ರಾಜಸ್ಥಾನದ ಉದಯಪುರದಲ್ಲಿ ನಡುಹಗಲಿನಲ್ಲೇ ವ್ಯಕ್ತಿಯೋರ್ವರನ್ನು ಅಮಾನುಷವಾಗಿ ಕತ್ತು ಕಡಿದು ಹತ್ಯೆ ಮಾಡಿದ ಘಟನೆಯ ಹಿನ್ನೆಲೆ ಕೋಮು ಗಲಭೆ ಸೃಷ್ಟಿಯಾಗುವ ಸಾಧ್ಯತೆ ಇರುವುದರಿಂದ ಉದಯ್ಪುರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಉದಯ್ಪುರದಲ್ಲಿ ಸೆಕ್ಷನ್ 144 ಜಾರಿ ಮಾಡಿ, ಇಂಟರ್ನೆಟ್ ಬಂದ್ ಮಾಡಲಾಗಿದೆ.
ರಾಜಸ್ಥಾನದ ಉದಯಪುರದಲ್ಲಿ ನಡುಹಗಲಿನಲ್ಲೇ ವ್ಯಕ್ತಿಯೋರ್ವರನ್ನು ಅಮಾನುಷವಾಗಿ ಕತ್ತು ಕಡಿದು ಹತ್ಯೆ ಮಾಡಿದ ಘಟನೆಗೆ ದೇಶವೇ ಬೆಚ್ಚಿ ಬಿದ್ದಿದೆ. ಕನ್ಹಯ್ಯಾ ಲಾಲ್ ಎಂಬಾತನ ಟೈಲರ್ ಅಂಗಡಿಗೆ ಆಗಮಿಸಿದ ಮಹಮ್ಮದ್ ರಿಯಾಜ್ ಅಖ್ತಾರಿ ಮತ್ತು ಮಹಮ್ಮದ್ ಬಟ್ಟೆಹೊಲೆಸುವ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಅಂಗಿಯ ಅಳತೆಯನ್ನು ಕನ್ಹಯ್ಯಾ ಲಾಲ್ ತೆಗೆದುಕೊಳ್ಳುವ ವೇಳೆ ಏಕಾಏಕಿ ದೊಡ್ಡ ಆಯುಧವೊಂದನ್ನು ಹೊರತೆಗೆದ ರಿಯಾಜ್ ಕತ್ತು ಕತ್ತರಿಸಿ ಹಾಕಿದ್ದಾನೆ. ಈ ಇಡೀ ಘಟನಾವಳಿಗಳನ್ನು ಮೊಹಮ್ಮದ್ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾನೆ. ಬಳಿಕ ಇಬ್ಬರೂ ಅಲ್ಲಿಂದ ಪರಾರಿಯಾಗಿದ್ದಾರೆ.
ಇದಾದ ಕೆಲ ಹೊತ್ತಿನಲ್ಲೇ ಜಾಲತಾಣದಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ ಧರ್ಮಾಂಧರು, ಇಸ್ಲಾಂಗೆ ಮಾಡಿದ ಅವಮಾನಕ್ಕೆ ಸೇಡು ತೀರಿಸಿಕೊಳ್ಳಲು ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ್ದಾಗಿ ಘೋಷಣೆ ಮಾಡಿದ್ದಾರೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದು, ನಮ್ಮ ಕತ್ತಿ ಅವರನ್ನು ಬಲಿ ಪಡೆಯಲಿದೆ ಎಂದಿದ್ದಾರೆ.
ಘಟನೆಯ ಹಿನ್ನೆಲೆ ಕೋಮು ಗಲಭೆ ಸೃಷ್ಟಿಯಾಗುವ ಸಾಧ್ಯತೆ ಇರುವುದರಿಂದ ಉದಯ್ಪುರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಉದಯ್ಪುರದಲ್ಲಿ ಸೆಕ್ಷನ್ 144 ಜಾರಿ, ಇಂಟರ್ನೆಟ್ ಬಂದ್ ಮಾಡಲಾಗಿದೆ.

ಉದಯಪುರದಲ್ಲಾದ ಪ್ರಮುಖ ಬೆಳವಣಿಗೆ-
- ಹತ್ಯೆಯ ನಂತರ, ಪ್ರತಿಭಟನಾಕಾರರು ಹತ್ಯೆಯನ್ನು ಪ್ರತಿಭಟಿಸಲು ಬೀದಿಗಿಳಿದರು ತದನಂತರ ಪೊಲೀಸರು ನಗರದ ಏಳು ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಲಾಯ್ತು.
- ಜೂನ್ 28 ರಂದು ರಾತ್ರಿ 8 ಗಂಟೆಯಿಂದ ಅಧಿಕಾರಿಗಳ ಮುಂದಿನ ಸೂಚನೆಗಳವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ಸೇವೆಗಳಲ್ಲಿ ತೊಡಗಿರುವವರು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮತ್ತು ಪರೀಕ್ಷಾ ಪ್ರಕ್ರಿಯೆಯಲ್ಲಿ ತೊಡಗಿರುವ ಸಿಬ್ಬಂದಿಗೆ ವಿನಾಯಿತಿ ನೀಡಲಾಗುತ್ತದೆ.
- ಮುಂದಿನ 24 ಗಂಟೆಗಳ ಕಾಲ ಉದಯಪುರದಲ್ಲಿ ಮೊಬೈಲ್ ಇಂಟರ್ನೆಟ್ ಅನ್ನು ಅಧಿಕಾರಿಗಳು ಸ್ಥಗಿತಗೊಳಿಸಿದ್ದಾರೆ. ಜೈಪುರದಿಂದ ಇಬ್ಬರು ಎಡಿಜಿಪಿಗಳು, ಇನ್ನೂ ಒಬ್ಬರು ಎಸ್ಪಿ ಮತ್ತು 600 ಹೆಚ್ಚುವರಿ ಪೊಲೀಸ್ ಪಡೆಯನ್ನು ಉದಯಪುರಕ್ಕೆ ಕಳುಹಿಸಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆ ಹಾಳು ಮಾಡಿರುವವರನ್ನು ಬಿಡುವುದಿಲ್ಲ ಎಂದು ರಾಜಸ್ಥಾನ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. “ಉದಯ್ಪುರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಯಾವುದೇ ಅಪರಾಧಿಗಳನ್ನು ಬಿಡುವುದಿಲ್ಲ” ಎಂದು ರಾಜಸ್ಥಾನ ಪೊಲೀಸರು ಹೇಳಿದ್ದಾರೆ.










