ರಾಜ್ಯದ ವಿವಿಧೆಡೆ ವರುಣನ ಆರ್ಭಟ ಮುಂದುವರಿದಿದೆ. ಕರಾವಳಿ ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡು ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಾಸನ, ಶಿವಮೊಗ್ಗ, ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಮಳೆ ಹೆಚ್ಚಾಗಲಿದೆ.. ಹಾಸನ, ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ 48 ಗಂಟೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದ್ದು, ಒಂದೆರಡು ಬಾರಿ ಹಗುರ ಮಳೆಯಾಗಲಿದೆ. ಇಂದು ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಕೊಡಗಿನಲ್ಲಿ ಮಳೆಯಿಂದ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದಲ್ಲಿ ಇಂದಿನಿಂದ 2 ದಿನ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ.ಕೃಷ್ಣರಾಜ ಸಾಗರ ಅಣೆಕಟ್ಟೆಯಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡಲಾಗಿದೆ.. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ವಿಶ್ವ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮ ಭಾಗಶಃ ಮುಳುಗಡೆಯಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಬ್ಬರ ಹಿನ್ನೆಲೆಯಲ್ಲಿ ಅಣೆಕಟ್ಟೆಗೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರಿ ಏರಿಕೆಯಾಗಿರುವ ಕಾರಣ ಕಾವೇರಿ ನದಿಗೆ ನೀರು ಬಿಡಲಾಗಿದೆ.
ಗೂಡು, ಮೊಟ್ಟೆ ರಕ್ಷಿಸಿಕೊಳ್ಳಲು ಪಕ್ಷಿ ಸಂಕುಲ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.. ಎತ್ತರದ ಮರದಲ್ಲಿ ಕೆಲ ಪಕ್ಷಿಗಳು ಆಶ್ರಯ ಪಡೆದಿದ್ದಾವೆ. ಮುನ್ನೆಚ್ಚರಿಕೆ ಕ್ರಮವಾಗಿ ಪಕ್ಷಿಧಾಮದ ಬೋಟಿಂಗ್ ಸ್ಥಗಿತ ಮಾಡಲಾಗಿದ್ದು, ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.ಬಾಗಲಕೋಟೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ.
ನಗರದ ವಿದ್ಯಾಗಿರಿ, ನವನಗರ, ಹಳೇ ಬಾಗಲಕೋಟೆ ಪಟ್ಟಣದಲ್ಲಿ ಅಧಿಕ ಮಳೆಯಾಗಿದ್ದು, ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆಯಲ್ಲಿಯೇ ತರಕಾರಿ ಮಾರಾಟಕ್ಕೆ ಮಾರುಕಟ್ಟೆಗೆ ವ್ಯಾಪಾರಸ್ಥರು ಬಂದಿದ್ದು, ಅಧಿಕ ಮಳೆಯಿಂದ ಗ್ರಾಹಕರಿಲ್ಲದೆ ವ್ಯಾಪಾರಸ್ಥರು ಪರದಾಡಿದ್ರು.. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಇನ್ನೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ.