• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕ್ರೇಜಿಸ್ಟಾರ್ ವಿ.ರವಿಚಂದ್ರನ್‌ರಿಂದ ಬಿಡುಗಡೆಯಾಯಿತು ʼಛೂ ಮಂತರ್ʼ ಚಿತ್ರದ ಟೈಟಲ್ ಟ್ರ್ಯಾಕ್

ಪ್ರತಿಧ್ವನಿ by ಪ್ರತಿಧ್ವನಿ
September 12, 2023
in ಸಿನಿಮಾ
0
ಛೂ ಮಂತರ್‌

ಛೂ ಮಂತರ್‌ ಚಿತ್ರದ ಶೀರ್ಷಿಕೆ ಗೀತೆಯನ್ನು ಕ್ರೇಜಿಸ್ಟಾರ್‌ ವಿ.ರವಿಚಂದ್ರನ್‌ ಬಿಡುಗಡೆ ಮಾಡಿದರು

Share on WhatsAppShare on FacebookShare on Telegram

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ ʼಛೂ ಮಂತರ್ʼ ಚಿತ್ರದ ಟೈಟಲ್ ಟ್ರ್ಯಾಕ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಕ್ರೇಜಿ ಸ್ಟಾರ್ ವಿ.ರವಿಚಂದ್ರನ್ ಅವರು ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದರು.

ADVERTISEMENT

ಚಿತ್ರತಂಡದವರ ಮಾತು ಕೇಳಿದಾಗ ಈ ತಂಡದಿಂದ ಒಳ್ಳೆಯ ಚಿತ್ರ ಬರುವ ಎಲ್ಲಾ ಲಕ್ಷಣಗಳು ಇದೆ ಎಂದು ಮಾತು ಆರಂಭಿಸಿದ ಕ್ರೇಜಿಸ್ಟಾರ್ ರವಿಚಂದ್ರನ್, ಶರಣ್ ಒಬ್ಬ ಒಳ್ಳೆಯ ನಟ. ಆತನ ಚಿತ್ರದಲ್ಲಿ ಎರಡು ಹಾಡುಗಳು ಹಿಟ್ ಆಗೆ ಆಗುತ್ತದೆ. ಚಂದನ್ ಶೆಟ್ಟಿ ಸಂಗೀತದಲ್ಲಿ ಮೂಡಿ ಬಂದಿರುವ ಈ ಹಾಡು ಕೂಡ ಚೆನ್ನಾಗಿದೆ. ನಿರ್ಮಾಪಕ ತರುಣ್ ಸೇರಿದಂತೆ ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ಛೂ ಮಂತರ್‌
ಶರಣ್‌, ಅದಿತಿ ಪ್ರಭುದೇವ ಮತ್ತು ಮೇಘನಾ ಗಾಂವ್ಕರ್‌

ನಾನು ನಾಯಕನಾಗಲು ರವಿಚಂದ್ರನ್ ಅವರೆ ಕಾರಣ. ನಾನು ಅವರೊಂದಿಗೆ “ಹಠವಾದಿ” ಚಿತ್ರದಲ್ಲಿ ಅಭಿನಯಿಸಬೇಕಾದರೆ, ನೀನು ಇನ್ನು ನಾಯಕನಾಗಿಲ್ವಾ? ಎಂದು ಕೇಳಿದರು. ಆಮೇಲೆ ನಾಯಕನಾಗಬೇಕು ಎಂದು ಯಾವತ್ತೂ ಅಂದುಕೊಂಡಿರದ ನಾನು, ಅವರು ಹೇಳಿದ ಎರಡು ವರ್ಷಗಳಲ್ಲೇ ನಾಯಕನಾದೆ. ಅಷ್ಟು ಒಳ್ಳೆಯ ಮನಸ್ಸು ರವಿ ಸರ್ ಅವರದು. ಇಂದು ನಮ್ಮ ಚಿತ್ರದ ಹಾಡನ್ನು ಅವರು ಬಿಡುಗಡೆ ಮಾಡಿದ್ದು ಖುಷಿಯಾಗಿದೆ. ಇನ್ನೂ ಇಂದು ಬಿಡುಗಡೆಯಾಗಿರುವ ಹಾಡಿನ ಬಗ್ಗೆ ಹೇಳಬೇಕಾದರೆ, ಚಂದನ್ ಶೆಟ್ಟಿ ಅಮೋಘವಾಗಿ ಸಂಗೀತ ನೀಡಿ ಹಾಡಿದ್ದಾರೆ. ವಿಜಯ್ ಈಶ್ವರ್ ಈ ಹಾಡನ್ನು ಬರೆದಿದ್ದು, ದರ್ಶಿನಿ ನೃತ್ಯ ಸಂಯೋಜನೆ ಮಾಡಿದ್ದಾರೆ. ನಾನು, ಚಿಕ್ಕಣ್ಣ ಹಾಗೂ ಅದಿತಿ ಪ್ರಭುದೇವ ಅಭಿನಯಿಸಿದ್ದೇವೆ ಎಂದು ನಾಯಕ ಶರಣ್ ತಿಳಿಸಿದರು.

ನಾನು, ರವಿ ಸರ್ ಅವರಿಗೆ ಕೆಲವು ದಿನಗಳ ಹಿಂದೆ ಟೀಸರ್ ತೋರಿಸಿದ್ದೆ. ಟೈಟಲ್ ಟ್ರ್ಯಾಕ್ ಅನ್ನು ನೀವೇ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿಕೊಂಡಿದ್ದೆ. ಇಂದು ರವಿಚಂದ್ರನ್ ಸರ್ ಬಂದು ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ. ರವಿ ಸರ್ ಅವರಿಗೆ, ಛೂ ಮಂತರ್ ಚಿತ್ರದ ಟೈಟಲ್ ನೀಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹಾಗೂ ಕಥೆ ಮೆಚ್ಚಿ ಪ್ರೋತ್ಸಾಹ ನೀಡಿದ ತರುಣ್ ಸುಧೀರ್ ಅವರಿಗೆ ಈ ಸಂದರ್ಭದಲ್ಲಿ ನಾನು ಧನ್ಯವಾದ ತಿಳಿಸುತ್ತೇನೆ. ಇಂದು ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದ್ದೇವೆ. ಸದ್ಯದಲ್ಲೇ ಟ್ರೇಲರ್ ಸಹ ಬರಲಿದೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ತರುಣ್ ಶಿವಪ್ಪ.

ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ಚಿತ್ರತಂಡಕ್ಕೆ ಹಾಗೂ ಆಗಮಿಸಿದ ಗಣ್ಯರಿಗೆ ನಿರ್ದೇಶಕ ನವನೀತ್ ಧನ್ಯವಾದ ತಿಳಿಸಿದರು. ಹಾಡಿನ ಬಗ್ಗೆ ಸಂಗೀತ ನಿರ್ದೇಶಕ ಹಾಗೂ ಗಾಯಕ ಚಂದನ್ ಶೆಟ್ಟಿ ಮಾಹಿತಿ ನೀಡಿದರು.

ನಟಿಯರಾದ ಅದಿತಿ ಪ್ರಭುದೇವ ಹಾಗೂ ಮೇಘನಾ ಗಾಂವ್ಕರ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಛಾಯಾಗ್ರಾಹಕ ಅನೂಪ್, ಹಾಡು ಬರೆದಿರುವ ವಿಜಯ್ ಈಶ್ವರ್, ನೃತ್ಯ ಸಂಯೋಜಕಿ ದರ್ಶಿನಿ ಮುಂತಾದವರು ಚಿತ್ರದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು. ಸಾಹಸ ಸಂಯೋಜಕ ರವಿವರ್ಮ, ನಿರ್ಮಾಪಕ ಸಂಜಯ್ ಗೌಡ ಸೇರಿದಂತೆ ಅನೇಕ ಗಣ್ಯರು ಹಾಡು ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದರು.

Tags: Aditi PrabhudevaChhoo Mantarsandalwoodsharanಅದಿತಿ ಪ್ರಭುದೇವಚಂದನವನಛೂ ಮಂತರ್‌ಶರಣ್‌
Previous Post

ಕ್ಷುಲ್ಲಕ ಮನಸ್ಥಿತಿಯ ಪಕ್ಷಗಳು ಜಿ 20 ಶೃಂಗಸಭೆ ಯಶಸ್ಸಿಗೆ ಅಸೂಯೆಪಡುತ್ತಿವೆ: ಜ್ಯೋತಿರಾದಿತ್ಯ ಸಿಂಧಿಯಾ

Next Post

ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

May 25, 2026
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಲಕ್ಷ್ಮಿ ಹೆಬ್ಬಾಳ್ಕರ್‌

ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada