ಬಿಹಾರ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕೆ ಜೆಡಿಯು ನಾಯಕ ನಿತೀಶ್ ಕುಮಾರ್ ಮತ್ತು ಎನ್‌ಡಿಎ ಮಿತ್ರಪಕ್ಷಗಳನ್ನು TMC ಪಕ್ಷದ ಸಂಸದ ಶತ್ರುಘ್ನ ಸಿನ್ಹಾ ಅಭಿನಂದಿಸಿದ್ದಾರೆ.

ನಮ್ಮ ಬಿಹಾರದ ಜನರು ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತ ಚಲಾಯಿಸುವ ಮೂಲಕ ಅರ್ಹವಾದ ಸರ್ಕಾರವನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಮತ್ತು ಅತ್ಯಂತ ಜನಪ್ರಿಯ, ಸಜ್ಜನ ರಾಜಕಾರಣಿ ಹಾಗೂ ಯಶಸ್ವಿ ಮುಖ್ಯಮಂತ್ರಿಯಾಗಿಯಾದ ನಿತೇಶ್ ಕುಮಾರ್ ಅವರ ನಾಯಕತ್ವವನ್ನು ಬೆಂಬಲಿಸಿದ್ದಕ್ಕಾಗಿ ಎಲ್ಲರಿಗೂ ಅಭಿನಂದನೆಗಳು. ಜನರ ನಿರೀಕ್ಷೆಗಳಿಗೆ ತಕ್ಕಂತೆ ಅಡಳಿತ ನಡೆಸಲು ನಿತೇಶ್ ಅವರಿಗೆ ದೇವರು ಆಶೀರ್ವದಿಸಲಿ. ಅದೇ ರೀತಿ ಎನ್‌ಡಿಎ ಮಿತ್ರ ಪಕ್ಷಗಳಿಗೆ ಅಭಿನಂದನೆಗಳು. ಎಂದಿದ್ದು ಜೈ ಬಿಹಾರ ಜೈ ಹಿಂದ್ ಎಂದು ಸಿನ್ಹಾ ‘X’ನಲ್ಲಿ ಬರೆದುಕೊಂಡಿದ್ದಾರೆ.

ಶತ್ರುಘ್ನ ಸಿನ್ಹಾ ಅಭಿನಂದನೆ ಪೋಸ್ಟ್ ಗೆ ಪ್ರತಿಕ್ರಿಯಿಸಿರುವ TMC, ಸಿನ್ಹಾ ಅವರು ಬಿಹಾರ ಮೂಲದವರಾಗಿದ್ದು, ವೈಯಕ್ತಿಕ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದೆ. ಆದರೂ ರಾಜಕೀಯ ವಯಲದಲ್ಲಿ ಸಿನ್ಹಾರವರ ಪೋಸ್ಟ್ ಸಾಕಷ್ಟು ಚರ್ಚೆ ಉಂಟು ಮಾಡಿದೆ.












