ನೆಲ್ಲೂರು ಜಿಲ್ಲೆಯ ಕಂದಕೂರ್’ನಲ್ಲಿ ಟಿಡಿಪಿ ಮುಖ್ಯಸ್ಥ ಅವರ ರೋಡ್ ಶೋ ವೇಳೆ ಕಾಲ್ತುಳಿತ ಉಂಟಾಗಿದ್ದು, 7ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಈ ಕಾಲ್ತುಳಿತದಲ್ಲಿ 7ಕ್ಕೂ ಹೆಚ್ಚು ಸಾವನ್ನಪ್ಪಿದ್ದರೇ, ಹಲವಾರು ಜನರು ಗಾಯಗೊಂಡಿದ್ದಾರೆ.
ಗಾಯಾಳುಳನ್ನ ಸಧ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಗತ್ಯ ಚಿಕಿತ್ಸೆ ನೀಡಲಾಗ್ತಿದೆ ಎನ್ನಲಾಗ್ತಿದೆ.
ವಾಸ್ತವವಾಗಿ, ಚಂದ್ರಬಾಬು ನಾಯ್ಡು ಬುಧವಾರ ಸಂಜೆ ಕಂದಕೂರಿನಲ್ಲಿ ಸಭೆ ನಡೆಸಿದರು. ಅದರಲ್ಲಿ ಕಾಲ್ತುಳಿತ ಸಂಭವಿಸಿತು ಮತ್ತು ಅನೇಕ ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ಆಸ್ಪತ್ರೆಗೆ ಸಾಗಿಸಲಾಯಿತು. ಅವರಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇನ್ನೂ 6 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.