• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ʼನಿಷ್ಟಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆʼ: ಪಕ್ಷಕ್ಕೆ ರಾಜಿನಾಮೆ ನೀಡಿದ ಉ.ಪ್ರ ಕಾಂಗ್ರೆಸ್ ನಾಯಕರು!

ಪ್ರತಿಧ್ವನಿ by ಪ್ರತಿಧ್ವನಿ
August 30, 2021
in ದೇಶ
0
ʼನಿಷ್ಟಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆʼ: ಪಕ್ಷಕ್ಕೆ ರಾಜಿನಾಮೆ ನೀಡಿದ ಉ.ಪ್ರ ಕಾಂಗ್ರೆಸ್ ನಾಯಕರು!

New Delhi, Aug 11 (ANI): AICC general secretary Priyanka Gandhi Vadra, Congress leader Rahul Gandhi and UPA Chairperson Sonia Gandhi during the condolence program for former Delhi Chief Minister Late Sheila Dikshit in New Delhi on Saturday. (ANI Photo)

Share on WhatsAppShare on FacebookShare on Telegram

ದೇಶದ ಹಳೆಯ ರಾಜಕೀಯ ಪಕ್ಷ ಕಾಂಗ್ರೆಸ್‌ಗೆ ತನ್ನ ನಾಯಕರನ್ನೇ ನಿಯಂತ್ರಣದಲ್ಲಿಟ್ಟುಕೊಳ್ಳಲು ಸೋಲುತ್ತಿದೆ. ಒಂದು ಕಡೆ ಪಕ್ಷ  ನಾಯಕತ್ವದ ಬಿಕ್ಕಟ್ಟು ಎದುರಿಸುತ್ತಿದ್ದರೆ, ಇನ್ನೊಂದೆಡೆ ಕಾಂಗ್ರೆಸ್‌ ನ ಹಲವು ನಾಯಕರು ತಮ್ಮನ್ನು ಬಿಜೆಪಿ ಮೊದಲಾದ ಪಕ್ಷಗಳಿಗೆ ಮಾರಿಕೊಳ್ಳುತ್ತಿದ್ದಾರೆ. ಸದ್ಯ, ಉತ್ತರ ಪ್ರದೇಶದ ಇಬ್ಬರು ಕಾಂಗ್ರೆಸ್‌ ನಾಯಕರು ʼತಮ್ಮನ್ನು ಪಕ್ಷ ಅಲಕ್ಷಿಸುತ್ತಿದೆʼ ಎಂದು ಹೇಳಿ ಪಕ್ಷದ ಪ್ರಾಥಮಿಕ ಸದಸ್ಯತ್ವ ತೊರೆದಿದ್ದಾರೆ.

ADVERTISEMENT

ಹಳೆಯ ಮತ್ತು ನಿಷ್ಠಾವಂತ ನಾಯಕರನ್ನು ಕಾಂಗ್ರೆಸ್ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಶೈಲೇಂದ್ರ ಸಿಂಗ್ ಮತ್ತು ರಾಜೇಶ್ ಸಿಂಗ್ ತಮ್ಮ ರಾಜೀನಾಮೆ ಪತ್ರವನ್ನು ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ಕುಮಾಲ್ ಲಲ್ಲು ಅವರಿಗೆ ಕಳುಹಿಸಿದ್ದಾರೆ.

ಅಜಯ್ ಕುಮಾಲ್ ಲಲ್ಲು

ಅಲ್ಲದೆ, ತಮ್ಮ ರಾಜಿನಾಮೆ ವಿಚಾರವನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಗಮನಕ್ಕೆ ತಂದಿರುವುದಾಗಿ ಉಭಯ ನಾಯಕರು ತಿಳಿಸಿದ್ದಾರೆ.

ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಶೈಲೇಂದ್ರ ಸಿಂಗ್, ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷರನ್ನು ಗುರಿಯಾಗಿಸಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಲಲ್ಲು ಅಧಿಕಾರ ವಹಿಸಿಕೊಂಡ ನಂತರ ನಿಷ್ಠಾವಂತ ಮತ್ತು ಹಿರಿಯ ಕಾಂಗ್ರೆಸ್ ಸದಸ್ಯರನ್ನು ನಿರ್ಲಕ್ಷಿಸಲಾಗಿದೆ. ಇದೇ ಕಾರಣಕ್ಕಾಗಿಯೇ ಸಮರ್ಥ ನಾಯಕರು ಪಕ್ಷವನ್ನು ತೊರೆಯುತ್ತಿದ್ದಾರೆ ಎಂದು ಾವರು ಆರೋಪಿಸಿದ್ದಾರೆ.

ಪಕ್ಷದ ಪರಿಸ್ಥಿತಿಯ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಗೆ ಹಲವು ಬಾರಿ ತಿಳಿಸಿದ್ದೇನೆ. ಆದರೆ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿ ದಿನಗಳಿಂದಲೂ ಕಾಂಗ್ರೆಸ್‌ನ ಸಕ್ರಿಯ ಸದಸ್ಯನಾಗಿರುವ ನಾನು, ಕಳೆದ 25 ವರ್ಷಗಳಿಂದ ಎನ್‌ಎಸ್‌ಯುಐ, ಯುವ ಕಾಂಗ್ರೆಸ್ ಮತ್ತು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದೇನೆ. ಎಐಸಿಸಿಯ ಚುನಾಯಿತ ಸದಸ್ಯನಾಗಿದ್ದೆ. ಆದರೆ ಕಾಂಗ್ರೆಸ್‌ನಲ್ಲಿ ಸದ್ಯದ ವಾತಾವರಣ ಮತ್ತು ಹಳೆಯ ಕಾಂಗ್ರೆಸ್ ಸದಸ್ಯರ ನಿರ್ಲಕ್ಷ್ಯದಿಂದಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೇಶ್ ಸಿಂಗ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಇಬ್ಬರು ನಾಯಕರು ಮಾಡಿರುವ ಆರೋಪಗಳು ಆಧಾರರಹಿತ ಎಂದು ತಳ್ಳಿ ಹಾಕಿರುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ರಾಘವೇಂದ್ರ ಪ್ರತಾಪ್ ಸಿಂಗ್, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಲಲ್ಲು ಅವರ ನಾಯಕತ್ವದಲ್ಲಿ ‘ನ್ಯಾಯ ಪಂಚಾಯತ್’ ಮತ್ತು ಬೂತ್ ಮಟ್ಟದಿಂದ ಕಾಂಗ್ರೆಸ್ ಅನ್ನು ಬಲಪಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

Tags: BJPINCPriyanka GandhiRahul GandhiSonia GandhiUttar Pradeshಕಾಂಗ್ರೆಸ್ಪ್ರಿಯಾಂಕಾ ಗಾಂಧಿರಾಜೇಶ್ ಸಿಂಗ್ರಾಹುಲ್ ಗಾಂಧಿಸೋನಿಯಾ ಗಾಂಧಿ
Previous Post

ಬಿಜೆಪಿ ಗೆಲ್ಲಿಸಿ ಕಳಿಸಿದಕ್ಕೆ ಈಗ ಹುಬ್ಬಳ್ಳಿ-ಧಾರವಾಡ ನಗರ ಗುಂಡಿಗಳ ನಗರವಾಗಿದೆ | KPCC |DK Shivakumar

Next Post

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಸ್ಥಳ ಮಹಜರು ನಡೆಸಲು ಆರೋಪಿಗಳನ್ನು ಕರೆ ತಂದ ಪೊಲೀಸರು

Related Posts

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!
Top Story

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು" ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ...

Read moreDetails
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
Next Post

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಸ್ಥಳ ಮಹಜರು ನಡೆಸಲು ಆರೋಪಿಗಳನ್ನು ಕರೆ ತಂದ ಪೊಲೀಸರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada