ರಥೋತ್ಸವದ ವೇಳೆ ರಥದ ಚಕ್ರ ತುಂಡಾಗಿ ಭಕ್ತರ ಮೇಲೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಗಾಯಗೊಂಡಿರು ಘಟನೆ ತಮಿಳುನಾಡು ಗಡಿಭಾಗದ ಮಾದೇನಹಳ್ಳಿಯಲ್ಲಿ ನಡೆದಿದೆ.
ತಮಿಳುನಾಡು ಗಡಿಭಾಗದ ಮಾದೇನಹಳ್ಳಿಯಲ್ಲಿ ಪ್ರತಿ ವರ್ಷ ನಡೆಯುವ ಕಾಳಿಯಮ್ಮ ರಥೋತ್ಸವ ಈ ವರ್ಷವೂ ನಡೆಯಬೇಕಿತ್ತು. ಆದರೆ ಈ ವರ್ಷ 30 ಅಡಿ ಅಲಂಕೃತ ರಥವನ್ನು ದೇವಾಲಯದ ಸುತ್ತಮುತ್ತಲಿನ ಪ್ರಮುಖ ಬೀದಿಗಳಲ್ಲಿ ಎಳೆಯುವ ವೇಳೆ ರಥದ ಚಕ್ರ ತುಂಡಾಗಿ ಭಕ್ತರ ಮೇಲೆ ಬಿದ್ದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ದುರ್ದೈವಿಯನ್ನು ಸಿ. ಮನೋಹರನ್ (57) ಮತ್ತು ಜಿ. ಸರವಣನ್ (50) ಎಂದು ಗುರುತಿಸಲಾಗಿದೆ.

ರಥದ ಚಕ್ರದಡಿ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಘಟನೆಯಲ್ಲಿ ಗಾಯಗೊಂಡ ಮೂವರನ್ನು ಧರ್ಮಪುರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರೆ. ಸಾವನ್ನಪ್ಪಿರುವವವರ ಕುಟುಂಬಸ್ಥರಿಗೆ ತಮಿಳುನಾಡು ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.






