ರಾಜ್ಯ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ 4 ವಿಧಾನಸಭೆ ಉಪಚುನಾವಣೆಗಳ ಫಲಿತಾಂಶ ಪ್ರಕಟವಾಗಿದ್ದು ಬರ್ದೊವಾಲಿ ವಿಧಾಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮುಖ್ಯಮಂತ್ರಿ ಮಾಣಿಕ್ ಸಾಹಾ 6 ಸಾವಿರ ಅಂತರದಲ್ಲಿ ಜಯ ಸಾಧಿಸುವ ಮೂಲಕ ತಮ್ಮ ಸ್ಥಾನವನ್ನ ಭದ್ರ ಪಡಿಸಿಕೊಂಡಿದ್ದಾರೆ.
ತ್ರಿಪುರಾದ ಅಗರ್ತಲಾ, ಜುಬ್ರಾಜ್ನಗರ, ಸುರ್ಮಾ ಹಾಗು ಬರ್ದೊವಾಲಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ನಾಲ್ಕು ಸ್ಥಾನಗಳ ಪೈಕಿ ಕಾಂಗ್ರೆಸ್ ಅಗರ್ತಲಾದಲ್ಲಿ ಗೆದಿದ್ದು ಮೂರು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ಕಳೆದ ತಿಂಗಳು ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಅಂದಿನ ಮುಖ್ಯಮಂತ್ರಿ ವಿಪ್ಲವ್ ದೇವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು ನಂತರ ರಾಜ್ಯಸಭಾ ಸದಸ್ಯ ಮಾಣಿಕ್ ಸಾಹಾರನ್ನು ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿತ್ತು.