ಬೆಂಗಳೂರು: ಮೇ.17: ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ, ಸಿಎಂ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರು ಅನೇಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಅವರ ತವರು ಜಿಲ್ಲೆ ರಾಮನಗರದಲ್ಲಿ ಮತ್ತು ಕನಕಪುರದಲ್ಲಿ ಬುಧವಾರ ಭದ್ರತೆ ಹೆಚ್ಚಿಸಲಾಗಿದೆ.


ರಾಮನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರಮುಖ ಸಾರ್ವಜನಿಕ ಸ್ಥಳಗಳು ಮತ್ತು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ