
ನಾಳೆ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ.. KRPP ಪಕ್ಷ ವಿಲೀನ..
ಕೊಪ್ಪಳ ಜಿಲ್ಲೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಾಳೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ. ನಾಳೆ ಬೆಳಗ್ಗೆ 9.30ಕ್ಕೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸೇರ್ಪಡೆ ಆಗಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.
ಬಿಜೆಪಿಗೆ ಜನಾರ್ದನ ರೆಡ್ಡಿ ಸೇರ್ಪಡೆ ಆಗುವುದು ಬಹುತೇಕ ಖಚಿತ ಆಗಿದೆ. ಜನಾರ್ದನ ರೆಡ್ಡಿ ಮನೆಗೆ ಆಗಮಿಸಿದ ಬಿಜೆಪಿ ನಾಯಕ ಗೋವಿಂದ ಕಾರಜೋಳ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಚಾಲುಕ್ಯ ಸರ್ಕಲ್ ಬಳಿ ಇರುವ ಜನಾರ್ದನ ರೆಡ್ಡಿ ನಿವಾಸ ಪಾರಿಜಾತದಲ್ಲಿ ಭೇಟಿ ಮಾಡಿ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದಾರೆ.
KRPP ಪಕ್ಷದ ಪದಾಧಿಕಾರಿಗಳ ಸಭೆ ನಡುವೆ ಕಾರಜೋಳ ಜನಾರ್ದನ ರೆಡ್ಡಿ ನಿವಾಸಕ್ಕೆ ಆಗಮಿಸಿ ಚರ್ಚೆ ನಡೆಸಿದ್ದು, ನಾಳೆ ಪಕ್ಷ ಸೇರುವ ನಿರ್ಧಾರ ಹೊರಬಿದ್ದಿದೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಆಯ್ಕೆಯಾಗಿರುವ ಜನಾರ್ದನ ರೆಡ್ಡಿ, BJPP ಪಕ್ಷ ಸೇರ್ಪಡೆ ಬಗ್ಗೆ ಘೋಷಣೆ ಮಾಡಿದ್ದಾರೆ.
ಕಾರ್ಯಕರ್ತರ ಸಭೆ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ, ಬಿಜೆಪಿ ಸೇರುವ ನಿರ್ಣಯ ಪ್ರಕಟಿಸಿದ್ದಾರೆ. ಜನಾರ್ದನ್ ರೆಡ್ಡಿ ಬಿಜೆಪಿ ಸೇರುವ ನಿರ್ಣಯಕ್ಕೆ KRPP ಪಕ್ಷದ ಪದಾಧಿಕಾರಿಗಳು ಹಾಗೂ ಬೆಂಬಲಿಗರು ಬೆಂಬಲಿಸಿದ್ದಾರೆ. ಬಿಜೆಪಿ ಜೊತೆಗೆ ಕೆಆರ್‌ಪಿಪಿ ವೀಲನಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಕೊಪ್ಪಳ, ಬಳ್ಳಾರಿ ಭಾಗದದಿಂದ ಬಂದಿದ್ದ ಅಪಾರ ಬೆಂಬಲಿಗರ ಎದುರು ಘೋಷಣೆ ಮಾಡಿದ್ದಾರೆ.
ನಾಳೆ ಜನಾರ್ದನ್ ರೆಡ್ಡಿ ಜೊತೆಗೆ ಜನಾರ್ದನರೆಡ್ಡಿ ಬೆಂಬಲಿಗರು ಬಿಜೆಪಿ ಸೇರ್ಪಡೆ ಆಗಲಿದ್ದಾರೆ. ಬಳ್ಳಾರಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಜೊತೆಗೆ ಮುನಿಸಿಕೊಂಡಿದ್ದ ಜನಾರ್ದನ ರೆಡ್ಡಿ ಪತ್ನಿ ಅರುಣಾ ರೆಡ್ಡಿಯನ್ನು ಬಳ್ಳಾರಿಯಲ್ಲಿ ಕಣಕ್ಕಿಳಿಸಿದ್ದರು. ಇದೀಗ ಬಳ್ಳಾರಿಯಿಂದ ಸ್ಪರ್ಧೆ ಮಾಡಿರುವ ಶ್ರೀರಾಮುಲು ಪರ ಕೆಲಸ ಮಾಡಲು ಜನಾರ್ದನ ರೆಡ್ಡಿ ನಿರ್ಧಾರ ಮಾಡಿದ್ದಾರೆ.
ಕೃಷ್ಣಮಣಿನಾಳೆ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ.. KRPP ಪಕ್ಷ ವಿಲೀನ.. ಕೊಪ್ಪಳ ಜಿಲ್ಲೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಾಳೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ. ನಾಳೆ ಬೆಳಗ್ಗೆ 9.30ಕ್ಕೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ಸೇರ್ಪಡೆ ಆಗಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಬಿಜೆಪಿಗೆ ಜನಾರ್ದನ ರೆಡ್ಡಿ ಸೇರ್ಪಡೆ ಆಗುವುದು ಬಹುತೇಕ ಖಚಿತ ಆಗಿದೆ. ಜನಾರ್ದನ ರೆಡ್ಡಿ ಮನೆಗೆ ಆಗಮಿಸಿದ ಬಿಜೆಪಿ ನಾಯಕ ಗೋವಿಂದ ಕಾರಜೋಳ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಚಾಲುಕ್ಯ ಸರ್ಕಲ್ ಬಳಿ ಇರುವ ಜನಾರ್ದನ ರೆಡ್ಡಿ ನಿವಾಸ ಪಾರಿಜಾತದಲ್ಲಿ ಭೇಟಿ ಮಾಡಿ ಪಕ್ಷ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದಾರೆ. KRPP ಪಕ್ಷದ ಪದಾಧಿಕಾರಿಗಳ ಸಭೆ ನಡುವೆ ಕಾರಜೋಳ ಜನಾರ್ದನ ರೆಡ್ಡಿ ನಿವಾಸಕ್ಕೆ ಆಗಮಿಸಿ ಚರ್ಚೆ ನಡೆಸಿದ್ದು, ನಾಳೆ ಪಕ್ಷ ಸೇರುವ ನಿರ್ಧಾರ ಹೊರಬಿದ್ದಿದೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಆಯ್ಕೆಯಾಗಿರುವ ಜನಾರ್ದನ ರೆಡ್ಡಿ, BJPP ಪಕ್ಷ ಸೇರ್ಪಡೆ ಬಗ್ಗೆ ಘೋಷಣೆ ಮಾಡಿದ್ದಾರೆ. ಕಾರ್ಯಕರ್ತರ ಸಭೆ ಬಳಿಕ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಜನಾರ್ದನ ರೆಡ್ಡಿ, ಬಿಜೆಪಿ ಸೇರುವ ನಿರ್ಣಯ ಪ್ರಕಟಿಸಿದ್ದಾರೆ. ಜನಾರ್ದನ್ ರೆಡ್ಡಿ ಬಿಜೆಪಿ ಸೇರುವ ನಿರ್ಣಯಕ್ಕೆ KRPP ಪಕ್ಷದ ಪದಾಧಿಕಾರಿಗಳು ಹಾಗೂ ಬೆಂಬಲಿಗರು ಬೆಂಬಲಿಸಿದ್ದಾರೆ. ಬಿಜೆಪಿ ಜೊತೆಗೆ ಕೆಆರ್‌ಪಿಪಿ ವೀಲನಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಕೊಪ್ಪಳ, ಬಳ್ಳಾರಿ ಭಾಗದದಿಂದ ಬಂದಿದ್ದ ಅಪಾರ ಬೆಂಬಲಿಗರ ಎದುರು ಘೋಷಣೆ ಮಾಡಿದ್ದಾರೆ. ನಾಳೆ ಜನಾರ್ದನ್ ರೆಡ್ಡಿ ಜೊತೆಗೆ ಜನಾರ್ದನರೆಡ್ಡಿ ಬೆಂಬಲಿಗರು ಬಿಜೆಪಿ ಸೇರ್ಪಡೆ ಆಗಲಿದ್ದಾರೆ. ಬಳ್ಳಾರಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಜೊತೆಗೆ ಮುನಿಸಿಕೊಂಡಿದ್ದ ಜನಾರ್ದನ ರೆಡ್ಡಿ ಪತ್ನಿ ಅರುಣಾ ರೆಡ್ಡಿಯನ್ನು ಬಳ್ಳಾರಿಯಲ್ಲಿ ಕಣಕ್ಕಿಳಿಸಿದ್ದರು. ಇದೀಗ ಬಳ್ಳಾರಿಯಿಂದ ಸ್ಪರ್ಧೆ ಮಾಡಿರುವ ಶ್ರೀರಾಮುಲು ಪರ ಕೆಲಸ ಮಾಡಲು ಜನಾರ್ದನ ರೆಡ್ಡಿ ನಿರ್ಧಾರ ಮಾಡಿದ್ದಾರೆ. ಕೃಷ್ಣಮಣಿ