ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿಯನ್ನು ಪಕ್ಷದಿಂದ ಉಚ್ಚಾಟಿಸುವಂತೆ ವ್ಯಾಪಕವಾಗಿ ಆಗ್ರಹ ಕೇಳಿ ಬರುತ್ತಿದೆ.
ಈ ಕುರಿತು ಗುರುವಾರ ಸಂಜೆ 5ಕ್ಕೆ ಕೋಲ್ಕತ್ತಾದಲ್ಲಿರುವ ಪಕ್ಷದ ಮುಖ್ಯ ಕಚೇರಿಯಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ನೇತೃತ್ವದಲ್ಲಿ ವಿಶೇಷ ಕೋರ್ ಕಮಿಟಿ ಸಭೆ ಕರೆದಿರುವ ಟಿಎಂಸಿ ತನ್ನ ಮುಂದಿನ ನಿರ್ಣಯವನ್ನ ಕೈಗೊಳ್ಳುತ್ತದೆ.
ಗುರುವಾರ ಬೆಳ್ಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಟಿಎಂಸಿ ಕಾರ್ಯದರ್ಶಿ ಕುನಾಲ್ ಗೋಶ್ ವ್ಯಾಪಕ ಭ್ರಷ್ಟಾಚಾರ ನಡೆಸಿರುವವರ ವಿರುದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ರಮ ಕೈಗೊಳ್ಳುತ್ತಾರೆ ಎಂಬ ವಿಶ್ವಾಸ ನನ್ನಲ್ಲಿದೆ. ಈ ಕೂಡಲೇ ಪಾರ್ಥರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದ ಕೆಲವೇ ಕೆಲವು ನಿಮಿಷಗಳ ನಂತರ ಸಭೆ ನಡೆಸಲು ಉದ್ದೇಶಿಸಲಾಗಿದೆ.