• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬುಡಾದ 47 ನಿವೇಶನ ಹಂಚಿಕೆಗೆ ಹೈಕೋರ್ಟ್ ತಡೆ..!

ಪ್ರತಿಧ್ವನಿ by ಪ್ರತಿಧ್ವನಿ
March 19, 2023
in Top Story, ಇದೀಗ, ಕರ್ನಾಟಕ
0
ಬುಡಾದ 47 ನಿವೇಶನ ಹಂಚಿಕೆಗೆ ಹೈಕೋರ್ಟ್ ತಡೆ..!
Share on WhatsAppShare on FacebookShare on Telegram

ಬೀದರ್‌:ಮಾ.19: ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ 47 ನಿವೇಶನಗಳ ಹರಾಜು ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ವಿಧಾನ ಪರಿಷತ್‌ ಸದಸ್ಯ ಅರವಿಂದಕುಮಾರ ಅರಳಿ ತಿಳಿಸಿದರು. ಬುಡಾ ಅಧ್ಯಕ್ಷ ಹಾಗೂ ಆಯುಕ್ತ ಸೇರಿಕೊಂಡು ಕಡಿಮೆ ಬೆಲೆಯಲ್ಲಿ ನಿವೇಶನಗಳ ಮಾರಾಟ ಮಾಡಿ ಸರ್ಕಾರಕ್ಕೆ ಹಾನಿ ಉಂಟು ಮಾಡುತ್ತಿರುವ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗೆ ದೂರು ಸಲ್ಲಿಸಲಾಗುವುದು ಎಂದು ನಗರದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು. ನಗರದಲ್ಲಿನ 47 ನಿವೇಶನಗಳನ್ನು ಹಂಚಿಕೆ ಮಾಡಲು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ ಕಡಿಮೆ ಪ್ರಸರಣ ಸಂಖ್ಯೆ ಇರುವ ಪತ್ರಿಕೆಗಳಲ್ಲಿ ಮಾರ್ಚ್ 1ರಂದು ಜಾಹೀರಾತು ಪ್ರಕಟಿಸಿತ್ತು. ಮಾರ್ಚ್‌ 4ರಂದು ಇನ್ನೊಂದು ತಿದ್ದುಪಡಿ ಟೆಂಡರ್‌ ಪ್ರಕಟಿಸಿತ್ತು. ಅರ್ಜಿ ಸಲ್ಲಿಸಲು ಮಾರ್ಚ್ 28 ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ, ಟೆಂಡರ್ ಅಧಿಸೂಚನೆ ಪ್ರಕಟಗೊಂಡ ಮರು ದಿನವೇ ದಿನಾಂಕವನ್ನು ಮಾರ್ಚ್ 20ಕ್ಕೆ ನಿಗದಿಪಡಿಸಲಾಗಿತ್ತು ಎಂದು ತಿಳಿಸಿದರು.

ADVERTISEMENT

ಬುಡಾದ ನಿರ್ಧಾರದಿಂದಾಗಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿದವರಿಗೆ ತೊಂದರೆಯಾಗಿತ್ತು. ಹೀಗಾಗಿ ಬುಡಾ ಅಧ್ಯಕ್ಷ ಹಾಗೂ ಆಯುಕ್ತರ ವಿರುದ್ಧ ಕಲಬುರಗಿ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಬೇಕಾಯಿತು. ದಾಖಲೆಗಳನ್ನು ಪರಿಶೀಲಿಸಿದ ಹೈಕೋರ್ಟ್‌ ನಿವೇಶನ ಹಂಚಿಕೆಗೆ ತಡೆಯಾಜ್ಞೆ ನೀಡಿದೆ. ಹತ್ತು ದಿನಗಳಲ್ಲಿ ಉತ್ತರಿಸುವಂತೆ ಬುಡಾ ಅಧ್ಯಕ್ಷ ಹಾಗೂ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿದೆ ಎಂದು ಹೇಳಿದರು. ಕಡಿಮೆ ಹಣದಲ್ಲಿ ಪ್ರಭಾವಿ ರಾಜಕಾರಣಿಗಳ ಪತ್ನಿಯರು ಹಾಗೂ ಮನೆಗೆಲಸದವರ ಹೆಸರಿನಲ್ಲಿ ನಿವೇಶನ ಮಾರಾಟ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಬುಡಾದ ನಿವೇಶನಗಳನ್ನು ಕೇವಲ ₹ 4 ಲಕ್ಷದಿಂದ ₹ 5 ಲಕ್ಷಗೆ ಮಾರಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ ಹಾನಿ ಉಂಟು ಮಾಡಲಾಗುತ್ತಿತ್ತು. ಅಲ್ಲದೇ ಖರೀದಿದಾರರಿಂದ ಹೆಚ್ಚುವರಿ ಹಣ ಪಡೆದುಕೊಳ್ಳಲು ಹುನ್ನಾರ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ವಿವರಿಸಿದರು.


ವಾರ್ತಾ ಇಲಾಖೆಯ ಮೂಲಕವೇ ಜಾಹೀರಾತು ಕೊಟ್ಟು ವ್ಯವಸ್ಥಿತವಾಗಿ ಗೋಲ್‌ಮಾಲ್‌ ಮಾಡಲಾಗಿದೆ. ಒಂದು ರಾಜ್ಯ ಮಟ್ಟದ ಪತ್ರಿಕೆ ಹಾಗೂ ಎರಡು ಸ್ಥಳೀಯ ಪತ್ರಿಕೆಗಳಲ್ಲಿ ಜಾಹೀರಾತು ಕೊಡಬೇಕಿತ್ತು. ಉದ್ದೇಶ ಪೂರ್ವಕವಾಗಿಯೇ ಕಡಿಮೆ ಪ್ರಸರಣ ಇರುವ ಪತ್ರಿಕೆಯಲ್ಲಿ ಜಾಹೀರಾತು ಪ್ರಕಟಿಸಲಾಗಿದೆ. ಇದಕ್ಕೆ ಬುಡಾ ಅಧ್ಯಕ್ಷರೇ ಕಾರಣ ಎಂದು ಆರೋಪ ಮಾಡಿದರು. ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಯಾವುದೇ ವಿಷಯಗಳ ಚರ್ಚೆಯೇ ಆಗುವುದಿಲ್ಲ. ಸಭೆಯ ಆಡಿಯೊ, ವಿಡಿಯೊ ರೆಕಾರ್ಡ್‌ ಆಗುವುದಿಲ್ಲ. ಸಭೆ ಮುಗಿದ ಬಳಿಕ ತಮಗೆ ಅನುಕೂಲವಾಗುವ ರೀತಿಯಲ್ಲಿ ಗೊತ್ತುವಳಿ ಬರೆಯಲಾಗುತ್ತದೆ. ಗೊತ್ತುವಳಿ ಪ್ರತಿ ಕೇಳಿದರೆ ಆಯುಕ್ತರು ಅಧ್ಯಕ್ಷರ ಮನೆಯಲ್ಲಿ ಇದೆ ಎಂದು ಉತ್ತರಿಸುತ್ತಾರೆ. ಕಚೇರಿ ದಾಖಲೆಗಳು ಅಧ್ಯಕ್ಷರ ಮನೆಯಲ್ಲಿ ಏಕೆ ಇಡಬೇಕು. ಅಧಿಕಾರಿಗಳಿಗೆ ಹೊಣೆಗಾರಿಕೆ ಇಲ್ಲವೆ ಎಂದು ಪ್ರಶ್ನಿಸಿದರು. ಯಾವುದೇ ಸಭೆ ಕರೆಯುವ ಮೊದಲು ಅಜೆಂಡಾ ಕೊಡಬೇಕು. ಆದರೆ ಅಜೆಂಡಾದಲ್ಲಿ ಖಾಲಿ ನಿವೇಶನ ಮಾರಾಟ ಮಾಡುವ ವಿಷಯವೇ ಇರಲಿಲ್ಲ. ಆದರೂ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸುಳ್ಳು ದಾಖಲೆ ಸೃಷ್ಟಿಸಲಾಗಿದೆ ಎಂದರು. ಸಾರ್ವಜನಿಕರು ನನ್ನ ಗಮನಕ್ಕೆ ತಂದ ತಕ್ಷಣ ನಾನು ಹೈಕೋರ್ಟ್‌ ಮೊರೆ ಹೋಗಿ ಜನ ಸಾಮಾನ್ಯರಿಗೆ ತೊಂದರೆ ಆಗುವುದನ್ನು ತಡೆಯಲು ಪ್ರಯತ್ನಿಸಿದ್ದೇನೆ ಎಂದು ಹೇಳಿದರು.

Tags: BidarBidar UrbanBidar Urban Development AuthorityBJPbudaCommissionerCongress PartyCourt has stayedDevelopment Authoritylegislative councilnotificationUrban Development Departmentಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಕಾಲಿಕ ಮಳೆಯಿಂದ ಬೀದರ್ ಜಿಲ್ಲೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಬೆಳೆಗಳು ನೀರುಪಾಲು..! : Millions of Rupees Were Lost in Bidar District Due to Untimely rains

Next Post

ಅಭಿವೃದ್ಧಿಯ ಮಾರ್ಗವೂ ಕಾರ್ಪೋರೇಟ್ ಬಂಡವಾಳವೂ ಸಮಾಜದ ಮೇಲ್ವರ್ಗಕ್ಕೆ ಮಾತ್ರವೇ ನಿಲುಕುವ ಅಭಿವೃದ್ಧಿ ಮಾದರಿಗಳೇ ನವಉದಾರವಾದದ ಜೀವಾಳ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಅಭಿವೃದ್ಧಿಯ ಮಾರ್ಗವೂ ಕಾರ್ಪೋರೇಟ್ ಬಂಡವಾಳವೂ ಸಮಾಜದ ಮೇಲ್ವರ್ಗಕ್ಕೆ ಮಾತ್ರವೇ ನಿಲುಕುವ ಅಭಿವೃದ್ಧಿ ಮಾದರಿಗಳೇ ನವಉದಾರವಾದದ ಜೀವಾಳ

ಅಭಿವೃದ್ಧಿಯ ಮಾರ್ಗವೂ ಕಾರ್ಪೋರೇಟ್ ಬಂಡವಾಳವೂ ಸಮಾಜದ ಮೇಲ್ವರ್ಗಕ್ಕೆ ಮಾತ್ರವೇ ನಿಲುಕುವ ಅಭಿವೃದ್ಧಿ ಮಾದರಿಗಳೇ ನವಉದಾರವಾದದ ಜೀವಾಳ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada