ಕಲ್ಕತ್ತಾ: 31 ವರ್ಷದ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ದಿನ ಕಳೆದಂತೆ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದು, ಇದೀಗ ಹಿಂಸಾರೂಪಕ್ಕೆ ತಿರುಗಿದೆ. ವೈದ್ಯೆಯ ಸಾವಿಗೆ ಕೋರಿ ನಡೆಸಲಾಗುತ್ತಿರುವ ‘ನಬನ್ನ ಅಭಿಜಾನ್’ ರ್‍ಯಾಲಿ ವೇಳೆ ಪ್ರತಿಭಟನಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಹೌರಾದ ಸಂತ್ರಗಚಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಘರ್ಷಣೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಆರ್.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರದ ನಡೆಯನ್ನು ಖಂಡಿಸಿ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ರಾಜೀನಾಮೆಗೆ ಒತ್ತಾಯಿಸಿ ವಿದ್ಯಾರ್ಥಿ ಸಂಘಟನೆಯಾದ ಪಶ್ಚಿಮ್ ಬಂಗಾ ಛತ್ರ ಸಮಾಜ್, ರಾಜ್ಯ ಸರ್ಕಾರಿ ನೌಕರರ ಸಂಘಟನೆ ಸಂಗ್ರಾಮಿ ಜೌತ ಮಂಚ್ ನಬನ್ನ ಅಭಿಜಾನ್ಗೆ ಕರೆ ನೀಡಿದ್ದವು.
ಪ್ರತಿಭಟನಾ ರ್‍ಯಾಲಿ ಹೌರಾ ಮೈದಾನ ತಲುಪುತ್ತಿದ್ದಂತೆ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್ಗಳನ್ನು ತಳ್ಳಿ ಪ್ರತಿಭಟನಾ ನಿರತರು ಮುನ್ನುಗಲು ಯತ್ನಿಸಿದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಕಾರರ ನಡುವೆ ಸಂಘರ್ಷ ಏರ್ಪಟ್ಟ ಪರಿಣಾಮ ಭದ್ರತಾ ಪಡೆಗಳ ಮೇಲೆ ಕಲ್ಲು ಹಾಗ ಇಟ್ಟಿಗೆಗಳನ್ನು ತೂರಲಾಗಿದೆ. ಈ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಆಶ್ರವಾಯು ಪ್ರಯೋಗಿಸಿದ್ದಾರೆ. ಇದಲ್ಲದೆ ಪೊಲೀಸರು ಲಾಠಿ ಚಾರ್ಜ್ ಕೂಡ ನಡೆಸಿದ್ದಾರೆ.
#WATCH | West Bengal: Protestors pelt stones as they agitate over RG Kar Medical College and Hospital rape-murder case.
— ANI (@ANI) August 27, 2024
Visuals near Fort William in Kolkata as Police and protestors come face to face. pic.twitter.com/TnIMXaDmBr
ಈ ಕುರಿತು ಮಾತನಾಡಿರುವ ಪ್ರತಿಭಟನಾನಿರತರೊಬ್ಬರು, ನಾವು ಯಾವುದೇ ರೀತಿಯ ಕಾನೂನನ್ನು ಉಲ್ಲಂಘಿಸಿಲ್ಲ. ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಲಿ. ಅದು ಬಿಟ್ಟು ಪೊಲೀಸರು ನಮ್ಮನ್ನು ಥಳಿಸುತ್ತಿರುವುದೇಕೆ ಎಂಬ ವಿಚಾರ ತಿಳಿಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
#WATCH | West Bengal: Police lob tear gas shells to disperse protestors as they agitate in Kolkata over RG Kar Medical College and Hospital rape-murder case.
— ANI (@ANI) August 27, 2024
Visuals near Fort William in Kolkata. pic.twitter.com/oMoUOu51Wh
ಇತ್ತ ಸಂಘರ್ಷದ ವಿಡಿಯೋ ವೈರಲ್ ಆಗುತ್ತಿದ್ದಂತೆ ಟಿಎಂಸಿ ಹಾಗೂ ಬಿಜೆಪಿ ನಡುವಿನ ವಾಕ್ಸಮರ ಕೂಡ ಜೋರಾಗಿದ್ದು, ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಇದು ಕಥಗನ್ನಡಿಯಾಗಿದೆ ಎಂದು ಬಿಜೆಪಿ ಕಿಡಿಕಾರಿದೆ. ಇದಕ್ಕೆ ಪ್ರತಿಯಾಗಿ ಮಾತನಾಡಿರುವ ಟಿಎಂಸಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವವರು ವಿದ್ಯಾರ್ಥಿಗಳಲ್ಲ ಎಂದು ಆರೋಪಿಸಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ದೂರು ನೀಡಿದೆ.