ಕಳೆದ ಹಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ರಾಜ್ಯದ ಜನ ತತ್ತರಿಸಿದ ಹಗಿದ್ದಾರೆ. ಇದರ ನಡುವೆಯೇ ಇನ್ನೂ ಎರಡು ದಿನಗಳ ಕಾಳ ರಾಜ್ಯಾದ್ಯಂತ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದ. ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮೀನುಗಾರರನ್ನು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಶನಿವಾರ ಮತ್ತು ಭಾನುವಾರ ವರುಣನ ಆರ್ಭಟ ಕೊಂಚ ಕಡಿಮೆಯಾಗಿತ್ತು. ಇನ್ನೂ ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಕೆಲವು ಭಾಗಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.