• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಬೆಂಗಳೂರಿನಲ್ಲಿ ಟ್ರಾಫಿಕ್ ಬದಲಾವಣೆ: ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

ಪ್ರತಿಧ್ವನಿ by ಪ್ರತಿಧ್ವನಿ
May 9, 2026
in ಕರ್ನಾಟಕ
0
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಬೆಂಗಳೂರಿನಲ್ಲಿ ಟ್ರಾಫಿಕ್ ಬದಲಾವಣೆ: ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ
Share on WhatsAppShare on FacebookShare on Telegram

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಭಾನುವಾರ ಕೆಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮತ್ತು ವಾಹನ ನಿಲುಗಡೆ ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ. ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಹಾಗೂ ಪೊಲೀಸ್ ಇಲಾಖೆಗೆ ಸಹಕರಿಸುವಂತೆ ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ADVERTISEMENT

ಪ್ರಧಾನಿ ಮೋದಿ ಅವರು ಕನಕಪುರ ರಸ್ತೆಯಲ್ಲಿರುವ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಈ ಪ್ರದೇಶಗಳಲ್ಲಿ ತಾತ್ಕಾಲಿಕ ಸಂಚಾರ ನಿರ್ಬಂಧ

  • ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಡಿಜಿಸಿಎ ಕಚೇರಿವರೆಗೆ
  • ಎಚ್‌ಎಎಲ್ ವಿಮಾನ ನಿಲ್ದಾಣದ ಗೇಟ್ ನಂ.30 ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್‌ನಿಂದ ಗೇಟ್ ನಂ.30ರವರೆಗೆ
  • ಹಳೆ ವಿಮಾನ ನಿಲ್ದಾಣ ರಸ್ತೆಯ ಎಸ್‌ಡಿ ರಸ್ತೆ ಜಂಕ್ಷನ್‌ನಿಂದ ಟ್ರಿನಿಟಿ ಜಂಕ್ಷನ್‌ವರೆಗೆ
  • ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನೈಸ್ ರಸ್ತೆಯಲ್ಲಿ ಕೆಲವು ಭಾಗಗಳಲ್ಲಿ ಸಂಚಾರ ನಿರ್ಬಂಧ

ವಾಹನ ನಿಲುಗಡೆ ವ್ಯವಸ್ಥೆ

ಗಣ್ಯರು ಹಾಗೂ ಹಿರಿಯ ಅಧಿಕಾರಿಗಳಿಗಾಗಿ ಹೆಚ್‌ಎಎಲ್ ಟ್ರಾನ್ಸ್‌ಪೋರ್ಟ್ ಡಿಪಾರ್ಟ್‌ಮೆಂಟ್ ಪಾರ್ಕಿಂಗ್ ಮತ್ತು ಹೆಚ್‌ಎಎಲ್ ಬಸ್ ಯಾರ್ಡ್‌ನಲ್ಲಿ ವಿಶೇಷ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕರು ಬೆಳಗ್ಗೆ 8.30ರೊಳಗೆ ಏರ್‌ಪೋರ್ಟ್ ಎಕ್ಸಿಟ್ ರಸ್ತೆ ಗೇಟ್ ನಂ.2 ಮಾರ್ಗವಾಗಿ ವಿಶ್ವೇಶ್ವರಯ್ಯ ಕಾಲೇಜು ಮೈದಾನದಲ್ಲಿ ವಾಹನ ನಿಲುಗಡೆ ಮಾಡಬೇಕು ಎಂದು ಸೂಚಿಸಲಾಗಿದೆ.

ಸಾರ್ವಜನಿಕರಿಗೆ ಪರ್ಯಾಯ ಮಾರ್ಗ ಸೂಚನೆ

ತುಮಕೂರು ರಸ್ತೆ, ಮಾಗಡಿ ರಸ್ತೆ, ಮೈಸೂರು ರಸ್ತೆ ಹಾಗೂ ನೈಸ್ ರಸ್ತೆಯಿಂದ ಕನಕಪುರ ರಸ್ತೆಗೆ ತೆರಳುವ ವಾಹನಗಳಿಗೆ ವಿವಿಧ ಪರ್ಯಾಯ ಮಾರ್ಗಗಳನ್ನು ಗುರುತಿಸಲಾಗಿದೆ. ಸಿ.ಎಂ.ಟಿ.ಐ ಜಂಕ್ಷನ್, ಸುಮನ್ ಹಳ್ಳಿ ಜಂಕ್ಷನ್, ನಾಯಂಡಹಳ್ಳಿ ಜಂಕ್ಷನ್ ಹಾಗೂ ಕೋಣನಕುಂಟೆ ಕ್ರಾಸ್ ಮೂಲಕ ವಾಹನ ಸಂಚಾರವನ್ನು ಮರುನಿರ್ದೇಶಿಸಲಾಗಿದೆ.

ಇದೇ ರೀತಿ ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ಹಾಗೂ ಕೆಂಗೇರಿ ಭಾಗಗಳಿಂದ ಸಂಚರಿಸುವ ವಾಹನಗಳು ಅಂಜನಾಪುರ, ಉತ್ತರಹಳ್ಳಿ, ವಸಂತಪುರ ಕ್ರಾಸ್ ಸೇರಿದಂತೆ ಸೂಚಿಸಲಾದ ಪರ್ಯಾಯ ರಸ್ತೆಗಳನ್ನು ಬಳಸುವಂತೆ ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ ಬಳಸುವಂತೆ ಹಾಗೂ ಪ್ರಯಾಣಕ್ಕೆ ಹೆಚ್ಚುವರಿ ಸಮಯ ಮೀಸಲಿಡುವಂತೆ ಸೂಚಿಸಲಾಗಿದೆ.

Tags: #ArtOfLiving#BengaluruTraffic#HALAirport#KanakapuraRoad#narendramodi#pmmodi#TrafficAlert#TrafficDiversionBengaluruNewsbengalurupolice
Previous Post

ವಿಜಯ್‌ಗೆ ಬೆಂಬಲ ಘೋಷಿಸಿದ ಮುಸ್ಲಿಂ ಲೀಗ್‌ : ನಿರೀಕ್ಷೆಗೂ ಮೀರಿ ಏರಿಕೆಯಾದ ದಳಪತಿ ಸಂಖ್ಯಾಬಲ..

Next Post

ಕಾಂಗ್ರೆಸ್ ನಲ್ಲಿ ವಿವಾದ: ಮಹಿಳಾ ಶಾಸಕಿ ಜೊತೆ ನಾಯಕನ ವರ್ತನೆಗೆ ಆಕ್ರೋಶ

Related Posts

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?
Top Story

ಕೋಚಿಂಗ್‌ ಸೆಂಟರ್‌ಗಳಿಂದಲೇ ಲೀಕಾಯ್ತಾ ನೀಟ್‌ ಪ್ರಶ್ನೆ ಪತ್ರಿಕೆ..‌? : ಸಚಿವ ಪಾಟೀಲ್ ಸ್ಫೋಟಕ ಆರೋಪಗಳೇನು..?

by ಪ್ರತಿಧ್ವನಿ
May 12, 2026
0

ಬೆಂಗಳೂರು : ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ...

Read moreDetails
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

May 12, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

May 12, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

“ಮನಮೋಹನ್ ಸಿಂಗ್ ಪ್ರಬುದ್ಧತೆ, ಆತ್ಮವಿಶ್ವಾಸದಿಂದ ಆರ್ಥಿಕತೆ ನೋಡಿಕೊಂಡಿದ್ದರು, ಮೋದಿ ವಿಫಲರಾಗಿದ್ದಾರೆ”

May 12, 2026
Next Post
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಬೆಂಗಳೂರಿನಲ್ಲಿ ಟ್ರಾಫಿಕ್ ಬದಲಾವಣೆ: ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

ಕಾಂಗ್ರೆಸ್ ನಲ್ಲಿ ವಿವಾದ: ಮಹಿಳಾ ಶಾಸಕಿ ಜೊತೆ ನಾಯಕನ ವರ್ತನೆಗೆ ಆಕ್ರೋಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!