ಚೆನ್ನೈ: ಬಾಲಕಿಯರ ಮೇಲೆ ಅತ್ಯಾಚಾರ (Rape) ಎಸಗಿದ ಆರೋಪದ ಆರೋಪದ ಹಿನ್ನೆಲೆಯಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ.
![](https://pratidhvani.com/wp-content/uploads/2022/11/753875-724420-rape-13-1024x576.jpg)
ಈ ಘಟನೆ ತಮಿಳುನಾಡಿನ (Tamil Nadu) ತಿರುಪ್ಪೂರ್ (Tiruppur) ಜಿಲ್ಲೆಯಲ್ಲಿ ನಡೆದಿದೆ. ಅತ್ಯಾಚಾರಕ್ಕೆ ಒಳಗಾದ ಬಾಲಕಿಯರು 13 ಮತ್ತು 17 ವರ್ಷದವರಾಗಿದ್ದಾರೆ. 17 ವರ್ಷದ ಬಾಲಕಿ ಗರ್ಭಿಣಿಯಾದ ನಂತರ ಈ ವಿಷಯ ಬೆಳಕಿಗೆ ಬಂದಿದೆ.
ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿ ಚಿಕ್ಕವಯಸ್ಸಿನಲ್ಲಿಯೇ ತನ್ನ ತಂದೆ- ತಾಯಿ ಕಳೆದುಕೊಂಡು ಚಿಕ್ಕಮ್ಮನ ಮನೆಯಲ್ಲಿ ವಾಸಿಸುತ್ತಿದ್ದಳು. ಶಾಲೆ ತೊರೆದು ಕೆಲಸಕ್ಕಾಗಿ ಹುಡುಕಾಡುತ್ತಿದ್ದಾಗ 15 ವರ್ಷದ ಬಾಲಕ ಆಕೆಯೊಂದಿಗೆ ಸ್ನೇಹ ಬೆಳೆಸಿದ್ದ. ನಂತರ ಕೆಲಸ ಕೊಡಿಸುವ ಆಮಿಷವೊಡ್ಡಿ ಸ್ನೇಹಿತರೊಂದಿಗೆ ಸೇರಿಕೊಂಡು ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.
![](https://pratidhvani.com/wp-content/uploads/2024/04/delhi-rape-case-1024x576.jpg)
ನಂತರ ಹಲವು ಬಾರಿ ಅತ್ಯಾಚಾರ ನಡೆಸಿದ್ದಾರೆ. 17 ವರ್ಷದ ಬಾಲಕಿ ಜೊತೆ 13 ವರ್ಷದ ಬಾಲಕಿಯೂ ಹೋಗಿದ್ದ ಸಂದರ್ಭದಲ್ಲಿ ಆಕೆಯ ಮೇಲೆಯೂ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ನಂತರ ಚಿಕ್ಕಮ್ಮನಿಗೆ ವಿಷಯ ತಿಳಿಸಿ, ದೂರು ದಾಖಲಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 6 ಜನರನ್ನು ಪೊಲೀಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.