• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಹೊಂಬಾಳೆ ಫಿಲಂಸ್ ನಿರ್ಮಾಣದ ‘ಧೂಮಂ’ ಚಿತ್ರದ ಟ್ರೇಲರ್ ಬಿಡುಗಡೆ

Any Mind by Any Mind
June 8, 2023
in ಸಿನಿಮಾ
0
ಹೊಂಬಾಳೆ ಫಿಲಂಸ್ ನಿರ್ಮಾಣದ ‘ಧೂಮಂ’ ಚಿತ್ರದ ಟ್ರೇಲರ್ ಬಿಡುಗಡೆ
Share on WhatsAppShare on FacebookShare on Telegram

ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್, ‘ಧೂಮಂ’ ಎಂಬ ಚಿತ್ರವನ್ನು ನಿರ್ಮಿಸುವ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿರುವುದು ಗೊತ್ತೇ ಇದೆ. ಈ ಚಿತ್ರವು ಜೂನ್ 23ಕ್ಕೆ ಬಿಡುಗಡೆಯಾಗುತ್ತಿದ್ದು, ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದೆ.

ADVERTISEMENT


ವಿಜಯ್ ಕಿರಗಂದೂರು ನಿರ್ಮಾಣದ, ‘ಲೂಸಿಯಾ’ ಮತ್ತು ‘ಯೂ ಟರ್ನ್’ ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಈ ಚಿತ್ರದಲ್ಲಿ ಫಹಾದ್ ಫಾಸಿಲ್, ಅಪರ್ಣ ಬಾಲಮುರಳಿ, ಅಚ್ಯುತ್ ಕುಮಾರ್, ರೋಶನ್ ಮ್ಯಾಥ್ಯೂ, ವಿನೀತ್ ರಾಧಾಕೃಷ್ಣನ್, ಅನು ಮೋಹನ್, ಜಾಯ್ ಮ್ಯಾಥ್ಯೂ, ನಂದು ಮುಂತಾದವರು ನಟಿಸಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ, ಸುರೇಶ್ ಅವರ ಸಂಕಲನ ಮತ್ತು ಪ್ರೀತಾ ಜಯರಾಮನ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.


ಸಮಯದ ವಿರುದ್ಧದ ಓಟದಲ್ಲಿ ಸಿಕ್ಕಿರುವ ಅವಿ (ಫಹಾದ್ ಫಾಸಿಲ್) ಮತ್ತು ದಿಯಾ (ಅಪರ್ಣ) ಸುತ್ತ ಈ ಚಿತ್ರ ಸುತ್ತುತ್ತದೆ. ಸುತ್ತ ಅಪಾಯ ಮತ್ತು ಮನಸ್ಸೊಳಗಿನ ಭಯವನ್ನು ಮೆಟ್ಟಿ ನಿಲ್ಲುವುದಕ್ಕೆ ಅವರಿಬ್ಬರೂ ಏನೆಲ್ಲಾ ತ್ಯಾಗಗಳನ್ನು ಮಾಡುತ್ತಾರೆ ಎಂಬುದೇ ಈ ಚಿತ್ರದ ಕಥೆ. ನಿರ್ದೇಶನದ ಜೊತೆಗೆ ಕಥೆ ಮತ್ತು ಚಿತ್ರಕಥೆಯನ್ನು ಪವನ್ ಅವರೇ ರಚಿಸಿದ್ದಾರೆ.


ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಪವನ್ ಕುಮಾರ್, ‘ಕಳೆದ ಒಂದು ದಶಕದಿಂದ ಈ ಚಿತ್ರವನ್ನು ಮಾಡಬೇಕು ಎಂಬ ಪ್ರಯತ್ನದಲ್ಲಿದ್ದೆ ಹಾಗೂ ಒಂದು ಅದ್ಭುತ ಚಿತ್ರ ಮಾಡುವ ನಿಟ್ಟಿನಲ್ಲಿ ಚಿತ್ರಕಥೆಯನ್ನು ಹಲವು ಬಾರಿ ತಿದ್ದಿದ್ದೆ. ಒಂದು ದಶಕದ ನನ್ನ ಕನಸನ್ನು ಇದೀಗ ಹೊಂಬಾಳೆ ಪ್ರೊಡಕ್ಷನ್ಸ್ ಸಂಸ್ಥೆಯು ನನಸು ಮಾಡಿದೆ. ಒಂದು ವಿಭಿನ್ನವಾದ ಕಥೆಯನ್ನು ತೆರೆಯ ಮೇಲೆ ತರುವುದಕ್ಕೆ ಕೈ ಜೋಡಿಸಿದೆ. ಹಲವು ಪ್ರತಿಭಾವಂತರ ತಂಡವನ್ನು ನೀಡಿ ಒಂದೊಳ್ಳೆಯ ಚಿತ್ರ ನೀಡುವುದಕ್ಕೆ ಸಂಪೂರ್ಣ ಸಹಕಾರ ನೀಡಿದೆ. ಈ ಚಿತ್ರ ಮತ್ತು ಕಥೆಯನ್ನು ಪ್ರೇಕ್ಷಕರು ಹೇಗೆ ಸ್ವೀಕರಿಸುತ್ತಾರೆ ಎಂಬ ಕುತೂಹಲ ನನಗಿದೆ’ ಎನ್ನುತ್ತಾರೆ.


‘ಧೂಮಂ’ ಚಿತ್ರದ ಟ್ರೇಲರ್ ಈಗಾಗಲೇ ಬಿಡಗುಡೆಯಾಗಿದ್ದು, ವೀಕ್ಷಕರಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಚಿತ್ರವನ್ನು ಇದೇ ಜೂನ್ 23ರಂದು ಕೇರಳ ರಾಜ್ಯಾದ್ಯಂತ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವುದಕ್ಕೆ ಉದ್ದೇಶಿಸಲಾಗಿದೆ.

Tags: DhoomanFahadh FaasilHombale FilmsPoorchandra Tejaswiಧೂಮಂಪೂರ್ಣಚಂದ್ರ ತೇಜಸ್ವಿಫಹಾದ್ ಫಾಸಿಲ್ಹೊಂಬಾಳೆ ಫಿಲ್ಮ್ಸ್​
Previous Post

ಗೃಹಜ್ಯೋತಿ ಯೋಜನೆ ಅನುಷ್ಠಾನ ಕುರಿತಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ

Next Post

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಆಟಗಾರ : ಎಕ್ಸ್​ಕ್ಲೂಸಿವ್​ ಫೋಟೋಸ್​

Related Posts

‘ಮಂಗಳ ಗೌರಿ ಮದುವೆ’ ಧಾರಾವಾಹಿ ಖ್ಯಾತಿಯ ಕಿರುತೆರೆ ನಟ ವಿಜಯಕುಮಾರ್ ಜಿತೂರಿ ಇನ್ನಿಲ್ಲ
Top Story

‘ಮಂಗಳ ಗೌರಿ ಮದುವೆ’ ಧಾರಾವಾಹಿ ಖ್ಯಾತಿಯ ಕಿರುತೆರೆ ನಟ ವಿಜಯಕುಮಾರ್ ಜಿತೂರಿ ಇನ್ನಿಲ್ಲ

by ಪ್ರತಿಧ್ವನಿ
August 11, 2026
0

ಗದಗ: 'ಮಂಗಳ ಗೌರಿ ಮದುವೆ' ಧಾರಾವಾಹಿ ಖ್ಯಾತಿಯ ಕಿರುತೆರೆ ಹಾಗೂ ರಂಗಭೂಮಿ ಕಲಾವಿದ, ಹಿರಿಯ ನಟ ವಿಜಯಕುಮಾರ್ ಜಿತೂರಿ ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಸೋಮವಾರ...

Read moreDetails
ದರ್ಶನ್​ಗೆ ಮತ್ತೆ ಸಂಕಷ್ಟ: ಮಾಫಿ ಸಾಕ್ಷಿ ಆಕ್ಷೇಪಣೆಗಿಲ್ಲ ಅವಕಾಶ

ದರ್ಶನ್​ಗೆ ಮತ್ತೆ ಸಂಕಷ್ಟ: ಮಾಫಿ ಸಾಕ್ಷಿ ಆಕ್ಷೇಪಣೆಗಿಲ್ಲ ಅವಕಾಶ

August 10, 2026
BBK 13: ಯುವತಿ ಮುಖಕ್ಕೆ ಸಗಣಿ..ಯುವಕನ ತಲೆ ಬೋಳು: ಸಾಮಾನ್ಯ ಸ್ಪರ್ಧಿ ಆಯ್ಕೆಗೆ ಕಠಿಣ ‘ಅಗ್ನಿಪರೀಕ್ಷೆ’

BBK 13: ಯುವತಿ ಮುಖಕ್ಕೆ ಸಗಣಿ..ಯುವಕನ ತಲೆ ಬೋಳು: ಸಾಮಾನ್ಯ ಸ್ಪರ್ಧಿ ಆಯ್ಕೆಗೆ ಕಠಿಣ ‘ಅಗ್ನಿಪರೀಕ್ಷೆ’

August 9, 2026
‘ರಾಮಾಯಣ’ ಸಿನಿಮಾ ಬಿಡುಗಡೆ ದಿನಾಂಕ ಬದಲಾವಣೆ; ಭಾರತದಲ್ಲಿ ಯಾವಾಗ ತೆರೆಗೆ ಬರಲಿದೆ?

‘ರಾಮಾಯಣ’ ಸಿನಿಮಾ ಬಿಡುಗಡೆ ದಿನಾಂಕ ಬದಲಾವಣೆ; ಭಾರತದಲ್ಲಿ ಯಾವಾಗ ತೆರೆಗೆ ಬರಲಿದೆ?

August 8, 2026
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
Next Post
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಆಟಗಾರ : ಎಕ್ಸ್​ಕ್ಲೂಸಿವ್​ ಫೋಟೋಸ್​

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಆಟಗಾರ : ಎಕ್ಸ್​ಕ್ಲೂಸಿವ್​ ಫೋಟೋಸ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada