ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗಲೆ ಯನ್ನು ಡಿಸೆಂಬರ್ 5 ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯ ಆದೇಶಿಸಿದೆ.
ಈ ಮೊದಲು ಪೊಲೀಸರು ನವೆಂಬರ್ 28 ರವರೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರೂ ಮಹಜರು ಪ್ರಕ್ರಿಕೆ ಪೂರ್ಣಗೊಂಡಿರುವ ಕಾರಣ ಮುಂಚಿತವಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈಗ ವಿಚಾರಣೆ ಮುಗಿಸಿ ಆರೋಪಿಯನ್ನು ಮಲ್ಪೆ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

ನವೆಂಬರ್ 12ರಂದು ನೇಜಾರಿನ ತೃಪ್ತಿ ಲೇಔಟ್ ನಲ್ಲಿರುವ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿರುವ ನೂರ್ ಮೊಹಮ್ಮದ್ ಅವರ ಮನೆಗೆ ನುಗ್ಗಿ ಅವರ ಪತ್ನಿ ಹಸೀನಾ (48), ಪುತ್ರಿಯರಾದ ಅಫ್ನಾನ್ (23), ಅಯ್ನಾಝ್ (21), ಪುತ್ರ ಅಸೀಮ್ (14) ಹತ್ಯೆಗೀಡಾಗಿದ್ದರು.