ಸಿಬಿಐ ನಿರ್ದೇಶಕ ಹುದ್ದೆಯ ಆಯ್ಕೆ ಪ್ರಕ್ರಿಯೆಗೆ CJI ರಮಣ ವಿರೋಧ : ಆಯ್ಕೆ ಪಟ್ಟಿಯನ್ನು ಕೈ ಬಿಟ್ಟ ಕೇಂದ್ರ.!

ಸೋಮವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಬಿಐಗೆ ಹೊಸ ಮುಖ್ಯಸ್ಥರ ನೇಮಕಾತಿ ವಿಚಾರದ ಸಭೆಯಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಮುಂದಿಟ್ಟ ನಿಯಮವು ಇಬ್ಬರು ಅಧಿಕಾರಿಗಳನ್ನು ಆಯ್ಕೆ ಪಟ್ಟಿಯಿಂದ ಹೊರಕ್ಕಿರಿಸುವಂತೆ ಮಾಡಿದೆ.

ಸಿಜೆಐ ರಮಣ ಮತ್ತು ಮೋದಿ ಅವರಲ್ಲದೆ, ಲೋಕಸಭೆಯ ಕಾಂಗ್ರೆಸ್ ಮುಖಂಡ ಮತ್ತು ಪ್ರತಿಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಸೋಮವಾರ ಪ್ರಧಾನ ಮಂತ್ರಿಯ ನಿವಾಸದಲ್ಲಿ 90 ನಿಮಿಷಗಳ ಕಾಲ ಈ ಕುರಿತು ಚರ್ಚೆ ನಡೆಸಿದ್ದು ಈ ಸಭೆಯಲ್ಲಿ ಮೂವರ ಹೆಸರುಗಳು ಪೈನಲ್ ಮಾಡಲಾಗಿದೆ. ಮಹಾರಾಷ್ಟ್ರದ ಮಾಜಿ ಪೊಲೀಸ್ ಮಹಾ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್, ಸಶಸ್ತ್ರ ಸೀಮಾ ಬಲದ (ಎಸ್ಎಸ್‌ಬಿ) ಪ್ರಧಾನ ನಿರ್ದೇಶಕ ಕೆಆರ್ ಚಂದ್ರ ಮತ್ತು ಗೃಹ ಸಚಿವಾಲಯದ ವಿಶೇಷ ಕಾರ್ಯದರ್ಶಿ ವಿಎಸ್‌ಕೆ ಕೌಮುದಿ ಹೆಸರು ಚರ್ಚೆಗೆ ಬಂದಿದ್ದವು. ಇವರಲ್ಲಿ ಅತಿ ಹಿರಿಯರಾದ ಸೊಬೋಧ್ ಕುಮಾರ್ ಜೈಸ್ವಾಲ್ ಹೆಸರು ಮುಂಚೂಣಿಯಲ್ಲಿದ್ದಾರೆ ಎಂದು ವರದಿಯಾಗಿದೆ.

ಈ ಸಭೆಯ ನಡುವೆ ಸುಪ್ರೀಂಕೋರ್ಟ್ ಆದೇಶವೊಂದನ್ನು ಉಲ್ಲೇಖಿಸಿ ಮಾತನಾಡಿದ ಸಿಜೆಐ ರಮಣ, ಆರು ತಿಂಗಳಿಗಿಂತ ಕಡಿಮೆ ಸೇವಾವಧಿ ಹೊಂದಿರುವ ಅಧಿಕಾರಿಗಳನ್ನು ಪೊಲೀಸ್ ಮುಖ್ಯಸ್ಥರ ಹುದ್ದೆಗೆ ಪರಿಗಣಿಸಬಾರದು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಸಿಬಿಐ ನಿರ್ದೇಶಕರದ ನೇಮಕಾತಿ ಸಂದರ್ಭದಲ್ಲಿ ಹಿಂದೆಂದೂ ಪಾಲನೆಯಾಗದ ‘ಆರು ತಿಂಗಳ ನಿಯಮ’ದ ಬಗ್ಗೆ ಸಿಜೆಐ ರಮಣ ಪ್ರಸ್ತಾಪಿಸಿದ್ದು ಆಯ್ಕೆ ಸಮಿತಿ ಈ ಕಾನೂನನ್ನು ಪಾಲಿಸಬೇಕು ಎಂದು ಅವರು ಹೇಳಿದ್ದಾರೆ. ಇದಕ್ಕೆ ವಿರೋಧ ಪಕ್ಷದ ಕಾಂಗ್ರೆಸ್ ನಾಯಕರಾಗಿ ಸಮಿತಿಯಲ್ಲಿರುವ ಅಧೀರ್ ರಂಜನ್ ಚೌಧರಿ ಅವರು ಈ ನಿಯಮವನ್ನು ಬೆಂಬಲಿಸಿದ್ದು, ಮೂರು ಸದಸ್ಯರ ಸಮಿತಿಯಲ್ಲಿ ಬಹುಮತದ ಬೆಂಬಲ ಸಿಕ್ಕಿದೆ.

ಹಾಗಾಗಿ ಸರ್ಕಾರ ಶಾರ್ಟ್ ಲಿಸ್ಟ್ ಮಾಡಿ ಅಂತಿಮ ಪಟ್ಟಿಯಲ್ಲಿದ್ದ ಪ್ರಮುಖ ಹೆಸರುಗಳಾದ, ಆಗಸ್ಟ್ 31ರಂದು ನಿವೃತ್ತರಾಗಲಿರುವ ಗಡಿ ಭದ್ರತಾ ಪಡೆಯ ಮುಖ್ಯಸ್ಥ ರಾಕೇಶ್ ಆಸ್ಥಾನಾ, ಮೇ 31ರಂದು ನಿವೃತ್ತರಾಗಲಿರುವ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಮುಖ್ಯಸ್ಥ ವೈಸಿ ಮೋದಿ ಅವರು ಈ ನಿಯಮಗಳಿಗೆ ಒಳಪಡದ ಕಾರಣ ಅನರ್ಹಗೊಳಿಸಲಿದೆ.

ಪ್ರತಿಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅಸಮಾಧಾನ

ಸಿಬಿಐನಂತಹ ಉನ್ನತ ಸಂಸ್ಥೆಯ ಮುಖ್ಯಸ್ಥರ ಹುದ್ದೆಯ ನೇಮಕಾತಿಗೆ ಸರ್ಕಾರ ತೀರಾ ಸಾಮಾನ್ಯ ಪ್ರಕ್ರಿಯೆ ನಡೆಸುತ್ತಿದೆ ಎಂದು ಅಧೀರ್ ರಝಮನ್ ಚೌಧರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನನಗೆ 109 ಹೆಸರುಗಳು ಲಭಿಸಿವೆ. ಈ ಪೈಕಿ ಸಮಿತಿ ಸಭೆಗೆ ಮುನ್ನ ಅಂದರೆ ನಿನ್ನೆ 16 ಹೆಸರುಗಳನ್ನು ಪಟ್ಟಿಯಲ್ಲಿರಿಸಲಾಗಿದೆ ಎಂದಿದ್ದಾರೆ.

ಮೇ 11 ರಂದು ನನಗೆ 109 ಹೆಸರುಗಳನ್ನು ನೀಡಲಾಯಿತು ಮತ್ತು ಇಂದು ಮಧ್ಯಾಹ್ನ 1 ರ ಹೊತ್ತಿಗೆ 10 ಹೆಸರುಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದ್ದು, ಸಂಜೆ 4 ರ ಹೊತ್ತಿಗೆ ಆರು ಹೆಸರುಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಈ ಪ್ರಾಸಂಗಿಕ ವಿಧಾನವು ಹೆಚ್ಚು ಆಕ್ಷೇಪಾರ್ಹವಾಗಿದೆ ಮತ್ತು ಕಾರ್ಯವಿಧಾನವನ್ನು ಅನುಸರಿಸಿದ ರೀತಿ, ಸಮಿತಿಯ ಆದೇಶಕ್ಕೆ ವಿರುದ್ಧವಾಗಿತ್ತು ಎಂದು ಚೌಧರಿ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದರು.

ಫೆಬ್ರವರಿ ತಿಂಗಳಿನಿಂದಲೂ ಸಿಬಿಐ ಮುಖ್ಯಸ್ಥರ ಹುದ್ದೆ ಖಾಲಿಯಿದ್ದು, ಇದಕ್ಕಾಗಿ ಇದೇ ಮೊದಲ ಬಾರಿ ನೇಮಕಾತಿ ಸಮಿತಿ ಸಭೆ ನಡೆದಿದೆ. 1984-87ನೇ ಅವಧಿಯ ನಾಲ್ಕು ಅತಿ ಹಿರಿಯ ಬ್ಯಾಚ್‌ಗಳ ಐಪಿಎಸ್ ಅಧಿಕಾರಿಗಳನ್ನು ಇದಕ್ಕೆ ಪರಿಗಣಿಸಲಾಗುತ್ತಿದೆ.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...