ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸಲಿರುವ ತ್ರಿಪುರದಲ್ಲಿ ನಡೆದ ಧಿಡೀರ್ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲಬ್ ದೇವ್ ರಾಜೀನಾಮೆ ನೀಡಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿ ದೇವ್ ರಾಜೀನಾಮೆ ಪತ್ರ ಸಲ್ಲಿಸಿದರು. ಬಿಜೆಪಿಯೊಳಗಿನ ಆಂತರಿಕ ಬಂಡಾಯ ದಿಂದಾಗಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿರುವುದಾಗಿ ತಿಳಿದುಬಂದಿದೆ.