ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ A1 ಪವಿತ್ರಾಗೌಡಗೆ ಜಾಮೀನು ಸಿಗುತ್ತಾ ಇಲ್ವಾ ಅನ್ನೋ ಚರ್ಚೆ ಶುರುವಾಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಅರ್ಜಿ ವಜಾ ಆದ ಬಳಿಕ ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದು, ಇಂದು ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆಗಿರುವ ಪವಿತ್ರಾಗೌಡ, ಕೊಲೆ ಪ್ರಕರಣದಲ್ಲಿ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಇಂದು ಪವಿತ್ರಾಗೌಡ ಜಾಮೀನು ಅರ್ಜಿ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ವಿಚಾರಣೆಗೆ ಬರಲಿದೆ.
ಆಗಸ್ಟ್ 31 ರಂದು ಸೆಷನ್ ಕೋರ್ಟ್ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಬಳಿಕ ಪವಿತ್ರಾಗೌಡ ಪರ ವಕೀಲ ಮೆಲನಿ ಸೆಬಾಸ್ಟಿಯನ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಇವತ್ತು ಜಾಮೀನು ಅರ್ಜಿ ವಿಚಾರಣೆಗೆ ಬರಲಿದ್ದು, ಎಸ್ಪಿಸಿ ಸರ್ಕಾರದ ಪರವಾಗಿ ಆಕ್ಷೇಪ ವ್ಯಕ್ತಪಡಿಸಲಿದ್ದಾರೆ.