• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಡಾ.ಅಮರನಾಥ ರೆಡ್ಡಿ ವಿ ನಿರ್ಮಿಸಿ, ನಟಿಸಿರುವ “ಆದರ್ಶ ರೈತ” ಚಿತ್ರದ ಟ್ರೇಲರ್ ರಿಲೀಸ್‌

ಪ್ರತಿಧ್ವನಿ by ಪ್ರತಿಧ್ವನಿ
September 7, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಡಾ.ಅಮರನಾಥ ರೆಡ್ಡಿ ವಿ ನಿರ್ಮಿಸಿ, ನಟಿಸಿರುವ “ಆದರ್ಶ ರೈತ” ಚಿತ್ರದ ಟ್ರೇಲರ್ ರಿಲೀಸ್‌
Share on WhatsAppShare on FacebookShare on Telegram

ರೈತನ ಕುರಿತು ಸಾಕಷ್ಟು ಚಿತ್ರಗಳು ಬಂದಿದೆ‌. ಆದರೆ ರೈತ ಏನು ಮಾಡಬೇಕು? ಏನು ಮಾಡಬಾರದು? ಎಂದು ಹೇಳುವ ಕಥಾಹಂದರ ಹೊಂದಿರುವ “ಆದರ್ಶ ರೈತ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ, ಹಾಡುಗಳ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ನಟಿ ಪ್ರಿಯಾ ಹಾಸನ್, ವೇಗಸ್ ಆಸ್ಪತ್ರೆ ಮುಖ್ಯಸ್ಥರಾದ ನಾರಾಯಣ ಸ್ವಾಮಿ , ಸಿರಿ ಮ್ಯೂಸಿಕ್ ನ ಸುರೇಶ್ ಚಿಕ್ಕಣ್ಣ, ಆರ್ ವಿ ಚೌಡಪ್ಪ(ACP) ಹಾಗೂ ನಿರ್ಮಾಪಕ ಆಂತರ್ಯ ಸತೀಶ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

ADVERTISEMENT

ನನ್ನ ಕುಟುಂಬವೇ ಕೃಷಿಕರ ಕುಟುಂಬ. ನನ್ನ ತಂದೆ ರೈತ. ನನಗೂ ಚಿಕ್ಕಂದಿನಿಂದಲೂ ವ್ಯವಸಾಯ ಮಾಡಿ ಅಭ್ಯಾಸವಿದೆ. ವ್ಯವಸಾಯ ವೃತ್ತಿಯಿಂದಲೇ ನನ್ನ ತಂದೆ ನಮ್ಮನೆಲ್ಲಾ ವಿದ್ಯಾವಂತರನಾಗಿ ಮಾಡಿದ್ದಾರೆ. ನನಗೆ ಮೊದಲಿನಿಂದಲೂ ರೈತರ ಕುರಿತು ಸಿನಿಮಾ ಮಾಡುವ ಆಸೆ. ನಿರ್ದೇಶಕ ರಾಜೇಂದ್ರ ಕೊಣಿದೆಲ ಅವರು ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಜೊತೆಗೆ ಪ್ರಮುಖ ಪಾತ್ರವನ್ನು ಕೂಡ ಮಾಡಿದ್ದೇನೆ. ಸದ್ಯದಲ್ಲೇ ನಮ್ಮ ಚಿತ್ರ ಬಿಡುಗಡೆಯಾಗಲಿದೆ‌ ನೋಡಿ ಪ್ರೋತ್ಸಾಹಿಸಿ ಎಂದರು ನಿರ್ಮಾಪಕ ಹಾಗೂ ನಟ ಡಾ||ಅಮರನಾಥ ರೆಡ್ಡಿ ವಿ.

ತೆಲುಗು ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕ , ನೃತ್ಯ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿರುವ ನನಗೆ ಇದು ಮೊದಲ ಚಿತ್ರ ಎಂದು ಮಾತು ಆರಂಭಿಸಿದ ನಿರ್ದೇಶಕ ರಾಜೇಂದ್ರ ಕೊಣದೆಲ, ರೈತನ ಕುರಿತು ಸಾಕಷ್ಟು ಚಿತ್ರಗಳು ಬಂದಿದೆ. ಆದರೆ ನಮ್ಮ ಚಿತ್ರದಲ್ಲಿ ರೈತ ಹೆಚ್ಚಿನ ಬಡ್ಡಿಗೆ ಸಾಲ ಮಾಡಬಾರದು. ಸರ್ಕಾರ ಬ್ಯಾಂಕ್ ನಿಂದ ನೀಡುವ ಸಾಲವನ್ನೇ ಪಡೆಯಬೇಕು. ಸರ್ಕಾರದ ಸವಲತ್ತುಗಳನ್ನು ಬಳಸಿಕೊಳ್ಳಬೇಕು ಹೀಗೆ ಅನೇಕ ಉಪಯುಕ್ತ ಮಾಹಿತಿಗಳನ್ನು ನೀಡಿದ್ದೇವೆ. ಒಬ್ಬ ರೈತ ಇಂತಹ ಅನೇಕ ವಿಷಯಗಳನ್ನು ತಿಳಿದು ವ್ಯವಸಾಯ ಮಾಡಿದಾಗ “ಆದರ್ಶ ರೈತ” ಆಗುತ್ತಾನೆ ಎಂಬುದೆ ಚಿತ್ರದ ಕಥಾಹಂದರ ಎನ್ನುತ್ತಾರೆ.

ಕಲಾವಿದರಾದ ರೇಖಾ ದಾಸ್, ಸಿದ್ಧಾರ್ಥ್, ಮೈಸೂರು ಸುಜಾತ, ಸೂಫಿಯಾ, ಖುಷಿ ಮೆಹ್ತಾ, ಸಂಗೀತ, ಎಂ.ವಿ.ಸುರೇಶ್ ಹಾಗೂ ಚಿತ್ರಕ್ಕೆ ಸಂಗೀತ ನೀಡಿರುವ ಮುರಳಿಧರ್ ನಾವಡ, ಸಾಹಸ ನಿರ್ದೇಶಕ ಕೌರವ ವೆಂಕಟೇಶ್ ಮುಂತಾದವರು “ಆದರ್ಶ ರೈತ” ಚಿತ್ರದ ಕುರಿತು ಮಾತನಾಡಿದರು.

Tags: kannada new movieKFIsandalwood
Previous Post

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಭೇಟಿ ಮಾಡಿದ ಸಹಾಯಕ ಪ್ರಾಧ್ಯಪಕರ ಬಳಗ

Next Post

ಬಿಜೆಪಿ ಪರಿವಾರದವರು ಮಹಾತ್ಮ ಗಾಂಧಿಯನ್ನು ಹತ್ಯೆಗೈದವರ ವಂಶಸ್ಥರು ; ಸಿಎಂ ಸಿದ್ದರಾಮಯ್ಯ

Related Posts

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!
Top Story

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

by ಪ್ರತಿಧ್ವನಿ
July 25, 2026
0

ಬೆಂಗಳೂರು : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಸ್ಥಾನಕ್ಕೆ ಕರ್ನಾಟಕದ ಸಂಸದ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ...

Read moreDetails
30 ದಿನಗಳು..50ಕ್ಕೂ ಹೆಚ್ಚು ನಿರ್ಧಾರಗಳು: ಹೇಗಿತ್ತು ಡಿ.ಕೆ ಶಿವಕುಮಾರ್ ಸರ್ಕಾರದ ಮೊದಲ ತಿಂಗಳು..?

ಪಶ್ನೆ ಪತ್ರಿಕೆ ಸೋರಿಕೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ: ಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ

July 25, 2026
ʼನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು’: ಅಭಿಜಿತ್ ದೀಪ್ಕೆ ತಾಯಿ ಭಾವುಕ ಮಾತು

ʼನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು’: ಅಭಿಜಿತ್ ದೀಪ್ಕೆ ತಾಯಿ ಭಾವುಕ ಮಾತು

July 25, 2026
ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಇದು ಬೆಸ್ಟ್ ನ್ಯೂಸ್ ಅಂದ್ರು ರಮ್ಯಾ!

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಇದು ಬೆಸ್ಟ್ ನ್ಯೂಸ್ ಅಂದ್ರು ರಮ್ಯಾ!

July 25, 2026
BREAKING: ಪ್ರತಿಭಟನೆ ಅಂತ್ಯ: ಸಿಜೆಪಿ ವಕ್ತಾರ ಸೌರವ್‌ ದಾಸ್ ಮಹತ್ವದ ಘೋಷಣೆ

BREAKING: ಪ್ರತಿಭಟನೆ ಅಂತ್ಯ: ಸಿಜೆಪಿ ವಕ್ತಾರ ಸೌರವ್‌ ದಾಸ್ ಮಹತ್ವದ ಘೋಷಣೆ

July 25, 2026
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ ಪರಿವಾರದವರು ಮಹಾತ್ಮ ಗಾಂಧಿಯನ್ನು ಹತ್ಯೆಗೈದವರ ವಂಶಸ್ಥರು ; ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada