ಕೀಚಕರಿಬ್ಬರು 17 ವರ್ಷದ ಶಾಲಾ ಬಾಲಕಿ ಮೇಲೆ ಆ್ಯಸಿಡ್ ಎರಚಿ ವಿಕೃತಿ ಮೆರೆದಿರುವ ಘಟನೆ ಪಶ್ಚಿಮ ದೆಹಲಿಯ ಉತ್ತಮ್ನಗರದಲ್ಲಿ ನಡೆದಿದೆ.
ಬಾಲಕಿಯನ್ನ ಸದ್ಯ ಸಫದರ್ಗಂಜ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಒರ್ವ ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬೆಳ್ಳಗ್ಗೆ 7:30ರ ಸುಮಾರಿಗೆ ಬೈಕಿನಲ್ಲಿ ಬಂದ ಇಬ್ಬರು ಯುವಕರು ಅಪ್ರಾಪ್ತೆ ಮೇಲೆ ಆ್ಯಸಿಡ್ ಎರಚಿದ್ದು ಘಟನೆ ನಡೆದಾಗ ಸಂತ್ರಸ್ತೆಯ ಜೊತೆ ಅವರ ತಂಗಿ ಇದ್ದರು ಎಂದು ತಿಳಿದು ಬಂದಿದೆ. ಪೊಲೀಸರಿಗೆ 9 ಘಂಟೆ ಸುಮಾರಿಗೆ ಸ್ಥಳೀಯರು ವಿಷಯ ತಿಳಿಸಿದ್ದಾರೆ.
ಈಗಾಗಲೇ ಸಂತ್ರಸ್ತ ಬಾಲಕಿ ಪೊಲೀಸರ ಬಳಿ ತನ್ನ ಹೇಳಿಕೆಯನ್ನು ದಾಖಲಿಸಿದ್ದು ಶಂಕಿತರ ಹೆಸರನ್ನು ತಿಳಿಸಿರುವುದಾಗಿ ತಿಳಿದು ಬಂದಿದೆ.
ಘಟನೆ ಕುರಿತು ಟ್ವೀಟ್ ಮಾಡಿರುವ ದೆಹಲಿ ಮಹಿಳಾ ಹಕ್ಕುಗಳ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಕಲೆದ ಕೆಲ ವರ್ಷಗಳಿಂದ ದೇಶದಲ್ಲಿ ಆ್ಯಸಿಡ್ ಮಾರಾಟ ನಿಷೇಧಿಸುವಂತೆ ನಾವು ಹೋರಾಡುತ್ತಿದ್ದೇವೆ ಸರ್ಕಾರ ಈ ಬಗ್ಗೆ ಯಾವಾಗ ಕ್ರಮ ತೆಗೆದುಕೊಳ್ಳುತ್ತದೆ ಸಂತ್ರಸ್ತ ಬಾಲಕಿಗೆ ನಾವು ನ್ಯಾಯ ಕೊಡಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.