ಪಟ್ಟಣ ಹೊರವಲಯದ ಬೆಳಕೇರಾ ಕ್ರಾಸ್
ಬಳಿ ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ ಅಪ್ರಾಪ್ತ ಸೇರಿದಂತೆ
ಇಬ್ಬರು ಬೈಕ್ ಮೇಲೆ ತೆರಳುವಾಗ ನಿಯಂತ್ರಣ ತಪ್ಪಿ : ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ಸೋಮವಾರ ಸಾವಿಗೀಡಾಗಿದ್ದಾರೆ. ಐನಾಪುರ ಗ್ರಾಮದ ಕೈಫ್ (14) ಹಾಗೂ ಖಟಕ್ ಚಿಂಚೋಳಿ ಗ್ರಾಮದ ಸೈಯದ್ ಶಟೀಲ್ (18) ಎಂದು ಗುರುತಿಸಲಾಗಿದೆ. ಇಬ್ಬರು ರಕ್ತ ಸಂಬಂಧಿಗಳಾಗಿದ್ದು, ಪಟ್ಟಣದ ಕಲ್ಯಾಣ ಮಂಟಪದಲ್ಲಿದ್ದ ಮದುವೆಗೆ ಬಂದು ಬೈಕ್ ಮೇಲೆ ಪಟ್ಟಣದ ಹೊರವಲಯಕ್ಕೆ ಹೋಗಿ ಮರಳಿ ಬರುವಾಗ ಮರಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ED ಪತ್ರದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನಂದ್ರು..!
https://youtu.be/WwK69A3RZbQ
Read moreDetails