ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಟಿಪ್ಪರ್ ಲಾರಿ ಡಿಕ್ಕಿಯಾಗಿ (Tipper lorry collided)ಗರ್ಭಿಣಿ(Pregnant) ಮಹಿಳೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಗರ್ಭಿಣಿ ಮಹಿಳೆ ಸಾವನ್ನಪ್ಪಿದ್ದು ಹೊಟ್ಟೆಯಿಂದ ಮಗು ಹೊರಬಂದಿದೆ.
ಅಪಘಾತದಲ್ಲಿ ಮೃತಪಟ್ಟ ಮಹಿಳೆಯನ್ನು ಎಡೇಹಳ್ಳಿ ಗ್ರಾಮದ 30 ವರ್ಷದ ಸಿಂಚನ ಎಂದು ಗುರುತಿಸಲಾಗಿದೆ.ಬೈಕ್ ಚಲಾಯಿಸುತ್ತಿದ್ದ ಪತಿ ಮಂಜುನಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಪರಾರಿಯಾಗಿದ್ದಾನೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಆರಂಭಿಸಿದ್ದಾರೆ.