ಮಂಗಳೂರು : ಹಿಂದುತ್ವದ ಭದ್ರಕೋಟೆ ಎನಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದೆ. ಮೊನ್ನೆ ನಡೆದ ಚುನಾವಣಾ ಫಲಿತಾಂಶದಲ್ಲಿ ಪುತ್ತೂರಿನಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಇದರಿಂದ ಆಕ್ರೋಶಗೊಂಡ ಹಿಂದೂ ಕಾರ್ಯಕರ್ತರು ಪುತ್ತೂರು ಬಸ್ ನಿಲ್ದಾಣದ ಬಳಿಯಲ್ಲಿ ಸದಾನಂದ ಗೌಡ ಹಾಗೂ ನಳೀನ್ ಕುಮಾರ್ ಕಟೀಲ್ ಶ್ರದ್ಧಾಂಜಲಿ ಫ್ಲೆಕ್ಸ್ ಹಾಕಿ ಚಪ್ಪಲಿ ಹಾರ ಹಾಕಿದ್ದಾರೆ.

ಇಷ್ಟು ದಿನಗಳ ಕಾಲ ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸದಾನಂದ ಗೌಡ ಬಹಿರಂಗವಾಗಿ ಆಕ್ರೋಶ ಹೊರಹಾಕುತ್ತಿದ್ದ ಕಾರ್ಯಕರ್ತರು ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ವಿಕೃತಿ ಮೆರೆದಿದ್ದಾರೆ .
ಪುತ್ತೂರಿನಲ್ಲಿ ಬಿಜೆಪಿ ಹೀನಾಯ ಸೋಲಿಗೆ ಕಾರಣರಾದ ನಳೀನ್ ಕುಮಾರ್ ಕಟೀಲ್ ಹಾಗೂ ಡಿವಿ ಸದಾನಂದ ಗೌಡರಿಗೆ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು ಚಪ್ಪಲಿ ಹಾರ ಹಾಕಿದ್ದಾರೆ.