• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
July 14, 2026
in Top Story
0
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ
Share on WhatsAppShare on FacebookShare on Telegram

 ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಮೊದಲ ಆರತಿ ಸೇವೆಯಲ್ಲಿ ಕರ್ನಾಟಕದ ಜನಪ್ರತಿನಿಧಿಗಳಿಗೆ ವಿಶೇಷ ಅವಕಾಶ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೀಡಿರುವ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ADVERTISEMENT
DK Shivakumar : Google ನಂತಹ ಜಾಗತಿಕ ಸಂಸ್ಥೆಗಳು ಕೈಜೋಡಿಸಬೇಕೆಂದು ಡಿಕೆಶಿ  ಆಹ್ವಾನಿಸಿದರು.#pratidhvani

ಮಂಗಳವಾರ ನವದೆಹಲಿಯಲ್ಲಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಒಂದೇ ವಿಷಯದ ಕುರಿತು ಪರಸ್ಪರ ವಿರೋಧಾಭಾಸದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದರು.

“ಒಂದು ಕಡೆ ದೇವರ ಮುಂದೆ ಎಲ್ಲರೂ ಸಮಾನರು ಎಂದು ಹೇಳುತ್ತಾರೆ. ಮತ್ತೊಂದು ಕಡೆ ಜನಪ್ರತಿನಿಧಿಗಳಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಹೇಳುತ್ತಾರೆ. ನಿಜವಾಗಿಯೂ ಎಲ್ಲರೂ ಸಮಾನರು ಎಂಬ ನಂಬಿಕೆ ಇದ್ದಿದ್ದರೆ ಆರಂಭದಲ್ಲೇ ಇಂತಹ ಪ್ರಸ್ತಾಪ ಮಾಡಬಾರದಿತ್ತು. ಸಾರ್ವಜನಿಕ ಟೀಕೆ ಎದುರಾದ ಬಳಿಕ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಈಗ ಎಲ್ಲರೂ ಸಮಾನರು ಎಂದು ಹೇಳುತ್ತಿದ್ದಾರೆ” ಎಂದು ಬೊಮ್ಮಾಯಿ ಹೇಳಿದರು.

Bidadi Township : ನಮ್ಮ ಮಕ್ಕಳ ಭವಿಷ್ಯಕ್ಕೆ ಜಿಬಿಐಟಿ ಯೋಜನೆಗೆ ಭೂಮಿ ಕೊಡ್ತೀವಿ #pratidhvani

ತಿರುಮಲ ದೇವಸ್ಥಾನದಲ್ಲಿ ಪ್ರತಿದಿನ ನಡೆಯುವ ಮೊದಲ ಆರತಿ ಸೇವೆಯಲ್ಲಿ ಕರ್ನಾಟಕದ ಜನಪ್ರತಿನಿಧಿಗಳಿಗೆ ವಿಶೇಷ ಶಿಷ್ಟಾಚಾರ ಕಲ್ಪಿಸುವ ಕುರಿತು ಡಿ.ಕೆ. ಶಿವಕುಮಾರ್ ನೀಡಿದ್ದ ಹೇಳಿಕೆಯನ್ನು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಆಡಳಿತ ಮಂಡಳಿಯೂ ಈಗಾಗಲೇ ತಳ್ಳಿಹಾಕಿದೆ. ದೇವಾಲಯದ ಸಂಪ್ರದಾಯಗಳಲ್ಲಿ ಏಕಪಕ್ಷೀಯ ಬದಲಾವಣೆ ಸಾಧ್ಯವಿಲ್ಲ. ಈ ಕುರಿತು ಟಿಟಿಡಿ ಮಂಡಳಿಯ ಸಭೆಯಲ್ಲಿ ಚರ್ಚಿಸಿ ಮಾತ್ರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದೆ.

Vatal Nagaraj on Footpath Clearance Drive: ಫುಟ್​ಪಾತ್ ಒತ್ತುವರಿ ತೆರವು.. ಶ್ರೀಮಂತರ ಮನೆ ಮುಟ್ಟಲ್ಲ

ತಿರುಮಲದ ಮೊದಲ ಆರತಿ ಸಂಪ್ರದಾಯದ ಕುರಿತು ಮಾತನಾಡಿದ ಬೊಮ್ಮಾಯಿ, “ಈ ಆಚರಣೆಗೆ ಶತಮಾನಗಳ ಇತಿಹಾಸವಿದೆ. ವಿಜಯನಗರ ಸಾಮ್ರಾಟ ಶ್ರೀಕೃಷ್ಣದೇವರಾಯರು ಹಾಗೂ ಮೈಸೂರು ಒಡೆಯರ್‌ಗಳು ತಿರುಮಲ ದೇವಸ್ಥಾನಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ವಿಶೇಷವಾಗಿ ಮೈಸೂರು ರಾಜಮನೆತನವು ದೇವಾಲಯಕ್ಕೆ ಹಲವು ಆಭರಣಗಳನ್ನು ಕಾಣಿಕೆಯಾಗಿ ಸಲ್ಲಿಸಿದ್ದರಿಂದ ಮೊದಲ ಆರತಿಯನ್ನು ಮೈಸೂರು ಮಹಾರಾಜರಿಗೆ ಅರ್ಪಿಸುವ ಸಂಪ್ರದಾಯ ಬೆಳೆದು ಬಂದಿದೆ” ಎಂದು ಹೇಳಿದರು.

ರಾಜಪ್ರಭುತ್ವ ಅಂತ್ಯಗೊಂಡ ಬಳಿಕ ಈ ಗೌರವ ಕರ್ನಾಟಕ ಸರ್ಕಾರಕ್ಕೆ ವರ್ಗಾಯಿಸಲಾಯಿತು. ಸರ್ಕಾರದ ಪರವಾಗಿ ನೇಮಕಗೊಂಡ ವಿಶೇಷ ಅಧಿಕಾರಿಯೊಬ್ಬರು ಅಧಿಕೃತ ಪ್ರತಿನಿಧಿಯಾಗಿ ಮೊದಲ ಆರತಿ ಸ್ವೀಕರಿಸುತ್ತಾರೆ. ಶಾಸಕರು, ಸಂಸದರು ಅಥವಾ ಇತರ ಜನಪ್ರತಿನಿಧಿಗಳು ಸರ್ಕಾರದ ಅಧಿಕೃತ ಪ್ರತಿನಿಧಿಗಳಲ್ಲ. ಆದ್ದರಿಂದ ವಿಶೇಷ ಅಧಿಕಾರಿಯೇ ಈ ಸಂಪ್ರದಾಯವನ್ನು ಮುಂದುವರಿಸುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟರು.

ಡಿ.ಕೆ. ಶಿವಕುಮಾರ್ ಅವರು ಅನಗತ್ಯವಾಗಿ ವಿವಾದಾತ್ಮಕ ವಿಷಯಗಳನ್ನು ಕೆದಕಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದ ಬೊಮ್ಮಾಯಿ, ವರ್ಷಗಳಿಂದ ನಡೆದುಕೊಂಡು ಬಂದಿರುವ ಧಾರ್ಮಿಕ ಸಂಪ್ರದಾಯಗಳನ್ನು ಬದಲಾಯಿಸುವ ಅಗತ್ಯವಿಲ್ಲ. ದೇವರ ಮುಂದೆ ಎಲ್ಲರೂ ಸಮಾನರು ಎಂಬ ತತ್ವವನ್ನು ಗೌರವಿಸಿ, ಐತಿಹಾಸಿಕ ಪರಂಪರೆ ಮುಂದುವರಿಯಬೇಕು ಎಂದು ಹೇಳಿದರು.

 

Tags: Basavaraj BommaiBJPDK ShivakumarKarnataka AratiMysore Maharajatirumalatirupati templeTTD
Previous Post

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

Next Post

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ?ಕುವೆಂಪು ನಾಡಗೀತೆಗೆ ಹೊಸ ರೂಪ? 

Related Posts

ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ
Top Story

ಜಮೀರ್ ಪ್ರಕರಣದಲ್ಲಿ ರಾಜ್ಯಪಾಲರ ಮಹತ್ವದ ನಡೆ; ತಾಂತ್ರಿಕ ಲೋಪ ಉಲ್ಲೇಖಿಸಿ ಕಡತ ವಾಪಸ್

by ಪ್ರತಿಧ್ವನಿ
July 14, 2026
0

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ಮುಂದುವರಿಸಲು ಹಾಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ...

Read moreDetails
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

LPG ಗ್ರಾಹಕರಿಗೆ ಹೊಸ ನಿಯಮಗಳು ಜಾರಿ: ಸಿಲಿಂಡರ್ ಬುಕ್ಕಿಂಗ್‌ನಿಂದ ಕನೆಕ್ಷನ್ ರದ್ದತಿವರೆಗೆ ಮಹತ್ವದ ಬದಲಾವಣೆ

July 14, 2026
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ?ಕುವೆಂಪು ನಾಡಗೀತೆಗೆ ಹೊಸ ರೂಪ? 

July 14, 2026
AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

AI ತಂತ್ರಜ್ಞಾನದ ಜಾಗತಿಕ ಕೇಂದ್ರವಾಗಿ ಕರ್ನಾಟಕ: ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

July 14, 2026
FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

FIFA World Cup 2026: ಬೆಂಗಳೂರಿನ ಫುಟ್ಬಾಲ್ ಪ್ರಿಯರಿಗಾಗಿ ಸರ್ಕಾರದಿಂದ ಗುಡ್ ನ್ಯೂಸ್!

July 14, 2026
Next Post
ತಿರುಮಲ ಆರತಿ ವಿವಾದ: ಡಿಕೆ ಶಿವಕುಮಾರ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ?ಕುವೆಂಪು ನಾಡಗೀತೆಗೆ ಹೊಸ ರೂಪ? 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada