• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸಿ:ರಾಜ್ಯದ ಜನರಿಗೆ ಸಿಎಂ ಕರೆ

Any Mind by Any Mind
November 1, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು : ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಿ, ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸುವ ಮೂಲಕ ಕನ್ನಡ ವಾತಾವರಣವನ್ನು ನಿರ್ಮಿಸಿ ಎಂದು ರಾಜ್ಯದ ಜನರಿಗೆಮುಖ್ಯ ಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕರೆ ನೀಡಿದರು.

ADVERTISEMENT

ಅವರು ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 69 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ -2024 ದಲ್ಲಿ ಭಾಗವಹಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕರ್ನಾಟಕ ರಾಜ್ಯ ಏಕೀಕರಣಗೊಂಡು 68 ವರ್ಷಗಳು ಕಳೆದಿವೆ.1953 ರಲ್ಲಿ ಫಜಲ್ ಅಲಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪುನರ್ವಿಂಗಡನಾ ಆಯೋಗ ರಚನೆಯಾಯಿತು. ಆಯೋಗದ ವರದಿಯನ್ನು ಆಧರಿಸಿ ರಾಜ್ಯಗಳ ಭಾಷಾವಾರು ವಿಂಗಡನೆಯಾಧರಿಸಿ, 1956ರ ನವೆಂಬರ್ 1 ರಂದು ರಾಜ್ಯ ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು.ಮಾಜಿ ಮುಖ್ಯಮಂತ್ರಿ, ದಿ.ದೇವರಾಜ ಅರಸು ಅವರ ಅವಧಿಯಲ್ಲಿ 1973ರ ನವೆಂಬರ್ 1 ರಂದು ಮೈಸೂರು ರಾಜ್ಯ , ಇಡೀ ರಾಜ್ಯವನ್ನು ಪ್ರತಿನಿಧಿಸುವ ಹೆಸರಾದ ಕರ್ನಾಟಕ ವೆಂದು ಮರುನಾಮಕರಣಗೊಂಡಿತು.

ಕರ್ನಾಟಕ ಹೆಸರು ನಾಮಕರಣಗೊಂಡು 50 ವರ್ಷಗಳು ಸಂದಿವೆ. ಈ ಸುವರ್ಣ ಸಂಭ್ರಮವನ್ನು ಬಿಜೆಪಿಸರ್ಕಾರ ಸಂಭ್ರಮಿಸಲಿಲ್ಲ. ಆದರೆ 2023ರ ನವೆಂಬರ್ 1 ರಂದು 51 ನೇ ವರ್ಷ ಎಂದು ಕರ್ನಾಟಕ ನಾಮಕರಣಗೊಂಡ ದಿನವೆಂದು ವರ್ಷಪೂರ್ತಿ ಆಚರಿಸಬೇಕೆಂದು ನಿರ್ಧರಿಸಲಾಯಿತು. ಕನ್ನಡ ನಾಡು, ನುಡಿ, ನೆಲ, ಜಲದ ಮಹತ್ವ ಪ್ರಚುರಪಡಿಸಲು ‘ಹೆಸರಾಯಿತು ಕರ್ನಾಟಕ , ಉಸಿರಾಯಿತು ಕನ್ನಡ’ ಎಂಬ ಘೋಷವಾಕ್ಯದಡಿ ಇಡೀ ವರ್ಷ ಕನ್ನಡವನ್ನು ಸಂಭ್ರಮಿಸಲಾಯಿತು ಎಂದರು.

ಭಾಷೆಯ ಬಗ್ಗೆ ದುರಭಿಮಾನ ಬೇಡ, ಅಭಿಮಾನಿಗಳಾಗಿ:ಮಾತೃಭಾಷೆ ಕನ್ನಡವನ್ನು ವ್ಯವಹಾರಿಕವಾಗಿ ಬಳಸುವ ಜೊತೆಗೆ ,ಇತರರೊಂದಿಗೆ ಕನ್ನಡದಲ್ಲಿಯೇ ಮಾತನಾಡುವಂತೆ ಶಪಥ ಮಾಡಬೇಕು.ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸಬೇಕು.ಕನ್ನಡ ರಾಜ್ಯದ ಅನ್ನ, ನೀರು, ಗಾಳಿ ಸೇವಿಸಿದ ಮೇಲೆ , ಯಾವುದೇ ಜಾತಿ, ಧರ್ಮ, ಭಾಷೆಯವರೂ ಕೂಡ ಕನ್ನಡಿಗರೇ ಆಗುತ್ತಾರೆ. ಕನ್ನಡ ಭಾಷೆಗೆ ಎರಡು ಸಾವಿರ ಇತಿಹಾಸವಿದ್ದು, ಬಹಳ ಪ್ರಾಚೀನ ಭಾಷೆಯಾಗಿದೆ.ಆದ್ದರಿಂದ ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರೆತಿದೆ. ಭಾಷೆಯನ್ನು ಬಲಿಕೊಟ್ಟು ಉದಾರಿಗಳಾಗಬಾರದು. ಭಾಷೆಯ ಬಗ್ಗೆ ದುರಾಭಿಮಾನ ಬೆಳೆಸಿಕೊಳ್ಳದೇ, ಅಭಿಮಾನಗಳಾಗಬೇಕು.

ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಿ . ಬೇರೆ ಭಾಷೆಯನ್ನು ಕಲಿಯಬೇಡಿ ಎಂದು ಹೇಳುವುದಿಲ್ಲ.ಬೇರೆ ಭಾಷಾ ಸಂಪತ್ತುನ್ನು ಬೆಳೆಸಿಕೊಳ್ಳಿ , ಆದರೆ ಕನ್ನಡದಲ್ಲಿ ಮಾತನಾಡುವುದನ್ನು ಮರೆಯಬೇಡಿ. ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದು ಉತ್ತಮವಾದುದು ಎಂದು ಮಹಾತ್ಮಾ ಗಾಂಧೀಯವರು ಹೇಳಿದ್ದಾರೆ ಎಂದರು.

ಕನ್ನಡ ಹಿಯ್ಯಾಳಿಸುವುದು ನಾಡದ್ರೋಹ – ಸರ್ಕಾರದಿಂದ ಕಠಿಣ ಕ್ರಮದ ಎಚ್ಚರಿಕೆ:

ಇಂದು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ , ಕನ್ನಡಿಗರನ್ನು ಹಿಯ್ಯಾಳಿಸುವ ಪ್ರವೃತ್ತಿಯು ಕಂಡುಬರುತ್ತಿದೆ. ಇದು ನಾಡದ್ರೋಹ ಎಂದು ಪರಿಗಣಿಸಿ, ಅಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದರು.

ಕೇಂದ್ರದ ಅನ್ಯಾಯದ ನಡುವೆಯೂ , ಕರ್ನಾಟಕದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ:ಕರ್ನಾಟಕ ರಾಜ್ಯ , ದೇಶದಲ್ಲಿ ಅತಿ ಹೆಚ್ಚು ತೆರಿಗೆ ನೀಡುವ ಎರಡನೇ ರಾಜ್ಯವಾಗಿದೆ. 4 ಲಕ್ಷ ಕೋಟಿಗೂ ಹೆಚ್ಚು ತೆರಿಗೆ ನೀಡಿದರೂ, ಕೇಂದ್ರದಿಂದ ದೊರೆಯುವ ತೆರಿಗೆ ಪಾಲು ಕೇವಲ 50-60 ಸಾವಿರ ಕೋಟಿ ಮಾತ್ರ.

ಕನ್ನಡ ನಾಡು ಮುಂದುವರೆದಿದೆ ಎಂದು ಕೇಂದ್ರ ಸರ್ಕಾರ ನಮಗೆ ಅನ್ಯಾಯವೆಸಗಬಾರದು. ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ತೆರಿಗೆ ಪಾಲನ್ನು ನೀಡಿ ಎಂದು ಕೇಂದ್ರಕ್ಕೆ ನಮ್ಮ ಬೇಡಿಕೆಗೆ ರಾಜಕೀಯ ಬಣ್ಣವನ್ನು ಬಳಿಯಲಾಗುತ್ತಿದೆ.ನಮ್ಮ ಹಕ್ಕಿಗೆ ಹೋರಾಡಬೇಕಾಗಿದೆ.ರಾಜ್ಯದ ಸಂಸದರು ಕೇಂದ್ರಕ್ಕೆ ಹೋಗಿದ್ದು, ಕೇಂದ್ರದಲ್ಲಿ ಕನ್ನಡಪರ ಧ್ವನಿ ಎತ್ತಬೇಕು. ಈ ಶಕ್ತಿಯನ್ನು ಆಯ್ಕೆಯಾಗಿ ಹೋದವರು ಬೆಳೆಸಿಕೊಂಡರೆ ರಾಜ್ಯಕ್ಕೆ ನ್ಯಾಯ ದೊರೆಯುತ್ತದೆ. ಕೇಂದ್ರದ ಅನ್ಯಾಯದ ನಡುವೆಯೂ , ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು.

ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು:ರಾಜ್ಯದಲ್ಲಿ ಪ್ರತಿ ದಿನ 57 ಲಕ್ಷ ಶಾಲಾ ಮಕ್ಕಳಿಗೆ ವಾರದ ಆರೂ ದಿನಗಳು ಮೊಟ್ಟೆ ಹಾಗೂ ಚಿಕ್ಕಿಯನ್ನು ನೀಡಲಾಗುತ್ತಿದೆ.ಮಕ್ಕಳಿಗೆ ಹಾಲಿನ ಜೊತೆ ಸಾಯಿಅನ್ನಪೂರ್ಣ ಅವರ ಸಹಯೋಗದೊಂದಿಗೆ ರಾಗಿಮಾಲ್ಟ್ ನ್ನೂ ನೀಡಲಾಗುತ್ತಿದೆ.ಬಡವರ ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು, ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬುದು ಸರ್ಕಾರದ ಉದ್ದೇಶ. ಇಂದು ಕನ್ನಡ ದೀವಿಗೆ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ ಎಂದರು.

Tags: BangaloreCM calls to the people of the stateCM Siddaramaiah‌Govt warns of strict actionKannada Devi today.Shaming of Kannada is treasonteach Kannada to non-Kannadas
Previous Post

ಲಿಫ್ಟ್‌ ಕೊಡುವ ಆಮಿಷ; ಚಲಿಸುವ ಕಾರಿನಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

Next Post

ಕನ್ನಡವನ್ನು ಬದುಕಿನ ಭಾಷೆ ಮಾಡಿಕೊಳ್ಳುವುದೇ ನಮ್ಮ ಗುರಿ:ಡಿಸಿಎಂ ಡಿ.ಕೆ. ಶಿವಕುಮಾರ್

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
Next Post

ಕನ್ನಡವನ್ನು ಬದುಕಿನ ಭಾಷೆ ಮಾಡಿಕೊಳ್ಳುವುದೇ ನಮ್ಮ ಗುರಿ:ಡಿಸಿಎಂ ಡಿ.ಕೆ. ಶಿವಕುಮಾರ್

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!