• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಹು ನಿರೀಕ್ಷಿತ “ಗೌರಿ” ಚಿತ್ರದ ಟ್ರೇಲರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್..

ಪ್ರತಿಧ್ವನಿ by ಪ್ರತಿಧ್ವನಿ
August 6, 2024
in Top Story, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
ಬಹು ನಿರೀಕ್ಷಿತ “ಗೌರಿ” ಚಿತ್ರದ ಟ್ರೇಲರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್..
Share on WhatsAppShare on FacebookShare on Telegram

ಇಂದ್ರಜಿತ್‍ ಲಂಕೇಶ್ ನಿರ್ದೇಶನದಲ್ಲಿ ಸಮರ್ಜಿತ್ ಲಂಕೇಶ್‍ ನಾಯಕನಾಗಿ ನಟಿಸಿರುವ ‘ಗೌರಿ’ ಚಿತ್ರ ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ “ಗೌರಿ”(Gauri) ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.ನಟ ಕಿಚ್ಚ ಸುದೀಪ್‍ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ (Kiccha Sudeep Released Trailer) ಚಿತ್ರತಂಡಕ್ಕೆ ಶುಭಕೋರಿದ್ದಾರೆ.ನಟಿ ಪ್ರಿಯಾಂಕ ಉಪೇಂದ್ರ(Priyanka Upendra), ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ ಗೌಡ, ಹಿರಿಯ ವಕೀಲರಾದ ಶ್ಯಾಮ್ ಮುಂತಾದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಭಾಗಿಯಾಗಿದ್ದರು.

ADVERTISEMENT

ಟ್ರೇಲರ್ ಬಿಡುಗಡೆ ನಂತರ ಗಣ್ಯರು ಹಾಗೂ ಚಿತ್ರತಂಡದವರು ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್ ಅವರು, ‘ಇಂದ್ರಜಿತ್‍ (Indrajith)ಮತ್ತು ನಾನು ಹಳೆಯ ಸ್ನೇಹಿತರು. ಇಬ್ಬರೂ ಜೊತೆಗೆ ಬ್ಯಾಡ್ಮಿಂಟನ್‍ ಆಡುತ್ತಿದ್ದೆವು. ಲಂಕೇಶ್‍ ಅವರ ಮಗ ಅಂತ ಗೊತ್ತಿರಲಿಲ್ಲ. ಆದರೆ, ಬಹಳ ಚೆನ್ನಾಗಿ ಶಟಲ್‍ ಆಡೋರು. ‘ಟ್ರೇಲರ್ ನೋಡಿ ನಮ್ಮ ವಿಮರ್ಶೆ, ಅಭಿಪ್ರಾಯ ಏನೇ ಇರಲಿ. ಇವತ್ತು ಅವರಿಬ್ಬರಿಗೆ ಆಗುವಷ್ಟು ಸಂತೋಷ, ಈ ಪ್ರಪಂಚದಲ್ಲಿ ಬೇರೆ ಯಾರಿಗೂ ಆಗೋದಕ್ಕೆ ಸಾಧ್ಯವೇ ಇಲ್ಲ.ಸಮರ್ಜಿತ್‍ನ ಯಶಸ್ಸು ಅವನೊಬ್ಬನ ಯಶಸ್ಸು ಆಗಿರುವುದಿಲ್ಲ. ಅದರಲ್ಲಿ ಇಂದ್ರಜಿತ್‍ ಅವರ ಯಶಸ್ಸೂ ಇದೆ’.

ಇನ್ನು ಸಾನ್ಯ ಅವರು ಉತ್ತಮ ನಟಿ ಅಷ್ಟೇ ಅಲ್ಲ ಒಳ್ಳೆಯ ಬರಹಗಾರ್ತಿ ಕೂಡ. ಅದು ನನಗೆ “ಬಿಗ್ ಬಾಸ್”(Big Boss) ಸಮಯದಲ್ಲಿ ತಿಳಿಯಿತು. ಈ ಸಂಜೆಗಾಗಿ ಸಮರ್ಜಿತ್ ಮತ್ತು ಸಾನ್ಯಾ ಬಹಳ ಕಾತುರದಿಂದ ಕಾದಿರುತ್ತಾರೆ. ಬಿಡುಗಡೆಗಿಂತ ಇಂಥಹ ಸಂಜೆಗಳನ್ನು ನೀವು ಖುಷಿಪಡಿ. ಸಿನಿಮಾ ಬಿಡುಗಡೆಯಾದ ಮೇಲೆ ಜೀವನ ಇದೇ ತರಹ ಇರುವುದಿಲ್ಲ. ಅದು ನಿಮ್ಮನ್ನು ಎಲ್ಲಿಗೆ ಕೊಂಡೊಯ್ಯುತ್ತದೋ ಗೊತ್ತಿಲ್ಲ. ಅದಕ್ಕೆ ಸಿದ್ದರಾಗಿರಿ’ ಎಂದರು.ಸುದೀಪ್ ಹಾಗೂ ನನ್ನ ಗೆಳೆತನ ಎರಡು ದಶಕಗಳಿಗೂ ಮೀರಿದ್ದು. ಅವರ ಜೊತೆ ಶಟಲ್ ಆಡಿದ ದಿನಗಳು ಈಗಲೂ ಕಣ್ಣಮುಂದೆ ಇದೆ. ಹಿಂದೆ ನನ್ನ ನಿರ್ದೇಶನದ ಚಿತ್ರವೊಂದರಲ್ಲಿ ಅವರು ವಿಶೇಷ ಪಾತ್ರದಲ್ಲಿ ನಟಿಸಿದ್ದರು.

ಆದರೆ ಅವರು ನನ್ನಿಂದ ಯಾವ ಸಂಭಾವನೆಯನ್ನು ಪಡೆದಿರಲಿಲ್ಲ. ಆಮೇಲೆ ನಾನು ಅವರಿಗೆ ಏನು ಕೊಡುವುದು? ಅವರ ಬಳಿ ಎಲ್ಲಾ ಇದೆ ಎಂದು ಕೊಂಡು, ಅವರ ಮಗಳಿಗೆ ವಿಶೇಷ ಉಡುಗೊರೆ ತೆಗೆದುಕೊಂಡು ಅವರ ಮನೆಗೆ ಹೋದೆ. ಆದರೆ ಸುದೀಪ್ ಅವರು ಅದನ್ನು ನನಗೆ ಕೊಡಲು ಬಿಡಲಿಲ್ಲ. ಈ ರೀತಿ ನನಗೆ ಮೊದಲಿನಿಂದಲೂ ಅವರು ನನಗೆ ಸಪೋರ್ಟ್ ಮಾಡುತ್ತಾ ಬರುತ್ತಿದ್ದಾರೆ.

ಇಂದು ನನ್ನ ಮಗನ ಮೊದಲ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಕೊಟ್ಟಿದ್ದಾರೆ.ಅವರಿಗೆ ಧನ್ಯವಾದ.ಇಂದು ಕೂಡ ನನ್ನ ಬಳಿ ಅವರು ಯಾವ ಉಡುಗೊರೆ ತೆಗೆದುಕೊಳ್ಳುವುದಿಲ್ಲ. ಹಾಗಾಗಿ ಅವರಿಗಾಗಿ ಇಂಗ್ಲೆಂಡ್ ನಿಂದ ವಿಶೇಷ ಬ್ಯಾಟ್ ತರಿಸಿದ್ದೇನೆ ಇಂದ್ರಜಿತ್ ಲಂಕೇಶ್ ತಿಳಿಸಿದರು.‘ಗೌರಿ’ ಚಿತ್ರದ ಟ್ರೇಲರ್ ಸುದೀಪ್ ಅವರು ಬಿಡುಗಡೆ ಮಾಡಿದಕ್ಕೆ ಸಂತಸ ವ್ಯಕ್ತಪಡಿಸಿದ ನಾಯಕ ಸಮರ್ಜಿತ್(Samarjith) ಹಾಗೂ ನಾಯಕಿ ಸಾನ್ಯಾ ಅಯ್ಯರ್(Sanya Iyer), ಆಗಸ್ಟ್ ಹದಿನೈದರಂದು ಬಿಡುಗಡೆಯಾಗುತ್ತಿರುವ ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು.

“ಗೌರಿ” (Gauri) ಮೂಲಕ ಸಮರ್ಜಿತ್ ಲಂಕೇಶ್ ಹಾಗೂ ನಾಯಕಿ ಸಾನ್ಯಾ ಅಯ್ಯರ್ ಚಂದನವನಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.ನೈಜ ಘಟನೆ ಆಧರಿಸಿ ನಿರ್ಮಾಣವಾಗಿರುವ ‘ಗೌರಿ’ ಚಿತ್ರದಲ್ಲಿ ಪ್ರಿಯಾಂಕ ಉಪೇಂದ್ರ (Special Appearance), ಅಕುಲ್ ಬಾಲಾಜಿ(Akul Balaji), ಸಿಹಿ ಕಹಿ ಚಂದ್ರು(Sihi Kahi Chandru), ಮುಖ್ಯಮಂತ್ರಿ ಚಂದ್ರು(Mukhyamanthri Chandru), ‘ಕಾಂತಾರ’ ಖ್ಯಾತಿಯ ಮಾಲತಿ ಸುಧೀರ್ ಸಂಪತ್ ಮೈತ್ರೇಯ(Sudheer Sampath Mythreya), ಚಂದುಗೌಡ(Chandu Gowda) ಸೇರಿದಂತೆ ಬಹಳಷ್ಟು ಜನ ನಟಿಸಿದ್ದಾರೆ. ಚಿತ್ರಕ್ಕೆ ಎ.ಜೆ.ಶೆಟ್ಟಿ ಹಾಗೂ ಕೃಷ್ಣಕುಮಾರ್ ಛಾಯಾಗ್ರಹಣ ಮಾಡಿದ್ದಾರೆ.

Tags: Gouri Kannada MovieIndrajith LankeshKarnataka CinemaKiccha Sudheepapriyanka upendraSamarjithsandalwoodSanya Iyer
Previous Post

ಮಂಡ್ಯದಲ್ಲಿ ಕಾಂಗ್ರೆಸ್​ ಜನಾಂದೋಲನ ಕಾರ್ಯಕ್ರಮ ನೇರಪ್ರಸಾರ

Next Post

ಇಂದ್ರಜೀತ್ ಲಂಕೇಶ್ ಮಾತಿಗೆ ಶಾಕ್ ಆದ ಕಿಚ್ಚ ಸುದೀಪ್..!

Related Posts

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
0

ಮಾನವ ಸಮಾಜದ ಅಭ್ಯುದಯಕ್ಕೆ ಬುನಾದಿಯೇ ಭೂಮಿ ಭೂಮಿಯನ್ನಾಧರಿಸಿದ ಕೃಷಿ, ಬೇಸಾಯ ಮತ್ತು ಹೈನುಗಾರಿಕೆಯ ವೃತ್ತಿಗಳು. ಬೇಸಾಯದ ತಂತ್ರಗಳು ಮತ್ತು ವಿಧಾನಗಳು ಎಷ್ಟೇ ಬದಲಾದರೂ, ಆಧುನಿಕ ವಿಜ್ಞಾನವು ಎಷ್ಟೇ...

Read moreDetails
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
Next Post

ಇಂದ್ರಜೀತ್ ಲಂಕೇಶ್ ಮಾತಿಗೆ ಶಾಕ್ ಆದ ಕಿಚ್ಚ ಸುದೀಪ್..!

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!