿದ್ದ ಸತ್ಯ” ಎಂದರು

“ನಿಖಿಲ್ ಕುಮಾರಸ್ವಾಮಿ ಅವರೇ ಚನ್ನಪಟ್ಟಣ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗುತ್ತಾರೆ ಎನ್ನುವ ಸತ್ಯ ಎಲ್ಲರಿಗೂ ತಿಳಿದಿತ್ತು. ಜೆಡಿಎಸ್ ಪಕ್ಷಕ್ಕೆ ಕುಮಾರಸ್ವಾಮಿ ಅವರೇ ಅಧಿನಾಯಕರು. ಎಲ್ಲವೂ ಅವರೇ ತೀರ್ಮಾನ ತೆಗೆದುಕೊಳ್ಳುತ್ತಾರೆ. ಬಲವಂತವಾಗಿ ಚುನಾವಣೆಗೆ ನಿಖಿಲ್ ಅವರನ್ನು ನಿಲ್ಲಿಸಲಾಗುತ್ತಿದೆ ಎನ್ನುವುದೆಲ್ಲಾ ಸುಳ್ಳು, ಅವರ ಉದ್ದೇಶ ಈ ಮೂಲಕ ಫಲ ನೀಡಿದೆ” ಎಂದರು.

ಕಣ್ಣೀರಿನ ನಾಟಕ ಪ್ರಾರಂಭವಾಗುತ್ತದೆ

ನಾಟಕ ಮಾಡಿ ನಿಖಿಲ್ ಗೆ ಟಿಕೆಟ್ ಗಳಿಸಿಕೊಂಡರೇ ಎಂದು ಕೇಳಿದಾಗ, “ಅದನ್ನು ಮಾಧ್ಯಮದವರು ಹೇಳಬೇಕು. ನಾಮಪತ್ರ ಸಲ್ಲಿಸಿದ ನಂತರ ನಾಟಕ ಪ್ರಾರಂಭವಾಗುತ್ತದೆ” ಎಂದರು.

ಕಣ್ಣೀರು ಬರುತ್ತದೆಯೇ ಎಂದು ಮರುಪ್ರಶ್ನಿಸಿದಾಗ “ಬರಬಹುದೇನೋ, ಮಾಧ್ಯಮದವರು ಕಣ್ಣೀರು ಹಾಕಿ ಎಂದರೆ ಹಾಕುತ್ತಾರೆ” ಎಂದು ವ್ಯಂಗ್ಯವಾಗಿ ಉತ್ತರಿಸಿದರು.

ನಿಖಿಲ್ ಪ್ರಬಲ ಅಭ್ಯರ್ಥಿಯಾಗಬಲ್ಲರೇ ಎಂದು ಪ್ರಶ್ನಿಸಿದಾಗ, “ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಇದರಿಂದ ಕುಮಾರಸ್ವಾಮಿ ಅವರಿಗೆ ಕಾರ್ಯಕರ್ತರ ಮೇಲಿನ ಪ್ರೀತಿ ಎಷ್ಟಿದೆ ಎಂಬುದು ತಿಳಿಯುತ್ತದೆ. ಚುನಾವಣೆಯಲ್ಲಿ ಒಂದೊಂದು ಮತವೂ ಮುಖ್ಯ ಎಂದು ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಯಾರು ಪ್ರಭಾವಿಗಳು ಎನ್ನುವುದಕ್ಕಿಂತ, ನಾವು ಪಕ್ಷವನ್ನು ಗೆಲ್ಲಿಸಲು ಹೋರಾಟ ಮಾಡುತ್ತೇವೆ” ಎಂದರು.

ದೇವೇಗೌಡರು ಇರುವುದೇ ಪ್ರಚಾರಕ್ಕೆ

ಒಂದು ವಾರಗಳ ಕಾಲ ದೇವೇಗೌಡರು ಚನ್ನಪಟ್ಟಣದಲ್ಲಿ ಪ್ರಚಾರ ಮಾಡುವುದುರಿಂದ ಕಾಂಗ್ರೆಸ್ ಗೆಲುವಿಗೆ ತೊಡಕಾಗುವುದಿಲ್ಲವೇ ಎಂದಾಗ “ದೇವೇಗೌಡರು ಇರುವುದೇ ಪ್ರಚಾರ ಮಾಡುವುದಕ್ಕೆ. ಅವರ ಮೊಮ್ಮಗನ ಪರವಾಗಿ ಪ್ರಚಾರ ಮಾಡಬೇಡಿ ಎಂದು ಹೇಳಲು ಆಗುತ್ತದೆಯೇ?. ನಾವು ನಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗುತ್ತೇವೆ” ಎಂದು ಹೇಳಿದರು.

ನೀವು ಅಭ್ಯರ್ಥಿಯಾಗಿಲ್ಲ ಎನ್ನುವ ಬೇಸರ ಹಾಗೂ ಪಕ್ಷದೊಳಗಿನ ಅಸಮಾಧಾನ ಸರಿಹೋಯಿತೇ ಎಂದು ಕೇಳಿದಾಗ “ಪಕ್ಷದಲ್ಲಿ ಸಣ್ಣ ಬೇಸರವಿದೆ ಹೊರತು ಯಾವುದೇ ಅಸಮಾಧಾನವಿಲ್ಲ. ನಾನು ಮೊದಲಿನಿಂದಲೂ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೇ, ಮಾಧ್ಯಮದವರೇ ನನ್ನ ಹೀರೋ ಮಾಡುತ್ತಿದ್ದಾರೆ” ಎಂದರು.

ಯಾರೇ ಪಕ್ಷಕ್ಕೂ ಬಂದರೂ ಸ್ವಾಗತ

ಯೋಗೇಶ್ವರ್ ಅವರು ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಸೇರಿದಂತೆ ಬೇರೆ ಪಕ್ಷದವರ ಆಪರೇಷನ್ ಆಗುತ್ತದೆಯೇ ಎಂದು ಕೇಳಿದಾಗ, “ನಮ್ಮ ಸರ್ಕಾರಕ್ಕೆ ಸಂಖ್ಯೆಯ ಅವಶ್ಯಕತೆಯಿಲ್ಲ. ಯಾರೇ ಪಕ್ಷಕ್ಕೂ ಬಂದರೂ ಸ್ವಾಗತಿಸುತ್ತೇವೆ” ಎಂದರು.

ಚನ್ನಪಟ್ಟಣದ ಬಿಜೆಪಿ, ಜೆಡಿಎಸ್ ನ ಎರಡನೇ ಸಾಲಿನ ನಾಯಕರು ಕಾಂಗ್ರೆಸ್ ಸಂಪರ್ಕದಲ್ಲಿ ಇದ್ದಾರೆಯೇ ಎಂದು ಕೇಳಿದಾಗ “ಇದು ಚುನಾವಣಾ ತಂತ್ರದ ಒಂದು ಭಾಗ. ಇದನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಈಗಾಗಲೇ ಅನೇಕರು ಪಕ್ಷ ಸೇರಿದ್ದಾರೆ. ನಮ್ಮ ಪಕ್ಷದ ಸಿದ್ದಾಂತ ಒಪ್ಪಿ ಬಂದವರನ್ನು ಸೇರಿಸಿಕೊಳ್ಳಲಾಗುವುದು” ಎಂದು ತಿಳಿಸಿದರು.

ಚನ್ನಪಟ್ಟಣ ಕ್ಷೇತ್ರದಲ್ಲಿ ಗೆಲುವು ಕಷ್ಟವಾಗಲಿದೆಯೇ ಎಂದು ಕೇಳಿದಾಗ, “ಮಾಧ್ಯಮದವರು ನಮ್ಮ ಪರವಾಗಿ ಇರಬೇಕು. ನೀವು ನಿಷ್ಪಕ್ಷಪಾತವಾಗಿ ನಮ್ಮ ಜೊತೆ ಇರಬೇಕು. ಗೆಲ್ಲುವುದು ಖಚಿತ ಎಂದಿನಿಸುತ್ತಿದೆ” ಎಂದರು.

ಶಿಗ್ಗಾವಿಯಲ್ಲಿ ಕಾಂಗ್ರೆಸ್ ಬಂಡಾಯ ಏಳುವ ಸನ್ನಿವೇಶ ಉಂಟಾಗಿದೆ ಹಾಗೂ ಪಂಚಮಸಾಲಿ ಸಮುದಾಯಕ್ಕೆ ಟಿಕೆಟ್ ನೀಡಬೇಕು, ಈ ಹಿಂದೆ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಿದರು ಗೆಲ್ಲಲು ಸಾಧ್ಯವಾಗಿಲ್ಲ ಎನ್ನುವ ಕೂಗಿನ ಬಗ್ಗೆ ಕೇಳಿದಾಗ, “ಆಯಾ ಕ್ಷೇತ್ರದಲ್ಲಿ ಉಂಟಾಗಿರುವ ಅಸಮಾಧಾನವನ್ನು ನಮ್ಮ ನಾಯಕರು ಸರಿಪಡಿಸಲಿದ್ದಾರೆ. ಒಬ್ಬೊಬ್ಬರದು ಒಂದೊಂದು ಅಭಿಪ್ರಾಯವಿರುತ್ತದೆ. ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಅವರ ಮಗನಿಗೆ ಏಕೆ ಟಿಕೆಟ್ ನೀಡಿದ್ದಾರೆ? ಇಲ್ಲೆಲ್ಲಾ ಕಾರ್ಯಕರ್ತರಿಗೆ ಏಕೆ ಟಿಕೆಟ್ ನೀಡಿಲ್ಲ. ಯಾರೇ ಸ್ಪರ್ಧಿಸಿದರು ಚುನಾವಣೆಯಲ್ಲಿ ಗೆಲುವು ಮುಖ್ಯ. ಪಕ್ಷದ ನೆಲೆಗಟ್ಟಿನ ದೃಷ್ಟಿಯಲ್ಲಿ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನಗಳು ಹಾಗೂ ಜಾತ್ಯಾತೀತ ತತ್ವ ಹಾಗೂ ಪಕ್ಷದ ಸಿದ್ದಾಂತಗಳನ್ನು ಉಳಿಸಿಕೊಂಡು ಕೆಲಸ ಮಾಡಬೇಕಾಗುತ್ತದೆ” ಎಂದರು.

ಶಿಗ್ಗಾವಿಯಲ್ಲಿ ಸೋತ ಅಭ್ಯರ್ಥಿಗೆ ಟಿಕೆಟ್ ನೀಡಿದ್ದು ಹೊಂದಾಣಿಕೆ ರಾಜಕಾರಣವೇ ಎಂದಾಗ, “ಈ ಪ್ರಶ್ನೆಯನ್ನು ಪಕ್ಷದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳನ್ನು ಕೇಳಬೇಕು. ನಮ್ಮಲ್ಲಿ ಯಾವುದೇ ಹೊಂದಾಣಿಕೆಯಿಲ್ಲ. ಸೋತ ಅಭ್ಯರ್ಥಿಗೆ ಟಿಕೆಟ್ ನೀಡಬಾರದು ಎನ್ನುವುದೇನಿಲ್ಲವಲ್ಲ. ನಾಲ್ಕೈದು ಬಾರಿ ಸೋತವರೇ ಮುಖ್ಯಮಂತ್ರಿಗಳಾದ ಉದಾಹರಣೆ ನಮ್ಮ ಮುಂದಿದೆ” ಎಂದರು.

ಚುನಾವಣಾ ಪ್ರಚಾರಕ್ಕೆ ಕೇಂದ್ರ ನಾಯಕರು ಬರಲಿದ್ದಾರೆಯೇ ಎಂದಾಗ “ಸಿದ್ದರಾಮಯ್ಯ ಅವರು ಹಾಗೂ ಡಿ.ಕೆ.ಶಿವಕುಮಾರ್ ಅವರು ಹಾಗೂ ನಮ್ಮ ರಾಜ್ಯದ ನಾಯಕರು ಪ್ರಚಾರ ಮಾಡಲಿದ್ದಾರೆ” ಎಂದರು.

ಹೊಣೆ ನಾನೇ ಹೊತ್ತಿದ್ದೇನೆ

ಯೋಗೇಶ್ವರ್ ಅವರಿಗೆ ನೀವೇ ಸಾಥ್ ಕೊಡುತ್ತಿದ್ದೀರಿ ಎಂದಾಗ “ಯಾರಾದರೊಬ್ಬರು ಸಾಥ್ ನೀಡಲೇ ಬೇಕಲ್ಲವೇ? ಚುನಾವಣಾ ಹೊಣೆಯನ್ನು ನಾನೇ ಹೊತ್ತಿದ್ದೇನೆ” ಎಂದರು.

ಬೆಂಗಳೂರು ಗ್ರಾಮಾಂತರ ಬಿಟ್ಟ ಕ್ಷಣದಿಂದ ಸಂತೋಷವಾಗಿದ್ದೇನೆ. ಬೇರೆಯವರು ಅವರ ಆಸ್ತಿ ಎಂದು ತಿಳಿದುಕೊಂಡಿರುವಂತೆ, ಕ್ಷೇತ್ರ ನಮ್ಮ ಅಪ್ಪನ ಆಸ್ತಿಯಲ್ಲ. ಕೆಲಸ ಮಾಡಲು ಸಾರ್ವಜನಿಕರು ಕೊಟ್ಟಿರುವ ಕೊಡುಗೆ. ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಈಗ ಬೇಡ ಎಂದು ಹೇಳಿದ್ದಾರೆ, ಅದನ್ನು ಮುಕ್ತ ಕಂಠದಿಂದ ಸ್ವಾಗತ ಮಾಡಿದ್ದೇನೆ” ಎಂದರು.

ಬೆಂಗಳೂರು ಗ್ರಾಮಾಂತರದ ಸೋಲನ್ನು ಅರಗಿಸಿಕೊಳ್ಳಲು ಆಗಿಲ್ಲ ಎನ್ನುವ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಕೇಳಿದಾಗ “ಅವರು ಪಕ್ಷದ ಅಧ್ಯಕ್ಷರಾದ ಕಾರಣ ಅವರಿಗೆ ಜವಾಬ್ದಾರಿ ಇರುತ್ತದೆ. ಅದರಂತೆ ಮಾತನಾಡಿದ್ದಾರೆ. ನಾನು ರಿಲ್ಯಾಕ್ಸ್ ಮೂಡ್ ನಲ್ಲಿ ಇದ್ದೇನೆ” ಎಂದರು.

ಸಂಸದ ಸ್ಥಾನ ಸೋತರೂ ಖುಷಿಯಲ್ಲಿದ್ದೀರಿ ಎಂದು ಕೇಳಿದಾಗ “ನಾನು ಮೊದಲು ಸಿಟ್ಟಿನಲ್ಲಿ ಇರುತ್ತಿದ್ದೆ ಎಂದು ಕಾರ್ಯಕರ್ತರು ಹೇಳುತ್ತಿದ್ದರು. ಈಗ ಸೋತ ನಂತರ ಖುಷಿಯಲ್ಲಿದ್ದೇನೆ. ಮೊದಲು ನಿಮ್ಮನ್ನು ಮಾತನಾಡಿಸಲು ಭಯವಾಗುತ್ತಿತ್ತು ಎಂದು ಇದರ ಬಗ್ಗೆ ನಮ್ಮ ಮುಖಂಡರೇ ಹೇಳಿದ್ದಾರೆ” ಎಂದರು.

ಸೋಮಶೇಖರ್ ಬಳಿ ಮಾತನಾಡಿರಬಹುದು

ಎಂಟು ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಿಲಿದ್ದಾರೆ ಎನ್ನುವ ಎಸ್.ಟಿ.ಸೋಮಶೇಖರ್ ಅವರ ಹೇಳಿಕೆಯ ಬಗ್ಗೆ ಕೇಳಿದಾಗ “ಈ ತರಹದ ನಡವಳಿಕೆ ಇರಬಹುದೇನೋ, ಸೋಮಶೇಖರ್ ಅವರ ಬಳಿ ಮಾತನಾಡಿರಬಹುದು ಎನಿಸುತ್ತದೆ” ಎಂದು ಹೇಳಿದರು.

ಶಾಸಕ ಸತೀಶ್ ಸೈಲ್ ಅವರ ಬಂಧನದ ಬಗ್ಗೆ ಕೇಳಿದಾಗ “ಹಳೆಯ ಪ್ರಕರಣದಲ್ಲಿ ನ್ಯಾಯಲಯದ ತೀರ್ಪು ಬಂದ ಕಾರಣಕ್ಕೆ ಬಂಧಿಸಲಾಗಿದೆ. ಅವರು ನ್ಯಾಯಲಯಕ್ಕೆ ಮೇಲ್ಮನವಿ ಸಲ್ಲಿಸಬಹುದು ಎಂದು ಭಾವಿಸಿದ್ದೇನೆ” ಎಂದು ಹೇಳಿದರು.

Tags: ashwath narayanBJPBy electionchannapattanaCongress PartyDK Shivakumardk sureshhd kumarswamyNikhil KumarswamyR AshokShiggaosiddaramaiahಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

“ಬಘೀರ” ಚಿತ್ರದ “ಪರಿಚಯವಾದೆ..” ಎರಡನೇ ಹಾಡು ಬಿಡುಗಡೆ

Next Post

ಅಂದು ಮೋದಿಗೆ ಬೈದ ಕುಮಾರಸ್ವಾಮಿ ಇಂದು ವಿಡಿಯೋ ವೈರಲ್..!‌

Related Posts

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?
ಇದೀಗ

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

by ಪ್ರತಿಧ್ವನಿ
January 18, 2026
0

ಬೆಂಗಳೂರು : ಬಿಗ್‌ ಬಾಸ್‌ ಸೀಸನ್‌ 12ರ ಗ್ರ್ಯಾಂಡ್‌ ಫಿನಾಲೆಗೆ ಕ್ಷಣಗಣನೆ ಶುರುವಾಗಿದ್ದು, ವಿನ್ನರ್‌ ಯಾರಾಗಲಿದ್ದಾರೆ ಎಂಬುವುದು ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಈಗಾಗಲೇ ಸ್ಪರ್ಧಿಗಳ ಅಭಿಮಾನಿಗಳು...

Read moreDetails
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
Next Post

ಅಂದು ಮೋದಿಗೆ ಬೈದ ಕುಮಾರಸ್ವಾಮಿ ಇಂದು ವಿಡಿಯೋ ವೈರಲ್..!‌

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada