ಕಳೆದ ವಾರ ಸಾಮಾಜಿಕ ಜಾಲತಾಣಗಳಲ್ಲಿ ವಕೀಲೆ ಮೇಲೆ ಹೆಲ್ಲೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಘಿತ್ತು. ಇದೀಗ ಆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಮೊದಲು ಮಹಿಳೆಯ ಹಲ್ಲೆ ನಡೆಸಿದ್ದು ಎಂದು ತಿಳಿದು ಬಂದಿದೆ.
ಮೊದಲು ಸಂಗೀತಾ ಮಹಂತೇಶ್ ಎಂಬುವ ವ್ಯಕ್ತಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಕಾರಣ ಆತ ಮಹಿಳೆಯ ಮೇಲೆ ಹಲ್ಲೆ ನಡೆಸಿರುವುದು ಕಂಡು ಬಂದಿತ್ತು. ಪತ್ನಿ ಜಗಳವಾಡುವ ವೇಳೆ ಸಂಗೀತಾಳ ಪತಿ ವಿಡಿಯೋ ಮಾಡುವುದರಲ್ಲಿ ಮಗ್ನರಾಗಿದ್ದರು ಎಂದು ತಿಳಿದು ಬಂದಿದೆ.
ಕೇವಲ 8 ಸೆಕೆಂಡ್‌ಗಳ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಅನುಕಂಪ ಗಿಟ್ಟಿಸಿಕೊಳ್ಳಲು ಯತ್ನಿಸಲಾಗಿತ್ತು. ರಾಜ್ಯಾದ್ಯಂತ ಈ ವಿಡಿಯೋ ಸಾಕಷ್ಟು ವೈರಲ್ ಆಘಿತ್ತು ಮತ್ತು ಬವ್ಯಾಪಕವಾಗಿ ಖಂಡಿಸಲಾಗಿತ್ತು.

ಸೋಮವಾರ ಘಟನೆ ಸಂಬಂದ ಮಹಾಂತೇಶ್ ಕುಟುಂಬಸ್ಥರು ಜಿಲ್ಲಾಧಿಕಾರಿ ಹಾಗು ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದರು.
ಇತ್ತ ವಕೀಲೆ ಸಂಗೀತಾಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆಯನ್ನ ನಡೆಸಲಾಯಿತ್ತು.












