ಬೆಳಗಾವಿ: ನಾಳೆಯಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಯಲಿದೆ. ಈ ದಿನವೇ ಎಂಇಎಸ್ ಪುಂಡಾಟ ನಡೆಸಲು ಮುಂದಾಗಿದ್ದಾರೆ.
ಯಾಕಂದರೆ ಆ ದಿನವೇ ಮಹಾಮೇಳ ನಡೆಸಲು ಸಜ್ಜಾಗಿದ್ದಾರೆ. ಆದ್ರೆ ಇದಕ್ಕೆ ಪೊಲೀಸ್ ಆಯುಕ್ತ ಸಿದ್ದರಾಯ್ಯ ಅನುಮತಿ ನೀಡಿಲ್ಲ. ಹೀಗಾಗಿ ಎಂಇಎಸ್ ಪುಂಡಾಟಕ್ಕೆ ಬ್ರೇಕ್ ಹಾಕಲು ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಎಂದು ಆದೇಶ ಹೊರಡಿಸಿದೆ.
ಬೆಳಗಾವಿ ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ವ್ಯಾಕ್ಸಿನ್ ಡಿಪೋ. ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯ ಧರ್ಮವೀರ ಸಂಭಾಜಿ ವೃತ್ತ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಾಜಿ ಉದ್ಯಾನವನ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿ ಸಂಭಾಜಿ ಉದ್ಯಾನದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.