ಜೂನ್ ೫ರಂದು ನಡೆಯುವ ಯುಪಿಎಸ್ ಸಿ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ನಡೆಸಿಕೊಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹಾಗೂ ನಿರ್ದೇಶಕ ಟಿ.ಎಸ್. ನಾಗಾಭರಣ ಮನವಿ ಮಾಡಿದ್ದಾರೆ.
ಸಂವಿಧಾನದಲ್ಲಿ ಮಾನ್ಯತೆ ಪಡೆದ ಭಾಷೆಗಳಲ್ಲಿ ನಡೆಸಬಹುದಾಗಿದೆ. ಆದ್ದರಿಂದ ಯುಪಿಎಸ್ ಸಿ ಪೂರ್ವಭಾವಿ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಪ್ರಮುಖ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ನಡೆಸಿಕೊಡಬೇಕು ಎಂದು ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.