ಮಧ್ಯಪ್ರದೇಶ: ನಿಂತಿದ್ದ ಬಸ್’ಗಳಿಗೆ(Bus) ಟ್ರಕ್(Truck) ಢಿಕ್ಕಿ ಹೊಡೆದ ಪರಿಣಾಮ 14 ಮಂದಿ ಮೃತಪಟ್ಟು(14 Death), 50 ಮಂದಿ ಗಾಯಗೊಂಡಿರುವ(50 Injured) ಘಟನೆ ಮಧ್ಯ ಪ್ರದೇಶದ(Madya Pradesh) ರೇವಾ-ಸತ್ನಾ ಗಡಿಯ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಸತ್ನಾ ನಗರದಲ್ಲಿ ‘ಕೋಲ್ ಮಹಾಕುಂಭ’ದಲ್ಲಿ ಭಾಗಿಯಾಗಿ ಬರುತ್ತಿದ್ದ ಬಸ್ಸಿನಲ್ಲಿದ್ದ ಪ್ರಯಾಣಿಕರು ಆಹಾರಕ್ಕಾಗಿ ಬಸ್ಸನ್ನು ರಸ್ತೆ ಬದಿ ನಿಲ್ಲಿಸಿದ್ದರು. ಈ ವೇಳೆ ರೇವಾ ಕಡೆಯಿಂದ ವೇಗವಾಗಿ ಬಂದ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಮೂರು ಬಸ್ ಗಳಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಒಂದು ಬಸ್ ಕಂದಕಕ್ಕೆ ಉರುಳಿದ್ದು,14 ಮಂದಿ ಮೃತಪಟ್ಟಿದ್ದಾರೆ ಸುಮಾರು 50 ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ರೇವಾದ ಸಂಜಯ್ ಗಾಂಧಿ ಆಸ್ಪತ್ರೆ ಮತ್ತು ಸಿಧಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ ಗಳಿಗೆ ಹಿಂದಿನಿಂದ ಬಂದು ಟ್ರಕ್ ಢಿಕ್ಕಿ ಹೊಡೆದಿದೆ. ಟ್ರಕ್ ನ ಚಕ್ರಗಳು ಸಿಡಿದು ಹೋಗಿದ್ದರಿಂದ ಚಾಲಕ ನಿಯಂತ್ರಣ ಕಳೆದುಕೊಂಡು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸಂತಾಪ: ಅಪಘಾತದ ಬಗ್ಗೆ ಮುಖ್ಯಮಂತ್ರಿ(Chief Minister) ಶಿವರಾಜ್ ಸಿಂಗ್ ಚೌಹಾಣ್(Shivraj Singh Chouhan) ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್(Tweet) ಮಾಡಿರುವ ಅವರು, ಸಿದ್ದಿಯಲ್ಲಿ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದ ಬಗ್ಗೆ ಅತ್ಯಂತ ದುಃಖದ ಸುದ್ದಿ ಬಂದಿದೆ. ದೇವರು ಅಗಲಿದ ಆತ್ಮಗಳಿಗೆ ಅವರ ಪುಣ್ಯ ಪಾದದಲ್ಲಿ ಸ್ಥಾನ ನೀಡಲಿ ಮತ್ತು ಕುಟುಂಬ ಸದಸ್ಯರಿಗೆ ಈ ಆಳವಾದ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಪರಿಹಾರ ಘೋಷಣೆ: ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ಹಾಗೂ ಸಾಮಾನ್ಯ ಗಾಯಾಳುಗಳಿಗೆ 1 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ.












