• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ರಾಜ್ಯಪಾಲರ ಹುದ್ದೆ ಘನತೆಗೆ ಕುಂದುಂಟು ಮಾಡಿತೇ ಬಿಜೆಪಿ..?

ಕೃಷ್ಣ ಮಣಿ by ಕೃಷ್ಣ ಮಣಿ
March 19, 2024
in ಇತರೆ / Others, ದೇಶ, ರಾಜಕೀಯ, ವಿದೇಶ, ಶೋಧ, ಸರ್ಕಾರಿ ಗೆಜೆಟ್
0
ರಾಜ್ಯಪಾಲರ ಹುದ್ದೆ ಘನತೆಗೆ ಕುಂದುಂಟು ಮಾಡಿತೇ ಬಿಜೆಪಿ..?
Share on WhatsAppShare on FacebookShare on Telegram

ರಾಜ್ಯಪಾಲರ ಹುದ್ದೆ ಘನತೆಗೆ ಕುಂದುಂಟು ಮಾಡಿತೇ ಬಿಜೆಪಿ..?

ADVERTISEMENT

ರಾಜ್ಯಪಾಲರು ಹಾಗು ರಾಷ್ಟ್ರಪತಿ ಎಂದರೆ ಸಾಂವಿಧಾನಿಕ ಹುದ್ದೆ. ಒಮ್ಮೆ ರಾಜ್ಯಪಾಲರು ಅಥವಾ ರಾಷ್ಟ್ರಪತಿಯಾಗಿ ಅಧಿಕಾರ ನಡೆಸಿದವರು ಬಹುತೇಕ ಪಕ್ಷ ರಾಜಕಾರಣದಿಂದ ದೂರ ಉಳಿಯುತ್ತಾರೆ. ಪಕ್ಷಾತೀತವಾಗಿ ಕೆಲಸ ಮಾಡುವ ಉದ್ದೇಶದಿಂದ ಪಕ್ಷಕ್ಕೆ ರಾಜೀನಾಮೆ ನೀಡಿ ಸಾಂವಿಧಾನಿಕ ಹುದ್ದೆಗೇರಿದ ಬಳಿಕ ನಿವೃತ್ತಿ ಜೀವನ ನಡೆಸುವ ಸಾಧ್ಯತೆಯೇ ಹೆಚ್ಚು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಈ ಹುದ್ದೆಗಳಿಗೂ ಸಕ್ರಿಯ ರಾಜಕಾರಣಿಗಳನ್ನೇ ನೇಮಕ ಮಾಡುತ್ತಿದ್ದು, ಪಕ್ಷಾತೀತವಾಗಿ ಕೆಲಸ ಮಾಡಬೇಕಿದ್ದ ರಾಜ್ಯಪಾಲರು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರಾ..? ಅನ್ನೋ ಅನುಮಾನ ಮೂಡಿಸುವಂತೆ ನಡೆದುಕೊಳ್ತಿದ್ದಾರೆ.

ಚುನಾವಣಾ ರಾಜಕೀಯಕ್ಕೆ ತೆಲಂಗಾಣ ರಾಜ್ಯಪಾಲೆ..

ತೆಲಂಗಾಣ ರಾಜ್ಯಪಾಲೆಯಾಗಿರುವ ತಮಿಳ್​ ಸಾಯಿ ಸುಂದರ್​ರಾಜನ್​ ಸಾಂವಿಧಾನಿಕ ಹುದ್ದೆಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಪುದುಚೆರಿ ಲೆಫ್ಟಿನೆಂಟ್​ ಗೌವರ್ನರ್​ ಆಗಿಯೂ ಕೆಲಸ ಮಾಡ್ತಿದ್ದ ತಮಿಳ್​ ಸಾಯಿ ಸುಂದರ್​ ರಾಜನ್​​ ಆ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. 62 ವರ್ಷದ ತಮಿಳ್​ ಸಾಯಿ ಚುನಾವಣಾ ರಾಜಕೀಯಕ್ಕೆ ಮರಳಲು ಬಯಸಿದ್ದಾರೆ ಎನ್ನಲಾಗ್ತಿದೆ. 5 ವರ್ಷ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷೆಯಾಗಿದ್ದ ತಮಿಳ್​ ಸಾಯಿ ಸುಂದರ್​ರಾಜನ್​ ಆ ಬಳಿಕ ರಾಜ್ಯಪಾಲರಾಗಿದ್ದರು. 2021ರಲ್ಲಿ ಪುದುಚೆರಿ ಲೆಫ್ಟಿನೆಂಟ್​ ಗೌವರ್ನರ್​ ಆಗಿ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿತ್ತು.

ತಮಿಳುನಾಡಲ್ಲೂ ರಾಜ್ಯಪಾಲರ ಜೊತೆ ಸಂಘರ್ಷ..

ತಮಿಳುನಾಡು ರಾಜ್ಯಪಾಲರಾಗಿರುವ R.N ರವಿ ರಾಜ್ಯ ಸರ್ಕಾರದ ನಿರ್ಧಾರಗಳಿಗೆ ವಿರುದ್ಧವಾಗಿ ನಡೆದುಕೊಳ್ಳುವ ತಮ್ಮ ನಡೆಯನ್ನು ಮುಂದುವರಿಸಿದ್ದಾರೆ. ಸಚಿವ ಕೆ.ಪೊನ್​ಮುಡಿ ಅವರನ್ನು ಉನ್ನತ ಶಿಕ್ಷಣ ಸಚಿವರನ್ನಾಗಿ ನೇಮಕ ಮಾಡಿದ್ದು, ರಾಜ್ಯಪಾಲರು ಸಿಎಂ ಎಂ.ಕೆ ಸ್ಟಾಲಿನ್​ ನಿರ್ಧಾರವನ್ನು ತಿರಸ್ಕರಿಸಿದ್ದಾರೆ. ಮುಖ್ಯಮಂತ್ರಿ ತನಗೆ ಇಚ್ಛೆ ಬಂದವರನ್ನು ಮಂತ್ರಿ ಮಂಡಳಕ್ಕೆ ನೇಮಕ ಮಾಡಿಕೊಳ್ಳುವ ಅಧಿಕಾರ ಹೊಂದಿದ್ದಾರೆ. ಇದನ್ನು ಪ್ರಶ್ನಿಸಲು ಯಾರಿಗೂ ಅಧಿಕಾರ ಇರುವುದಿಲ್ಲ. ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ಸಚಿವ ಸಂಪುಟದ ಆಯ್ಕೆ ಮಾಡುವ ಅಧಿಕಾರವಿಲ್ಲ. ಆದರೂ ತಮ್ಮ ಮಿತಿಯನ್ನು ರಾಜ್ಯಪಾಲರು ದಾಟಿದ್ದಾರೆ ಎನ್ನಲಾಗ್ತಿದೆ. ಇತ್ತೀಚಿಗೆ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಪೊನ್​ಮುಡಿ ಶಿಕ್ಷೆಗೆ ಸುಪ್ರೀಂಕೋರ್ಟ್​ ತಡೆಯಾಜ್ಞೆ ನೀಡಿತ್ತು. ಇದೀಗ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ ತಮಿಳುನಾಡು ಸರ್ಕಾರ.

ಪಂಜಾಬ್​, ಕೇರಳ ರಾಜ್ಯಪಾಲರಿಗೂ ಚಾಟಿ ಬೀಸಿದ್ದ ಸುಪ್ರೀಂಕೋರ್ಟ್​..!

ಪಂಜಾಬ್​ ಹಾಗು ಕೇರಳ ರಾಜ್ಯಪಾಲರೂ ಕೂಡ ಸರ್ಕಾರದ ನಿರ್ಧಾರವನ್ನು ಒಪ್ಪದೆ ಸಹಿ ಹಾಕದೆ ವಾಪಸ್​ ಕಳುಹಿಸುವ ನಿರ್ಧಾರ ಮಾಡಿದ್ದರು. ರಾಜ್ಯ ಸರ್ಕಾರದ ಅರ್ಜಿ ವಿಚಾರಣೆ ಮಾಡಿದ್ದ ಸುಪ್ರೀಂಕೋರ್ಟ್​, ರಾಜ್ಯಪಾಲರು ಬಿಲ್​ಗೆ ಸಹಿ ಹಾಕದೆ ಇಟ್ಟುಕೊಳ್ಳುವ ಯಾವುದೇ ಅಧಿಕಾರ ಹೊಂದಿಲ್ಲ ಎಂದು ಸ್ಪಷ್ಟಪಡಿಸಿತ್ತು. ಜೊತೆಗೆ ಬೆಂಕಿಯೊಂದಿಗೆ ಸರಸ ಆಡುವ ಪ್ರಯತ್ನ ಬೇಡ ಎಂದು ಹೇಳಿತ್ತು. ಇನ್ನು ಕೇರಳ ರಾಜ್ಯಪಾಲರು ಸರ್ಕಾರ ಬಿಲ್​ ಪಾಸ್​ ಮಾಡಿ ರಾಜ್ಯಪಾಲರ ಸಹಿಗೆ ಕಳುಹಿಸಿದಾಗ ಸಹಿ ಮಾಡದೆ ಇದ್ದ ಪ್ರಕರಣವನ್ನು ಇತ್ಯರ್ಥ ಮಾಡಿದ್ದ ಸುಪ್ರೀಂಕೋರ್ಟ್​, ರಾಜ್ಯಪಾಲರ ಅಧಿಕಾರ ಕಾನೂನು ಮಾಡುವುದನ್ನು ತಡೆಯುವುದಲ್ಲ ಎಂದು ಚಾಟಿ ಬೀಸಿತ್ತು.

ರಾಜ್ಯಪಾಲರು ಎಂದರೆ ಸಾಂವಿಧಾನಿಕ ಹುದ್ದೆಯಾಗಿದ್ದು ಪಕ್ಷಾತೀತವಾಗಿ ಕೆಲಸ ಮಾಡುವ ಮನಸ್ಥಿತಿ ಇರಬೇಕಿದೆ. ಸಕ್ರಿಯ ರಾಜಕಾರಣದಿಂದ ದೂರ ಉಳಿಯುವ ಮನಸ್ಥಿತಿ ಇದ್ದವರನ್ನು ರಾಜ್ಯಪಾಲರನ್ನಾಗಿ ಮಾಡಿದರೆ ಮಾತ್ರ ಸಂವಿಧಾನದ ರಕ್ಷಣೆ ಆಗಲಿದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಘರ್ಷ ಮಿತಿ ಮೀರುವ ಸಾಧ್ಯತೆ ಇದೆ.

Tags: ​ HomeIndia NewsRahul Gandhi To Hold 'Jai Bharat' Rally In Karnataka's Kolar Ahead Of Polls Rahul Gandhi To Hold 'Jai Bharat' Rally In KarnatakaGovernorGovernor B S Koshyariಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಲೋಕಸಭಾ ಚುನಾವಣೆ: ಮಂಡ್ಯದಿಂದ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್?

Next Post

ನಾನು ಗಾಯತ್ರಿ ಸಿದ್ಧೇಶ್ವರ್​​ ಬೆಂಬಲಿಸುವುದಿಲ್ಲ – ಮಾಡಾಳು ಪುತ್ರ

Related Posts

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
0

ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಹಾರ್ಟ್ ಅಟ್ಯಾಕ್ (Heart attack) ನಿಂದ ಸರಣಿ ಮುಂದುವರೆದಿದ್ದು ಜನರಲ್ಲಿ ಆತಂಕ ಹೆಚ್ಚಾಗಿದೆ. ಹೀಗಾಗಿ ಕೇಂದ್ರದ ಆರೋಗ್ಯ ಇಲಾಖೆಯಿಂದ (Central health department)...

Read moreDetails

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

July 2, 2025
ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

ಸಿದ್ದು..ಸೋನಿಯಾ ಭೇಟಿ ಮಾಡಿಸಿದ್ದು ನಾನಲ್ಲ..! – ಸಿದ್ದರಾಮಯ್ಯ ಮಾಸ್ ಲೀಡರ್ : ಯು ಟರ್ನ್ ಹೊಡೆದ ಬಿ.ಆರ್ ಪಾಟೀಲ್ 

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
Next Post
ನಾನು ಗಾಯತ್ರಿ ಸಿದ್ಧೇಶ್ವರ್​​ ಬೆಂಬಲಿಸುವುದಿಲ್ಲ – ಮಾಡಾಳು ಪುತ್ರ

ನಾನು ಗಾಯತ್ರಿ ಸಿದ್ಧೇಶ್ವರ್​​ ಬೆಂಬಲಿಸುವುದಿಲ್ಲ - ಮಾಡಾಳು ಪುತ್ರ

Please login to join discussion

Recent News

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
Top Story

Kannada Cinema: ಯಶೋಧರ ನಿರ್ದೇಶನದದಲ್ಲಿ ಅಭಿಮನ್ಯು ನಾಯಕನಾಗಿ ನಟಿಸಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ .

by ಪ್ರತಿಧ್ವನಿ
July 2, 2025
ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ
Top Story

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಎಚ್ಚೆತ್ತ ಪೊಲೀಸ್ ಇಲಾಖೆ – ದೊಡ್ಡ ಸಮಾರಂಭಗಳಿಗೆ ಎಸ್‌ಒಪಿ ರಚನೆ

by Chetan
July 2, 2025
ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 
Top Story

ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಇರುವಾಗ ಯಾರೊಬ್ಬರೂ ಅಪಸ್ವರ ಎತ್ತಬಾರದು – ಶಾಸಕರಿಗೆ ಡಿಕೆ ವಾರ್ನಿಂಗ್ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!