ಚೆನ್ನೈ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಬಾಬರಿ ಮಸೀದಿ ಧ್ವಂಸ ಮಾಡಿದ್ದನ್ನು ಪಕ್ಷವು ಕ್ಷಮಿಸಿಲ್ಲ ಎಂದು ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
ಇದು ನನ್ನ ಅಜ್ಜ ಮತ್ತು ಐದು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ದಿವಂಗತ ಎಂ.ಕರುಣಾನಿಧಿ ಅವರ ನಿಲುವು ಎಂದು ಅವರು ಹೇಳಿದರು. ನಾವು ಯಾವುದೇ ನಂಬಿಕೆಗೆ ವಿರುದ್ಧವಾಗಿಲ್ಲ; ಅಯೋಧ್ಯೆಯಲ್ಲಿ ದೇವಸ್ಥಾನ ನಿರ್ಮಾಣದಿಂದ ನಮಗೆ ಸಮಸ್ಯೆ ಇಲ್ಲ. ಆದರೆ, ಮಸೀದಿ ಕೆಡವಿ ಮಂದಿರ ನಿರ್ಮಾಣಕ್ಕೆ ನಮ್ಮ ಸಹಮತವಿಲ್ಲ. ರಾಜಕೀಯದಲ್ಲಿ ಧರ್ಮ ಬೆರೆಸಬಾರದು ಎಂದು ತಿಳಿಸಿದ್ದಾರೆ. ಜನವರಿ 22ರ ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜಕೀಯಗೊಳಿಸುತ್ತಿದೆ ಎಂದು ಡಿಎಂಕೆ ಖಜಾಂಚಿ ಮತ್ತು ಸಂಸದೀಯ ಪಕ್ಷದ ನಾಯಕ ಟಿಆರ್ ಬಾಲು ಎರಡು ದಿನಗಳ ಹಿಂದೆ ಆರೋಪಿಸಿದ್ದರು. ಆಧ್ಯಾತ್ಮಿಕ ಘಟನೆಯನ್ನು ರಾಜಕೀಯವಾಗಿ ಪರಿವರ್ತಿಸುವ ಬಿಜೆಪಿಯ ಅಬ್ಬರದ ಪ್ರಯತ್ನವನ್ನು ಭಾರತದ ಜನರು ತಿರಸ್ಕರಿಸುತ್ತಾರೆ ಎಂದು ಹೇಳಿದ್ದರು.
ಸರ್ವಜ್ಞನಗರದಾದ್ಯಂತ ಹಲವಾರು ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಕೆಜೆ ಜಾರ್ಜ್.
ಈ ದಿನದ ಆರಂಭ ಹೆಣ್ಣೂರು ಬಂಡೆಯ ಶ್ರೀ ಬಂಡೆ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ. ನಂತರ ಮಾರುತಿ ಲೇಔಟ್, 36, 37 ಮತ್ತು 40 ನೇ ಕ್ರಾಸ್,...
Read more