ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ನಾಳೆ ಹಾಗೂ ನಾಡಿದ್ದು ರಾಜ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಈಗಾಗಲೇ ಬೆಳಗಾವಿಗೆ ಬಂದಿಳಿದಿದ್ದಾರೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ ಬೇಟೆಗಾಗಿ ಕರ್ನಾಟಕಕ್ಕೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಬೆಳಗಾವಿ ನಗರಕ್ಕೆ ಆಗಮಿಸಿದ್ದಾರೆ. ಪ್ರದಾನಿ ಇಂದು ರಾತ್ರಿ ಬೆಳಗಾವಿಯ (Belagavi) ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ (Jagadish Shetter) ಹಾಗೂ ಕಾರ್ಯಕರ್ತರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ನಂತರ ಪ್ರಧಾನಿ ಮೋದಿ ಅವರು ಖಾಸಗಿ ಹೋಟೆಲ್ ನತ್ತ ತೆರಳಿದರು. ಪ್ರಧಾನಿ ಅವರು ಆಗಮಿಸಿರುವ ಹಿನ್ನೆಲೆಯಲ್ಲಿ ಇಡೀ ಬೆಳಗಾವಿ ನಗರದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಪ್ರಧಾನಿ ಮೋದಿ ಅವರು ನಾಳೆ ಹಾಗೂ ನಾಡಿದ್ದು ರಾಜ್ಯದಲ್ಲಿ ಮತ ಬೇಟೆ ನಡೆಸಲಿದ್ದಾರೆ. ಉತ್ತರ ಕರ್ನಾಟಕದ ಬರೋಬ್ಬರಿ 11 ಲೋಕಸಭಾ ಕ್ಷೇತ್ರಗಳಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿನ ಲಿಂಗಾಯತ ಮತಗಳ ಮೇಲೆ ಮೋದಿ ಕಣ್ಣಿಟ್ಟಿದ್ದಾರೆ.