
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಕಿರೀಟ ಗೆದ್ದ ಸಂಭ್ರಮದಲ್ಲಿ ಸೂತಕದ ಛಾಯೆ ಆವರಿಸಿದೆ.ಆರ್‌ಸಿಬಿ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನತ್ತ ಬಂದ ಅಭಿಮಾನಿಗಳು ಮಸಣ ಸೇರಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ
ಭೀಕರ ಕಾಲ್ತುಳಿತವೇ ಸಂಭವಿಸಿದೆ.
ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ
ಇನ್ನೂ 10 ಮಂದಿ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.

ಘಟನೆಯಲ್ಲಿ ಅಸ್ವಸ್ಥಗೊಂಡ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವೈದೇಹಿ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆಯಲ್ಲಿ ಅಸ್ವಸ್ಥರಾದ ಜನರಿಗೆ ಚಿಕಿತ್ಸೆ ಕೊಡಲಾಗುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
