ಚಾಮರಾಜನಗರ: ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಹಬ್ಬದ ದಿನದಂದೇ ಚಾಮರಾಜನಗರದಲ್ಲಿ ಭಾರಿ ಅವಘಡ ಸಂಭವಿಸಿದೆ.
ಭತ್ತ ಕಟಾವು ಮಾಡುವ ಯಂತ್ರದ ಲಾರಿ ಮತ್ತು ಬೈಕ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನ ಜಿನಕನಹಳ್ಳಿ ಬಳಿ ನಡೆದಿದೆ.ಸಂತೋಷ್, ಸೌಮ್ಯ, ಲಾವಣ್ಯ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ ಮೂವರು ಕೊಳ್ಳೇಗಾಲ ತಾಲ್ಲೂಕು ಪಾಳ್ಯ ಗ್ರಾಮದ ನಿವಾಸಿಗಳಾಗಿದ್ದಾರೆ. ಮೂವರು ಬೈಕ್ ನಲ್ಲಿ ತೆರಳುತ್ತಿದ್ದು ಈ ವೇಳೆ ಅಪಘಾತ ಸಂಭವಿಸಿದೆ.

ಕೊಳ್ಳೇಗಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತಂತೆ ಪ್ರಕರಣ ದಾಖಲಾಗಿದೆ. ಹಬ್ಬದ ದಿನವೇ ಅವಘಡ ಸಂಭವಿಸಿರೋದ್ರಿಂದ ಕುಟುಂಬ ಸದಸ್ಯರಲ್ಲಿ ನೀರವ ಮೌನ ಆವರಿಸಿದೆ. ಇಡೀ ಗ್ರಾಮ ಶೋಕ ಸಾಗರದಲ್ಲಿ ಮುಳುಗಿದೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಅಂತ ಪ್ರತ್ಯಕ್ಷದರ್ಶಿಗಳು ವಿವರಣೆ ನೀಡಿದ್ದಾರೆ. ಅಪಘಾತದ ರಭಸಕ್ಕೆ ಎಲ್ಲರೂ ಸ್ಥಳದಲ್ಲೇ ಸಾವನಪ್ಪಿದ್ದು , ವಿಷಯ ತಿಳಿದ ಸಂಬಂಧಿಕರು ಶಾಕ್ ಆಗಿದ್ದಾರೆ.