• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಒಂದೇ ದಿನ ಆರಂಭವಾಯಿತು ಹರಿ ಸಂತೋಷ್ ಸಾರಥ್ಯದ ಎರಡು ಚಿತ್ರಗಳು

ಪ್ರತಿಧ್ವನಿ by ಪ್ರತಿಧ್ವನಿ
November 18, 2024
in Uncategorized, ಇತರೆ / Others, ಕರ್ನಾಟಕ
0
ಒಂದೇ ದಿನ ಆರಂಭವಾಯಿತು ಹರಿ ಸಂತೋಷ್ ಸಾರಥ್ಯದ ಎರಡು ಚಿತ್ರಗಳು
Share on WhatsAppShare on FacebookShare on Telegram

“ಅಲೆಮಾರಿ” ಚಿತ್ರದೊಂದಿಗೆ ನಿರ್ದೇಶಕನಾಗಿ ಸಿನಿ ಜರ್ನಿ ಆರಂಭಿಸಿ, ಇಲ್ಲಿಯವರೆಗೂ ಹತ್ತು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಹರಿ ಸಂತೋಷ್, ಸಾರಥ್ಯದ ಎರಡು ಚಿತ್ರಗಳ ಆರಂಭೋತ್ಸವ ಕಾರ್ತಿಕ ಸೋಮವಾರದ ಶುಭದಿನದಂದು ನೆರವೇರಿತು. ಕೆ.ವಿ.ಎನ್ ಪ್ರೊಡಕ್ಷನ್ಸ್ ಮುಖ್ಯಸ್ಥರಾದ ವೆಂಕಟ್ ನಾರಾಯಣ್ ಹಾಗೂ ರವಿಕುಮಾರ್ ಪೋಸ್ಟರ್ ಅನಾವರಣ ‌ಮಾಡುವ ಮೂಲಕ ನೂತನ ಚಿತ್ರಗಳಿಗೆ ಚಾಲನೆ ನೀಡಿದರು. ಡಿ.ಎಸ್ ಮ್ಯಾಕ್ಸ್ ನ ದಯಾನಂದ್ ಸೇರಿದಂತೆ ಹಲವು ಗಣ್ಯರು ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಎರಡು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ADVERTISEMENT

ಮೊದಲು “ಡಿಸ್ಕೋ” ತಂಡದ ಸದಸ್ಯರು ಮಾತನಾಡಿದರು,

“ಡಿಸ್ಕೋ” ಇದು ನಾಯಕನ ಅಡ್ಡ ಹೆಸರು ಎಂದು ಮಾತು ಆರಂಭಿಸಿದ ನಿರ್ದೇಶಕ ಹರಿ ಸಂತೋಷ್, ವಿಕ್ಕಿ ವರುಣ್ ಈ ಚಿತ್ರದ ನಾಯಕ. ನನ್ನ ಹಾಗೂ ವಿಕ್ಕಿ ವರಣ್ ಕಾಂಬಿನೇಶನ್ ನಲ್ಲಿ “ಕಾಲೇಜ್ ಕುಮಾರ” ಚಿತ್ರದ ನಂತರ ಈ ಚಿತ್ರ ಮೂಡಿಬರುತ್ತಿದೆ. ಇದೊಂದು ಹಳ್ಳಿಯಲ್ಲಿ ನಡೆಯುವ ಕಥೆ. ನಮ್ಮ ಪೆನ್ ಎನ್ ಪೇಪರ್ ಸ್ಟುಡಿಯೋಸ್ ಹಾಗೂ ಕಲ್ಲೂರ್ ಸಿನಿಮಾಸ್ ಬ್ಯನಾರ್ ನಲ್ಲಿ ಈ ಚಿತ್ರ ಮೂಡಿ ಬರುತ್ತಿದೆ. ಪ್ರಶಾಂತ್ ಕಲ್ಲೂರ್ ಹಾಗೂ ಹರೀಶ್ ಅವರು ನಿರ್ಮಾಣಕ್ಕೆ ಸಾಥ್ ನೀಡಿದ್ದಾರೆ. ಧ್ರುವ್ ಸಂಗೀತ ನೀಡಲಿದ್ದಾರೆ‌. ಇಂದು ಚಿತ್ರಕ್ಕೆ ಚಾಲನೆ ನೀಡಿದ ಗಣ್ಯರಿಗೆ ಧನ್ಯವಾದ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ಹೇಳಿದರು.

ಇದು ನಾನು ನಾಯಕನಾಗಿ ನಟಿಸುತ್ತಿರುವ ನಾಲ್ಕನೇ ಚಿತ್ರ. ಹಿಂದಿನ ಮೂರು ಚಿತ್ರಗಳೆ ಬೇರೆ ತರಹ.‌ ಇದೇ ಬೇರೆ ತರಹ.ನಾನು ಹೇಗೆ ಇದ್ದಿನೊ ಅದೇ ತರಹ ಪಾತ್ರ ಎನ್ನಬಹುದು.ಚಿತ್ರಕ್ಕೆ ನಾನೇ ಕಥೆ ಬರೆದಿದ್ದೇನೆ. ಇದು ಹಳ್ಳಿಯಿಂದ ಸಿಟಿಗೆ ಬಂದ ಹುಡುಗನ ಕಥೆ ಅಲ್ಲ. ಹಳ್ಳಿಯನ್ನೇ ಸಿಟಿ‌ ಮಾಡಲು ಹೊರಟ ಹುಡುಗನ ಕಥೆ. ಹರಿ ಸಂತೋಷ್ ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ ಎಂದರು ನಾಯಕ ವಿಕ್ಕಿ ವರುಣ್.

ಸಹ ನಿರ್ಮಾಪಕರಾದ ಪ್ರಶಾಂತ್ ಕಲ್ಲೂರ್, ಹರೀಶ್ ಹಾಗೂ ಸಂಗೀತ ನಿರ್ದೇಶಕ ಧ್ರುವ್ “ಡಿಸ್ಕೊ” ಚಿತ್ರದ ಬಗ್ಗೆ ಮಾತನಾಡಿದರು.

ಎರಡು ವರ್ಷಗಳಿಂದ ನಾವು ಹನ್ನೆರಡು ಜನ ಸ್ನೇಹಿತರು ಸೇರಿ “ಪೆನ್ ಎನ್ ಪೇಪರ್” ಸಂಸ್ಥೆ ಆರಂಭಿಸಿದ್ದೆವು.ಈ ಮೂಲಕ ಹಲವು ವೆಬ್ ಸಿರೀಸ್ ಗಳಿಗೆ ಹಾಗೂ ಕೆಲವು ಪ್ರೊಡಕ್ಷನ್ ಹೌಸ್ ಗಳಿಗೆ ಕಥೆ ಒದಗಿಸಿಕೊಟ್ಟಿದ್ದೇವೆ.ಈಗ ಇದೇ ತಂಡದಿಂದ ಮೊದಲ ಸಿನಿಮಾ ಮಾಡುತ್ತಿದ್ದೇವೆ. ಅದೇ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ “congratulations ಬ್ರದರ್”

ಈ ಚಿತ್ರದ ಕಥೆ ಬರೆಯಲು ಒಂದು ವರ್ಷವಾಯಿತು. ಮಾರ್ನಿಂಗ್ ಶೋ ಆಡಿಯನ್ಸ್ ನ ತಲೆಯಲ್ಲಿಟ್ಟಿಕೊಂಡು ಕಥೆ ಮಾಡಿದ್ದೇವೆ. ನನ್ನ ತಂಡದಲ್ಲಿರುವ ಪ್ರತಾಪ್ ಗಂಧರ್ವ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಕ್ಷಿತ್ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಪ್ರಶಾಂತ್ ಕಲ್ಲೂರ್ , ಹರೀಶ್ ಹಾಗೂ ರವಿಕುಮಾರ್ ನಿರ್ಮಾಣಕ್ಕೆ ಜೊತೆಯಾಗಿದ್ದಾರೆ‌. ಸಂಜನಾ ಈ ಚಿತ್ರದ ನಾಯಕಿ. ಅನುಷಾ ಎಂಬ ಹೊಸ ಹುಡುಗಿಯನ್ನು ಈ ಚಿತ್ರದ ಮೂಲಕ ಪರಿಚಯಿಸುತ್ತಿದ್ದೇವೆ. ರೊಮ್ಯಾಂಟಿಕ್ ಜಾನರ್ ನ ಈ ಚಿತ್ರಕ್ಕೆ ನಾನೇ ಕಥೆ ಬರೆದಿದ್ದೇನೆ. ಪ್ರತಾಪ್, ರಕ್ಷಿತ್ ಮುಂತಾದವರು ಚಿತ್ರಕಥೆ ರಚಿಸಿದ್ದಾರೆ ಎಂದು ಕಥೆಗಾರ ಹಾಗೂ ಕ್ರಿಯೇಟಿವ್ ಹೆಡ್ ಹರಿ ಸಂತೋಷ್ ತಿಳಿಸಿದರು.

ಹಲವು ಧಾರಾವಾಹಿಗಳಿಗೆ ಕೆಲಸ ಮಾಡಿರುವ ನನಗೆ ನಿರ್ದೇಶಕನಾಗಿ ಇದು ಮೊದಲ ಚಿತ್ರ. ನಮ್ಮ ತಂಡದ ಅನೇಕರಿಗೆ ಇದು ಹೊಸ ಹೆಜ್ಜೆ. ಸಾಮಾನ್ಯವಾಗಿ ಹೊಸ ಹೆಜ್ಜೆ ಅಷ್ಟು ಸುಲಭವಾಗಿರುವುದಿಲ್ಲ.‌ ಅದನ್ನು‌ ನಮಗೆ ಹರಿ ಸಂತೋಷ್ ಸುಲಭ ಮಾಡಿಕೊಟ್ಟಿದ್ದಾರೆ. ಹರಿ ಸಂತೋಷ್ ಅವರು ಹೇಳಿದ ಹಾಗೆ ಈ ಚಿತ್ರದ ಕಥೆ, ಚಿತ್ರಕಥೆ ರಚನೆಗೆ ವರ್ಷದ ಸಮಯ ಹಿಡಿಸಿದೆ.ನಮ್ಮ ಕಥೆ ಪೇಪರ್ ನಲ್ಲಿ ಈಗಾಗಲೇ ಗದ್ದಿದೆ.ಪ್ರೇಕ್ಷಕರು ಗೆಲ್ಲಿಸುತ್ತಾರೆಂಬ ನಂಬಿಕೆ ಇದೆ.ನಾಳೆಯಿಂದಲೇ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಪ್ರತಾಪ್ ಗಂಧರ್ವ ತಿಳಿಸಿದರು.

ಕಿರುತೆರೆ ಹಾಗೂ ನಾಟಕಗಳಲ್ಲಿ ನಟಿಸಿರುವ ನನಗೆ ಹಿರಿತೆರೆಯಲ್ಲಿ ನಾಯಕನಾಗಿ ಮೊದಲ ಚಿತ್ರ ಎಂದರು ನಾಯಕ ರಕ್ಷಿತ್ ನಾಗ್. ನಾಯಕಿ ಸಂಜನಾ, ನಟಿ ಅನೂಷ, ಸಂಗೀತ ನಿರ್ದೇಶಕ ಸೂರಜ್ ಜೋಯಿಸ್, ಛಾಯಾಗ್ರಾಹಕ ಗುರು, ಕಾರ್ಯಕಾರಿ ನಿರ್ಮಾಪಕ ಶ್ರೀಕಾಂತ್ ಮುಂತಾದವರು ಚಿತ್ರದ ಬಗ್ಗೆ ಮಾತನಾಡಿದರು.

ನಿರ್ಮಾಪಕರಾದ ಪ್ರಶಾಂತ್ ಕಲ್ಲೂರ್, ಹರೀಶ್ ಹಾಗೂ ರವಿಕುಮಾರ್ ಚಿತ್ರಕ್ಕೆ ಪ್ರೋತ್ಸಾಹ ನೀಡುವಂತೆ ಮನವಿ‌ ಮಾಡಿದರು.

Tags: Dayanandfilm "Alemari"films of SarthyaHari SanthoshHarish and Ravikumar.Heads of KVN ProductionsProducers Prashant KallurVenkat Narayan and Ravikumar
Previous Post

ಡಾರ್ಲಿಂಗ್ ಕೃಷ್ಣ ಅವರಿಂದ ಬಿಡುಗಡೆಯಾಯಿತು ಕೆಂಪೇಗೌಡ ಅಭಿನಯದ “ಕಟ್ಲೆ” ಸಿನಿಮಾದ ಮೊದಲ ಹಾಡು

Next Post

ಈ ವರ್ಷ ಸೌದಿ ಅರೇಬಿಯಾದಲ್ಲಿ101 ವಿದೇಶಿಗರಿಗೆ ಗಲ್ಲು ಶಿಕ್ಷೆ

Related Posts

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್
Top Story

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

by ಪ್ರತಿಧ್ವನಿ
May 25, 2026
0

ಚೆನೈ : ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಮೇಕೆದಾಟು ನೀರಾವರಿ ಯೋಜನೆಗೆ ತಮಿಳುನಾಡಿನ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಈ ಹಿಂದಿನ ಸರ್ಕಾರಗಳು ಇದರ ವಿರುದ್ಧ ನಿಲುವನ್ನು ಹೊಂದಿದ್ದವು, ಅದರಂತೆ...

Read moreDetails
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
Next Post

ಈ ವರ್ಷ ಸೌದಿ ಅರೇಬಿಯಾದಲ್ಲಿ101 ವಿದೇಶಿಗರಿಗೆ ಗಲ್ಲು ಶಿಕ್ಷೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada