ತುಮಕೂರು : ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗುವಂತೆ ಕರ್ತವ್ಯಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಕಠಿಣ ಕ್ರಮ ಜರುಗಿಸಿದ್ದಾರೆ. ತುಮಕೂರಿನ ಪಂಚಾಯತ್ ರಾಜ್ ಕಾರ್ಯಪಾಲಕ ಇಂಜಿನಿಯರ್ ಎಸ್.ಆರ್ ಹರೀಶ್ ಹಾಗೂ ಯಾದಗಿರಿಯ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಕೆ. ಹಲಚೇರ ಎಂಬವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ತುಮಕೂರಿನ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ ವಿಳಂಬ ಧೋರಣೆ ಬೇಜವಾಬ್ದಾರಿತನ ಹಾಗೂ ಕರ್ತವ್ಯ ನಿರ್ಲಕ್ಷತೆಯಿಂದ ಸುಮಾರು ₹2.76 ಕೋಟಿ ರೂ. ನಷ್ಟಕ್ಕೆ ನೇರಾ ಕಾರಣವಾಗಿದ್ದ ಕಾರ್ಯಪಾಲಕ ಇಂಜಿನಿಯರ್ ಎಸ್.ಆರ್ ಹರೀಶ್ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಹಾಗೂಯಾದಗಿರಿಯ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದಲ್ಲಿ 41 ವಿವಿಧ ಕಾಮಗಾರಿಗಳಲ್ಲಿ ಕರ್ತವ್ಯಲೋಪವೆಸಗಿ ಸರ್ಕಾರಕ್ಕೆ ಒಟ್ಟು ₹1.3 ಕೋಟಿ ರೂ. ನಷ್ಟ ಮಾಡಿದ್ದ ಕಾರ್ಯಪಾಲಕ ಇಂಜಿನಿಯರ್ ಬಸವರಾಜ. ಕೆ .ಹಲಚೇರ ಸೇವೆಯಿಂದ ಅಮಾನತು ಮಾಡಲಾಗಿದೆ.
ಭ್ರಷ್ಟರಿಗೆ ಹಾಗೂ ಕರ್ತವ್ಯ ಲೋಪವೆಸಾಗುವವರಿಗೆ ತಮ್ಮ ಇಲಾಖೆಯಲ್ಲಿ ಯಾವುದೇ ಅವಕಾಶವಿಲ್ಲ ಎಂದು ಈ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.


