• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್!‌ : ರಾಜ್ಯ ಸರ್ಕಾರಕ್ಕೆ ಬಿಗ್‌ ಶಾಕ್..!

ಜಿಬಿಎ ನೂರು ಸಮಸ್ಯೆ ಹೇಳಲಿ ಅದಕ್ಕೆ ನಾವು ಕೇರ್‌ ಮಾಡಲ್ಲ : ಜಿ.ಎ. ಸಂಗ್ರೇಶಿ....

ಪ್ರತಿಧ್ವನಿ by ಪ್ರತಿಧ್ವನಿ
May 8, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್!‌ : ರಾಜ್ಯ ಸರ್ಕಾರಕ್ಕೆ ಬಿಗ್‌ ಶಾಕ್..!
Share on WhatsAppShare on FacebookShare on Telegram

ಬೆಂಗಳೂರು : ಸುಪ್ರೀಂ ಕೋರ್ಟ್‌ ಸೂಚನೆಯಂತೆ ಜೂ. 20 ರಿಂದ 24ರೊಳಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಜಿ.ಎ. ಸಂಗ್ರೇಶಿ ಘೋಷಿಸಿದ್ದಾರೆ.

ADVERTISEMENT
MLA Samarth Shamanur : ಚುನಾವಣಾ ಆಯೋಗ ಯಾರ ಕೈಯಲ್ಲಿದೆ, ಇವೆಲ್ಲ ತಿಳಿದುಕೊಳ್ಳಲಿ..? #pratidhvani

ಪಂಚ ಪಾಲಿಕೆಗಳ ಚುನಾವಣೆ ಸಂಬಂಧ ಇಂದು ಆಯೋಗದಲ್ಲಿ ಕರೆಯಲಾಗಿದ್ದ ಸಭೆಯ ನಂತರ ಮಾತನಾಡಿ, ಚುನಾವಣಾ ದಿನಾಂಕ ಪ್ರಕಟ ಮಾತ್ರ ಬಾಕಿ ಇದೆ. ಜಿಬಿಎ ಮನವಿ ಪತ್ರ ನೀಡಿ ಸ್ವಲ್ಪ ಕಾಲ ಮುಂದೂಡುವಂತೆ ಕೇಳಿ ಕೊಂಡಿದ್ದರು. ಆದರೆ, ಜೂನ್‌ 30 ರೊಳಗೆ ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳಿಗೆ ಚುನಾವಣೆ ಮುಗಿಸಬೇಕಿರುವ ಬಗ್ಗೆ ಸುಪ್ರೀಂ ಕೋರ್ಟ್‌ ಸ್ಪಷ್ಟ ಆದೇಶ ನೀಡಿರುವುದರಿಂದ ಚುನಾವಣೆ ಮುಂದೂಡುವ ಅಧಿಕಾರ ನನ್ನಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಂಬರುವ ಜೂನ್‌ .24 ರೊಳಗೆ ಸರ್ಕಾರಿ ಪ್ರಾಯೋಜಿತ ಯಾವುದೇ ಕಾರ್ಯಕ್ರಮಗಳಿದ್ದರೆ ಶೀಘ್ರವೇ ಮುಗಿಸಬೇಕು ಎಂದು ಚುನಾವಣೆ ದಿನಾಂಕ ಶೀಘ್ರದಲ್ಲೇ ಹೊರಬೀಳುವ ಆಗುವ ಬಗ್ಗೆ ಜಿಬಿಎ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ : “ನಾವು ಯಾರದೇ ಸರ್ಕಾರದ ಭಾಗವಾಗಲ್ಲ, ಕಾಂಗ್ರೆಸ್‌ನವರ ಪಕ್ಕ ಕುಳಿತುಕೊಳ್ಳಲ್ಲ : ಬಿಜೆಪಿ, ಡಿಎಂಕೆ ಹೊಸ ಆಟ ಶುರು

ಜೂನ್‌ 20 ರಿಂದ ಜೂನ್‌ 24 ರೊಳಗೆ ಚುನಾವಣೆ ನಡೆಸಬೇಕಾಗಿದೆ. ಆದರೆ ಯಾವ ದಿನ ಚುನಾವಣೆ ಮಾಡಬೇಕು ಎಂಬ ಬಗ್ಗೆ  ಒಂದು ವಾರದಲ್ಲಿ ನಿಗದಿ ಪಡಿಸುತ್ತೇವೆ.  ಸುಪ್ರೀಂ ಕೋರ್ಟ್‌ ನೀಡಿರುವ ಗಡುವಿನೊಳಗೆ ಚುನಾವಣೆ ನಡೆಸಲಾಗುವುದು ಎಂದು ಸಂಗ್ರೇಶಿ ಹೇಳಿದ್ದಾರೆ.

ಜಿಬಿಎ ನೂರು ಸಮಸ್ಯೆ ಹೇಳಲಿ ಅದಕ್ಕೆ ನಾವು ಕೇರ್‌ ಮಾಡಲ್ಲ. ಜೂ.20 ರಿಂದ 24ರ ನಡುವಿನ ಅವಧಿಯಲ್ಲಿ ಚುನಾವಣೆ ನಡೆಸುವುದು ಕಡ್ಡಾಯ. ಒಂದು ವಾರ ಕಾಯುತ್ತೇನೆ, ಅವರು ಹೇಳಿದರೂ ಬಿಟ್ಟರೂ ನಾನು ಈ ಅವಧಿಯಲ್ಲಿ ಚುನಾವಣೆ ನಡೆಸಿ ತೀರುತ್ತೇನೆ ಎಂದು ಇದೇ ಸಂದರ್ಭದಲ್ಲಿ ಖಡಕ್‌ ಸಂದೇಶವನ್ನು ಸರ್ಕಾರಕ್ಕೆ ರವಾನಿಸಿದ್ದಾರೆ.

ಆಯೋಗದ ಸೂಚನೆ ಪಾಲಿಸುತ್ತೇವೆ..

ಇದೇ ವೇಳೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಮಾಹಿತಿ ನೀಡಿ, ಜಿಬಿಎ ಚುನಾವಣೆ ಸಂಬಂಧ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಚುನಾವಣಾ ಸಿದ್ಧತೆ ಏನೆಲ್ಲ ತಯಾರಿ ಆಗಬೇಕು ಎನ್ನುವ ಚರ್ಚೆ ನಡೆಯಿತು. ಚುನಾವಣೆಗೆ ದಿನಾಂಕ ನಿಗದಿಪಡಿಸುವ ನಿರ್ಧಾರವನ್ನು ಚುನಾವಣಾ ಆಯೋಗ ತೆಗೆದುಕೊಳ್ಳಲಿದೆ. ಚುನಾವಣೆಗೆ ಆರ್‌ಒ, ಎಆರ್‌ಒ ಹಾಗೂ ಬಿಎಲ್‌ಒ ಗಳ ನೇಮಕಾತಿಗೆ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯುಕ್ತರು ಸೂಚನೆ ನೀಡಿದ್ದಾರೆ ಅದನ್ನು ಪಾಲಿಸಲಾಗುವುದು ಎಂದು ತಿಳಿಸಿದ್ದಾರೆ.

BSY Abhimanostava : ಯಡಿಯೂರಪ್ಪ ಐತಿಹಾಸಿಕ ಅಭಿಮಾನೋತ್ಸವದ ಭರದ ಸಿದ್ಧತೆ..! #pratidhvani

ಇನ್ನೂ ಈಗಾಗಲೇ ವಾರ್ಡ್‌ ವಿಂಗಡಣೆ, ಮೀಸಲಾತಿ ಹಾಗೂ ಅಂತಿಮ ಮತದಾರರ ಪಟ್ಟಿ ಸಿದ್ಧಗೊಂಡಿದ್ದು, ಚುನಾವಣೆಗೆ ಬೇಕಾದ ಪೂರ್ವ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಇದರ ಜೊತೆಗೆ ವಾರ್ಡುವಾರು ಮತದಾನ ಕೇಂದ್ರದ ಪಟ್ಟಿಯನ್ನು ಆಯೋಗದ ಅನುಮೋದನೆ ಪಡೆದು ಪ್ರಚುರಪಡಿಸುವುದು, ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳ ನೇಮಕಾತಿ ಅಧಿಸೂಚನೆ ಹೊರಡಿಸುವುದು, ಮತಗಟ್ಟೆ ಸಿಬ್ಬಂದಿ ನೇಮಕ ಮತ್ತು ತರಬೇತಿ, ಮತಪೆಟ್ಟಿಗೆಗಳ ಎತ್ತುವಳಿ, ಸಾಗಾಣಿಕೆ, ಸಂಗ್ರಹಣೆ ಸಂಬಂಧ ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಬೇಕಿದೆ.

ಅಲ್ಲದೆ ಮಸ್ಟರಿಂಗ್‌, ಡಿ-ಮಸ್ಟರಿಂಗ್‌ ಮತ್ತು ಮತ ಎಣಿಕೆ ಕೇಂದ್ರಗಳನ್ನು ಸ್ಥಾಪಿಸುವುದು, ಭದ್ರತಾ ಕೊಠಡಿ ವ್ಯವಸ್ಥೆ, ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್‌ ಮತ್ತು ಹೋರ್ಡಿಂಗ್‌ ಹಾಕುವುದನ್ನು ನಿಷೇಧಿಸುವುದು ಹಾಗೂ ಚುನಾವಣಾ ಪ್ರಚಾರಕ್ಕಾಗಿ ಸಭೆ ನಡೆಸಲು ರಾಜಕೀಯ ಪಕ್ಷಗಳಗೆ ಅನುಮತಿ ನೀಡುವ ಕುರಿತಂತೆ ಇಂದಿನ ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು ಮಹೇಶ್ವರ್‌ ರಾವ್ ವಿವರಿಸಿದ್ದಾರೆ.

Tags: 5 CorporationsBBMPChief Election CommissionerCM Siddaramaiahdcm dkshivakumarG A SangreshiGBAGBA Election 2026GBA EletionsGrater Benglore AuthorityKarnataka Politics
Previous Post

“ನಾವು ಯಾರದೇ ಸರ್ಕಾರದ ಭಾಗವಾಗಲ್ಲ, ಕಾಂಗ್ರೆಸ್‌ನವರ ಪಕ್ಕ ಕುಳಿತುಕೊಳ್ಳಲ್ಲ : ಬಿಜೆಪಿ, ಡಿಎಂಕೆ ಹೊಸ ಆಟ ಶುರು

Next Post

ಬಹುಮತ ಸಾಬೀತಿನ ದಾರಿಯಲ್ಲಿ ಗೆದ್ದ ವಿಜಯ್‌ : ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿದ್ಯಾರು..?

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
Next Post
ಬಹುಮತ ಸಾಬೀತಿನ ದಾರಿಯಲ್ಲಿ ಗೆದ್ದ ವಿಜಯ್‌ : ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿದ್ಯಾರು..?

ಬಹುಮತ ಸಾಬೀತಿನ ದಾರಿಯಲ್ಲಿ ಗೆದ್ದ ವಿಜಯ್‌ : ಟಿವಿಕೆ ಸರ್ಕಾರಕ್ಕೆ ಬೆಂಬಲ ನೀಡಿದ್ಯಾರು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada