• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪುನೀತ್‌ ರಾಜ್‌ಕುಮಾರ್‌ ಅಕಾಲಿಕ ನಿಧನ: ಬೆಂಗಳೂರಿನಲ್ಲಿ ಹೆಚ್ಚಿದ ಪೊಲೀಸ್‌ ಬಂದೋಬಸ್ತ್‌!

Any Mind by Any Mind
October 29, 2021
in ಕರ್ನಾಟಕ
0
ಪುನೀತ್‌ ರಾಜ್‌ಕುಮಾರ್‌ ಅಕಾಲಿಕ ನಿಧನ: ಬೆಂಗಳೂರಿನಲ್ಲಿ ಹೆಚ್ಚಿದ ಪೊಲೀಸ್‌ ಬಂದೋಬಸ್ತ್‌!
Share on WhatsAppShare on FacebookShare on Telegram

ಕನ್ನಡದ ಪ್ರಮುಖ ನಟ ಪುನೀತ್‌ ರಾಜ್‌ ಕುಮಾರ್‌ ಅಕಾಲಿಕ ಮರಣದ ಬೆನ್ನಲ್ಲೇ ಬೆಂಗಳೂರು ನಗರಾದ್ಯಂತ ಪೊಲೀಸ್‌ ಬಂದೋಬಸ್ತ್‌ ಹೆಚ್ಚಿದೆ. ಶುಕ್ರವಾರ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡ ಬೆನ್ನಲ್ಲಿ ಪುನೀತ್‌ ಅವರನ್ನು ನಗರದ ವಿಕ್ರಮ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಪುನೀತ್‌ ಆಸ್ಪತ್ರೆಯಲ್ಲೇ ಕೊನೆಯುಸಿರು ಎಳೆದಿದ್ದರು.

ADVERTISEMENT

ಪುನೀತ್‌ ಸಾವಿನ ಸುದ್ದಿ ಕೇಳಿ ಆಸ್ಪತ್ರೆ ಮುಂದೆ ಅಭಿಮಾನಿಗಳ ದಂಡೇ ಜಮಾಯಿಸಿತ್ತು. ಪರಿಣಾಮ ವಿಕ್ರಮ್‌ ಆಸ್ಪತ್ರೆ ಇರುವ ವಸಂತ ನಗರ ಸುತ್ತಮುತ್ತ ಟ್ರಾಫಿಕ್‌ ಜಾಮ್‌ ಸೃಷ್ಟಿಯಾಗಿತ್ತು. ಬಳಿಕ ಮೃತದೇಹವನ್ನು ಸದಾಶಿವನಗರದ ಪುನೀತ್‌ ಅವರ ಮನೆಗೆ ರವಾನಿಸಲಾಗಿತ್ತು. ಈ ವೇಳೆ ಆ ಭಾಗದಲ್ಲೂ ರಸ್ತೆ ಸಂಚಾರಕ್ಕೆ ತೊಡಕಾಗಿದೆ.

ತಮ್ಮ ಇಷ್ಟದ ನಟನ ಸಾವಿನ ಸುದ್ದಿ ಕೇಳಿ ಅಭಿಮಾನಿಗಳು ಅಚಾತುರ್ಯ ನಡೆಸಿಯಾರು ಎಂಬ ಆತಂಕದಲ್ಲಿ ಬೆಂಗಳೂರಿನ ಅಲ್ಲಲ್ಲಿ ಪೊಲೀಸರ ತುಕಡಿಗಳು ನಿಯೋಜನಗೊಂಡಿವೆ. ಸಂಚಾರ ಪೋಲಿಸರು ಟ್ರಾಫಿಕ್‌ ನಿರ್ವಹಣೆಯಲ್ಲಿ ತೊಡಗಿದ್ದಾರೆ.

ನಗರಾದ್ಯಂತ 6 ಸಾವಿರ ಪೊಲೀಸರು, ಕೆಎಸ್ಆರ್‌ಪಿ KSRP ಪ್ಲಟೂನ್ ನಿಯೋಜನೆ ಮಾಡಲಾಗಿದ್ದು, ಭಾನುವಾರ ಮಧ್ಯ ರಾತ್ರಿ ವರೆಗೂ ಮದ್ಯ ಮಾರಾಟ ನಿಷೇಧಿಸಲಾಗಿದೆ. ಎಷ್ಟೇ ಜನ ಬಂದ್ರೂ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲಾಗುತ್ತೆ. ಈ ಸಂದರ್ಭದಲ್ಲಿ ಕುಚೇಷ್ಟೇ ಮಾಡಿದ್ರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಕಮಿಷನರ್ ಕಮಲ್ ಪಂಥ್ ಎಚ್ಚರಿಸಿದ್ದಾರೆ.

Dear Bengalureans,
Please don’t believe in any rumours nor engage in any kind of rumour–mongering. Everything is under control in the city. Bengaluru City Police assures peace and law & order in our city.

— ಬೆಂಗಳೂರು ನಗರ ಪೊಲೀಸ್‌ BengaluruCityPolice (@BlrCityPolice) October 29, 2021

ಮದ್ಯ ಮಾರಾಟ ನಿಷೇಧ

ಬೆಂಗಳೂರು ನಗರದಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಅ.31ರ ಮಧ್ಯರಾತ್ರಿ ವರೆಗೆ ಸಂಪೂರ್ಣವಾಗಿ ಮದ್ಯ ಮಾರಾಟ ನಿ‍ಷೇಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್  ಆದೇಶ ಹೊರಡಿಸಿದ್ದು, ತತಕ್ಷಣವೇ ಜಾರಿಗೆ ಬರಲಿದೆ.

ರಾಜ್ಯಾದ್ಯಂತ ಚಿತ್ರಪ್ರದರ್ಶನ ಬಂದ್

ನಟ ಪುನೀತ್ ರಾಜ್ ಕುಮಾರ್ ನಿಧನ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಚಿತ್ರಪ್ರದರ್ಶನವನ್ನು ನಿಲ್ಲಿಸಲಾಗಿದೆ. ಈ ಕುರಿತು ಮೈಸೂರಿನಲ್ಲಿ ಕರ್ನಾಟಕದ ಚಲನಚಿತ್ರ ಪ್ರದರ್ಶಕರ ಮಹಾ ಮಂಡಲ್ ಉಪಾಧ್ಯಕ್ಷ ರಾಜಾರಾಮ್ ಹೇಳಿಕೆ ನೀಡಿದ್ದಾರೆ. ಈಗಾಗಲೇ ಪ್ರಾರಂಭವಾಗಿರುವ ಚಿತ್ರ ಪ್ರದರ್ಶನ ಮುಂದುವರೆಯುತ್ತಿವೆ. 2.30 ಶೋ ಹಾಗೂ 4.30ಯ ನಂತರದ ಶೋಗಳು ಕ್ಯಾನ್ಸಲ್ ಆಗಿವೆ. ಚಿತ್ರರಂಗ ಮೊದಲು ಈ ಶಾಕ್ ನಿಂದ ಹೊರ ಬರಬೇಕು. ಮುಂದೆ ಯಾವಾಗ ಚಿತ್ರ ಪ್ರದರ್ಶನ ಮಾಡಬೇಕು ನೋಡೋಣ. ಪುನೀತ್ ಜೊತೆ ನಾನು ಚಾಮುಂಡಿ ಬೆಟ್ಟ ಹತ್ತಿ ಇಳಿಯುತ್ತಿದ್ದೆ. ಅವರು ಆರೋಗ್ಯದ ಬಗ್ಗೆ ಗಮನ ಹರಿಸುತ್ತಿದ್ದರು. ಅವರಿಗೆ ಈ ರೀತಿ ಆಗಿರೊದು ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ಅವರು ದುಃಖ ವ್ಯಕ್ತಪಡಿಸಿದ್ದಾರೆ.

ಎರಡು ದಿನ ಜಿಮ್ ಸೆಂಟರ್ಗಳು ಬಂದ್

ದೇಹವನ್ನು ದಂಡಿಸುತ್ತಾ, ಆರೋಗ್ಯ ಕಾಪಾಡಿಕೊಂಡು ಬಂದಿದ್ದ ಪುನೀತ್ ಅವರ ಅಕಾಲಿಕ ಸಾವಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಜಿಮ್ ಕೇಂದ್ರಗಳು ಶುಕ್ರವಾರ ಮತ್ತು ಶನಿವಾರ ಬಂದ್ ಮಾಡಿ, ಅಗಲಿದ ಆತ್ಮೀಯ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಲು ನಿರ್ಧರಿಸಿವೆ.

ಪರೀಕ್ಷೆಗಳು ಮುಂದೂಡಿಕೆ

ರಾಜ್ಯದಲ್ಲಿ ಶನಿವಾರ ನಡೆಯಬೇಕಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ ಎಂಬಿಎ ಪರೀಕ್ಷೆಗಳನ್ನು ಮುಂದೂಡಲಾಗಿದೆ. 

Tags: ಚಿತ್ರಪ್ರದರ್ಶನ ಬಂದ್ಪರೀಕ್ಷೆಗಳು ಮುಂದೂಡಿಕೆಪುನೀತ್‌ ರಾಜ್‌ ಕುಮಾರ್ಪೊಲೀಸ್‌ ಇಲಾಖೆಬೆಂಗಳೂರು
Previous Post

‘ಪ್ರತಿಧ್ವನಿ’ ಇಂಪಾಕ್ಟ್ : ರಾಯಚೂರು ಜಿಲ್ಲೆಯ ಮಸ್ಕಿ ಶಾಲೆಗಾಗಿ ಎಸ್ಎಫ್ಐ ನೇತೃತ್ವದಲ್ಲಿ ಪ್ರತಿಭಟನೆ

Next Post

ಮಗನಂತಹ ತಮ್ಮನ ಅಗಲಿಕೆಯಲ್ಲೂ ಧೃತಿಗೆಡದೆ ಸಂಯಮ ತಂದುಕೊಂಡ ರಾಘಣ್ಣ.!

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಮಗನಂತಹ ತಮ್ಮನ ಅಗಲಿಕೆಯಲ್ಲೂ ಧೃತಿಗೆಡದೆ ಸಂಯಮ ತಂದುಕೊಂಡ ರಾಘಣ್ಣ.!

ಮಗನಂತಹ ತಮ್ಮನ ಅಗಲಿಕೆಯಲ್ಲೂ ಧೃತಿಗೆಡದೆ ಸಂಯಮ ತಂದುಕೊಂಡ ರಾಘಣ್ಣ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada