ಸೋಮವಾರ ಅಂದರೆ ಇಂದಿನಿಂದ 10 ದಿನಗಳ ಕಾಲ ವಿಧಾನ ಮಂಡಲದ ಅಧಿವೇಶ ಬಜೆಟ್ ನಡೆಯಲಿದೆ. ಮೊದಲ ದಿನದ ಇಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.
ಹೌದು, ಇಂದಿನಿಂದ ವಿಧಾನಮಂಡಲ ಆರಂಭವಾಗುತ್ತಿದ್ದು, ಈ ಬಾರಿ 2026 ಪ್ರಶ್ನೆಗಳು, ಸರ್ಕಾರದಿಂದ ಎರಡು ವಿಧೇಯಕಗಳು ಮಂಡನೆಯಾಗಲಿವೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಮಾಹಿತಿ ನೀಡಿದಂತ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು, ಸಂಪ್ರದಾಯದಂತೆ ವರ್ಷದ ಮೊದಲ ಅಧಿವೇಶನದ ವೇಳೆ ವಿಧಾನ ಮಂಡಲದ ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಫೆಬ್ರವರಿ 14ರ ಇಂದಿನಿಂದ ಸದನ ಅರಂಭಗೊಂಡು, ಫೆ.25ರವರೆಗೆ ಅಧಿವೇಶನ ನಡೆಯಲಿದೆ. ಈವರೆಗೆ 2062 ಪ್ರಶ್ನೆಗಳು ಗಮನ ಸೆಳೆಯುವ ಸೂಚನೆಗಳು ಸ್ವೀಕಾರಗೊಂಡಿವೆ ಎಂದು ತಿಳಿಸಿದರು.

ರಾಜ್ಯಪಾಲರ ಭಾಷಣದ ನಂತ್ರ, ಮೃತರಾದ ಸದನದ ಸದಸ್ಯರು, ಸಮಾಜದ ವಿವಿಧ ಕ್ಷೇತ್ರದ ಗಣ್ಯರಿಗೆ ಸಂತಾಪ ಸೂಚಿಸಲಾಗುತ್ತದೆ ಎಂದು ತಿಳಿಸಿದರು.