ಮೈಸೂರು: ವಿಷಾನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ ಐವರು ಗಂಭೀರವಾಗಿರುವ ಘಟನೆ ನಡೆದಿದೆ.
ಈ ಘಟನೆ ಮೈಸೂರಿ(Mysore)ನ ಹಳೇ ಕೆಸರೆಯ ಗುಜರಿ ಗೋದಾಮಿನಲ್ಲಿ ನಡೆದಿದೆ. ವಿಷಾನಿಲ ಸೋರಿಕೆಯಾಗುತ್ತಿದ್ದಂತೆ ಐವರು ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿದ್ದಾರೆ. ಅದೃಷ್ಟವಶಾತ್ ಅಸ್ವಸ್ಥಗೊಂಡವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಗೆ ನಿಖರ ಕಾರಮ ತಿಳಿದು ಬಂದಿಲ್ಲ.