ರನ್ ಬರ ಎದುರಿಸುತ್ತಿದ್ದ ವಿರಾಟ್ ಕೊಹ್ಲಿ ಹಾಂಕಾಂಗ್ ವಿರುದ್ಧದ ಏಷ್ಯಾಕಪ್ ಟಿ-೨೦ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಫಾರ್ಮ್ ಗೆ ಮರಳಿದ್ದೂ ಅಲ್ಲದೇ ಬೌಲಿಂಗ್ ಮಾಡಿ ಅಚ್ಚರಿ ಮೂಡಿದ್ದಾರೆ.
ಯುಎಇನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬೌಲಿಂಗ್ ಮಾಡಿ ಗಮನ ಸೆಳೆದರು. ವಿಶೇಷ ಅಂದರೆ 6 ವರ್ಷಗಳ ನಂತರ ಮೊದಲ ಬಾರಿ ಬೌಲಿಂಗ್ ಮಾಡಿದ್ದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.
ಹಾಂಕಾಂಗ್ ವಿರುದ್ಧ 40 ರನ್ ಗಳಿಂದ ಜಯಭೇರಿ ಬಾರಿಸಿದ ಭಾರತ ಏಷ್ಯಾಕಪ್ನ ಸೂಪರ್ ಫೋರ್ ಹಂತಕ್ಕೆ ಭಾರತ ಪ್ರವೇಶ ಪಡೆಯಿತು. ಈ ಪಂದ್ಯದ 17ನೇ ಓವರ್ ಎಸೆದ ಕೊಹ್ಲಿ ಕೇವಲ 6 ರನ್ ನೀಡಿದರು.
ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಮಿಂಚಿನ ಬ್ಯಾಟಿಂಗ್ ನಡೆಸಿ ತಂಡ ಬೃಹತ್ ಮೊತ್ತ ದಾಖಲಿಸಲು ನೆರವಾದರು. ಇವರಿಬ್ಬರು ಮೂರನೇ ವಿಕೆಟ್ಗೆ ಅಜೇಯ 98 ರನ್ (42 ಎಸೆತ) ಜೊತೆಯಾಟವಾಡಿ ಬೃಹತ್ ಮೊತ್ತಕ್ಕೆ ಕಾರಣರಾದರು.
ವಿರಾಟ್ ಕೊಹ್ಲಿ ಅಜೇಯ 59 ರನ್ (44 ಎಸೆತ, 1 ಬೌಂಡರಿ, 3 ಸಿಕ್ಸ್) ಮತ್ತು ಸೂರ್ಯಕುಮಾರ್ ಯಾದವ್ 68 ರನ್ (26 ಎಸೆತ, 6 ಬೌಂಡರಿ, 6 ಸಿಕ್ಸ್) ಚಚ್ಚಿ ಅಬ್ಬರಿಸಿ ಬೊಬ್ಬಿರಿದರು. ಇದರ ಪರಿಣಾಮವಾಗಿ ನಿಗದಿತ ಓವರ್ಗಳಲ್ಲಿ ಭಾರತ 2 ವಿಕೆಟ್ ನಷ್ಟಕ್ಕೆ 192 ರನ್ಗಳ ಬೃಹತ್ ಮೊತ್ತ ಕಲೆಹಾಕಿತು.