ಮೈಸೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಹುಲಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲೋಕೇಶ್ ನಾಯಕ ಎಂಬುವರ ಪತ್ನಿ ಶಿವಮಲ್ಲಮ್ಮ (೩೬) ಹುಲಿ ದಾಳಿಯಿಂದ ಗಂಭೀರ ಗಾಯಗೊಂಡವರು. ಪತಿ ಲೋಕೇಶ್ ನಾಯಕ ಹುಲಿಯಿಂದ ರಕ್ಷಣೆ ಮಾಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಹೆಡಿಯಾಲ ಭಾಗದಲ್ಲಿ ಹುಲಿ ದಾಳಿಗೆ ವ್ಯಕ್ತಿ ಒಬ್ಬ ಬಲಿಯಾಗಿದ್ದ ಘಟನೆ ಮಾಸುವ ಮುನ್ನವೇ ಮತ್ತೆ ಹುಲಿ ಮಹಿಳೆ ಮೇಲೆ ದಾಳಿ ನಡೆಸಿದೆ. ಇದರಿಂದ ಗ್ರಾಮಸ್ಥರು ಭಿಯಭೀತರಾಗಿದ್ದಾರೆ.
ಇಷ್ಟೆಲ್ಲ ಘಟನೆ ನಡೆದರೂ ಹುಲಿ ಸೆರೆ ಹಿಡಿಯದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೋನು ಇಟ್ಟು ಹುಲಿ ಸೆರೆ ಹಿಡಿಯಲಾಗುವುದು ಎಂಬ ಭರವಸೆ ನೀಡಿದ್ದಾರೆ.
ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!
ಹಲವು ವಿಶೇಷಗಳಿಗೆ ಹೆಸರಾಗಿರುವ ಬೆಂಗಳೂರಿನಲ್ಲಿ ಜನವರಿ 20ರಂದು ಮತ್ತೊಂದು ವಿಶೇಷ ನಡೆಯಲಿದೆ. ಹೆಸರಾಂತ "JAM JUNXION" ವತಿಯಿಂದ ಶ್ರೀ ಅವರು ಬೆಂಗಳೂರಿನ ಥಣಿಸಂದ್ರದ ಭಾರತೀಯ ಮಾಲ್ ನಲ್ಲಿ...
Read moreDetails









